ಬ್ಲಾಗ್ ಬೀಟ್ 20

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

……………………………………………………

ಟೂನಂಗಡಿ 001

ಟೂನಂಗಡಿ ತೆರೆದು ಕೂತಿರುವ ಅಮೃತ್.ವಿ ಉದಯವಾಣಿಯಲ್ಲಿ ಪ್ರಕಟವಾದ ತಮ್ಮ ಕಾರ್ಟೂನುಗಳಲ್ಲಿ ಕೆಲವನ್ನು ಬ್ಲಾಗಿಗೆ ಹಾಕಿರುವುದು ಬೀಟ್ ಹೊರಟ ಸಾಮ್ರಾಟರ ಕಣ್ಣಿಗೆ ಬಿತ್ತು. ಹಾಗೆ ಕಣ್ಣಿಗೆ ಬಿದ್ದದ್ದನ್ನು  ಸಾವಕಾಶವಾಗಿ ಹೊರಗೆ ತೆಗೆದು ಅವರು ಇಲ್ಲಿ ಹಾಕಿದ್ದಾರೆ.

ಪಂಚ್ ಲೈನು

ಹುಡುಗಿಯರ ವಿಷಯದಲ್ಲೂ ರಾಜಕಾರಣದಲ್ಲೂ ತಲಾ ಒಂದೊಂದಾಗಿ ಪಿ.ಎಚ್.ಡಿ ಮಾಡುತ್ತಿರುವಂತೆ ಕಾಣುವ ಪಂಚ್ ಲೈನ್ ಗಣೇಶರು ಹುಡುಗಿಯರ ಮನಸ್ಸು ಗೆಲ್ಲೋದು ಚುನಾವಣೆ ಗೆಲ್ಲೋದೂ ಆಲ್ಮೋಸ್ಟ್ ಸೇಮ್ ಅಂತಾರೆ. ಹೇಗೆ ಅಂದ್ರಾ? ಇಲ್ ನೋಡಿ…

ಪುಗಸಟ್ಟೆ

ರಾಜಕೀಯದಲ್ಲಿನ ಎಡದ ಬಲ ಹಾಗೂ ಬಲದ ಎಡದ ಸುಳಿಯಲ್ಲಿ ಪುಗಸಟ್ಟೆ ಉಪದೇಶ ಕೊಡುವ ಬ್ಲಾಗಿಗರು ಒಂದು ಗಂಭೀರ ಪ್ರಶ್ನೆ ಕೇಳಿದ್ದಾರೆ. ‘ಈ ಘಟನೆ’ ಭಾರತದಲ್ಲಿ ನಡೆಯುವುದು ಯಾವಾಗ ಎಂಬುದು ಅವರ ಪ್ರಶ್ನೆ. ಇದಕ್ಕೆ ಉತ್ತರಿಸಬೇಕಾದಾವರು, ಮಾತನಾಡದೆ ಮಾಡಿ ತೋರಿಸುವವರನ್ನು ಹುಡುಕಿ ನಮ್ಮ ಚೇಲ ದೇಶಾಂತರ ಹೊರಟಿದ್ದಾನೆ.

ಬೊಗಳೆ

ಅಶಿಕ್ಷಿತರು, ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದವರೇ ತುಂಬಿ ಹೋಗಿರುವ ರಾಜಕೀಯ ರಂಗಕ್ಕೆ ಸುಶಿಕ್ಷಿತರು ಧುಮುಕುತ್ತಿರುವ ವಿದ್ಯಮಾನದ ಸಮಗ್ರ ವರದಿಯನ್ನು ಬೊಗಳೆ ಬ್ಯೂರೋ ಪ್ರಕಟಿಸಿದೆ. ಮಾನವಿಲ್ಲದ ದಂಡ ಪಿಂಡಗಳಾದ ರಾಜಕಾರಣಿಗಳಿಗೆ ಮಾನದಂಡವನ್ನು ವಿಧಿಸುವ ಮಹೋನ್ನತ ಕಾರ್ಯಕ್ಕೆ ಕೈ ಹಾಕಿದೆ. ಅವರ ಸಾಹಸಕ್ಕೆ ಸಂತಾಪ ಸೂಚಿಸುತ್ತಾ ನಾವು ಅಲ್ಲಿಂದ ಪರಾರಿಯಾಗಿದ್ದೇವೆ.

ಮೋಟುಗೋಡೆ

ಇರುವ ಮೋಟು ಗೋಡೆಯನ್ನು ಎಗರಿ ಎಗರಿ ಜಿರಾಫೆಯಂತೆ ಎತ್ತರವಾಗಿರುವ ಮೋಟುಗೋಡೆ ಬಳಗ ಕಂಪ್ಯೂಟರ್ ಕರ್ಮಕಾಂಡವನ್ನು ವರದಿ ಮಾಡಿದೆ. ರಿಸೆಷನ್ ಸಮಯದಲ್ಲಿ ಎಲ್ಲರನ್ನೂ ಕಾಡುತ್ತಿರುವ ಕಂಪ್ಯೂಟರ್ ಕರ್ಮ ಕಾಂಡವಲ್ಲ ಇದು. ಇದು ಮೋಟುಗೋಡೆಯ ಸ್ಪೆಷಲ್ ‘ಡಿಕ್’ಆಕ್ಷನ್!

ಮಜಾವಾಣಿ

ಮಜಾವಾಣಿ ಪತ್ರಿಕೆ ಈಗ ಮೈತುಂಬಿಕೊಂಡು ನಿಂತಿದೆ. ಅಗ್ರ ರಾಷ್ಟ್ರೀಯ ವಾರ್ತೆಯಿಂದ ಹಿಡಿದು ವಿಶೇಷ ಸಂದರ್ಶನದವರೆಗೆ ಎಲ್ಲಾ ವಿಭಾಗಗಳಲ್ಲೂ ನೈಪುಣ್ಯತೆ ಮೆರೆದಿದೆ.

ಈ ಸಂಚಿಕೆಯಲ್ಲಿ ಹಿನ್ನೆಲೆ ಕೆಮ್ಮು ಕಲಾವಿದ ದಮ್ಮುಲ ಕೃಷ್ಣಪ್ಪನವರ ಅಪರೂಪದ ಸಂದರ್ಶವನ್ನು ಪ್ರಕಟಿಸಲಾಗಿದೆ. ಕೆಮ್ಮಾಭಿಮಾನಿಗಳು ಹಾಗೂ ದಮ್ಮಾಭಿಮಾನಿಗಳು ಅವಶ್ಯಕವಾಗಿ ಓದಲೇಬೇಕಾದ ಸಂದರ್ಶನವಿದು.

2 Responses to this post.

  1. ನಾವು ಎರಡು ಸಬ್ಜೆಕ್ಟುಗಳಲ್ಲಿ ಪರಿಣಿತಿ ಹೊಂದಲು ಪಿ.ಹೆಚ್.ಡಿ ಮಾಡುತ್ತಿರುವ ವಿಷಯವನ್ನ ಬಹಿರಂಗಪಡಿಸಿರಲಿಲ್ಲ. ಆದರೆ, ನಗೆ ಸಾಮ್ರಾಟರು ತಮ್ಮ ತನಿಖಾ ವರದಿಯಿಂದ ಜಗತ್ತಿಗೆ ಸಾರಿ, ನಾವು ಹೇಳಬೇಕಾದ ಅಗತ್ಯತೆಯನ್ನ ತಪ್ಪಿಸಿದ್ದಾರೆ. :-)

    ಧನ್ಯವಾದಗಳು.

    Reply

    • Posted by Nage samrat on May 29, 2009 at 8:00 pm

      ಗಣೇಶರೇ,
      ನಿಮ್ಮ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭಕ್ಕೆ ನಮ್ಮನ್ನು ಅತಿಥಿಯಾಗಿ ಕರೆಸಿದರೆ ನಾವು ನಮ್ಮ ನಗೆ ನಗಾರಿ ವಿವಿಯ ಪರವಾಗಿ ಮೂರನೆಯ ಡಾಕ್ಟರೇಟ್ ಕೊಡುತ್ತೇವೆ ಎಂದು ಆಶ್ವಾಸನೆ ನೀಡುತ್ತಿದ್ದೇವೆ.

      - ನಗೆ ಸಾಮ್ರಾಟ್

      Reply

Respond to this post