Archive for the ‘ಚರ್ಚೆ’ Category

ನಮ್ಮ ಸಿಲ್ಲಿತನದ ಬಗೆಗೊಂದು ಸಿಲ್ಲಿ ಚರ್ಚೆ!

ನಮ್ಮ ಕತೆ, ಕಾದಂಬರಿ, ಧಾರಾವಾಹಿಗಳು, ಸಿನೆಮಾಗಳಲ್ಲಿನ ಡೈಲಾಗುಗಳು ನಾನಾ ತೆರನಾಗಿರುತ್ತವೆ. ಒಂದು ಪಾತ್ರ ಇನ್ನೊಂದು ಪಾತ್ರದೊಂದಿಗೆ ನಡೆಸುವ ಮಾತುಕತೆಯೋ, ಒಂದು ಪಾತ್ರ ತನ್ನೊಂದಿಗೇ ಆಡಿಕೊಳ್ಳುವ ಮಾತುಗಳೋ, ಪಾತ್ರವೊಂದರ ಮನಸ್ಸಿನ ಹೊಯ್ದಾಟವೋ – ಹೀಗೆ ಒಟ್ಟಿನಲ್ಲಿ ಮಾತುಗಳು ಭಾರಿ ಪ್ರಮುಖವಾದ ಪಾತ್ರವನ್ನೇ ವಹಿಸುತ್ತವೆ. ಇಂತಹ ಡೈಲಾಗುಗಳು ಕೆಲವೊಮ್ಮೆ ಅದೆಷ್ಟು ಕೃತಕ ಅನ್ನಿಸುತ್ತವೆಯೆಂದರೆ, ಪ್ಲಾಸ್ಟಿಕ್ ಹೂವಿಗಾದರೂ ಇರುವ ಪ್ಲಾಸ್ಟಿಕಿನ ಸಹಜತೆಯೂ ಸಹ ಇವುಗಳಲ್ಲಿ ಕಾಣಸಿಗುವುದಿಲ್ಲ!
ಲೇಖನಗಳ, ಸಾಹಿತ್ಯೇತರ ಬರವಣಿಗೆಗಳ ಉದ್ದೇಶ ಒಂದು ವಿಷಯವನ್ನು, ಅನುಭವವನ್ನು ಆದಷ್ಟು ಸರಳವಾಗಿ ಓದಿಗರಿಗೆ ತಿಳಿಸುವುದು. [...]

Continue reading »

ಚರ್ಚೆ: ಡರ್ಟಿ ಜೋಕೆಂಬ ಬೇಲಿ ಹಾರುವ ಹುಮ್ಮಸ್ಸು!

 
ಕೆಲವು ಬಗೆಯ ಜೋಕುಗಳಿವೆ. ಅವುಗಳು ಸಾಮಾನ್ಯ ಜೋಕುಗಳಿಗಿಂತ ಹೆಚ್ಚು ಚಲಾವಣೆಯಲ್ಲಿರುತ್ತವೆ. ಮೊಬೈಲುಗಳಲ್ಲಿ ಕ್ಷಣಮಾತ್ರದಲ್ಲಿ ಪ್ರತ್ಯಕ್ಷವಾಗಿ ಮೊಬೈಲಿಗ ಕಣ್ಣಾಡಿಸಿ ಆಸ್ವಾದಿಸಿ, ಅಲ್ಲಿಂದ ನಾಲ್ಕೈದು ವಿಳಾಸದಾರರಿಗೆ ರವಾನೆಯಾದೊಡನೆಯೇ ಪುರ್ರೆಂದು ಮೊಬೈಲ್ ಅಂಗಳದಿಂದ ಅಂತರಿಕ್ಷಕ್ಕೆ ಹಾರಿ ಬಿಡುತ್ತವೆ.
ಅವುಗಳಿಗೆ ಎಲ್ಲೆಡೆಯಲ್ಲೂ ಪ್ರವೇಶವಿಲ್ಲ. ಜೋಕುಗಳ ಸಮಾಜದಲ್ಲಿ ಅವು ಅಸೃಶ್ಯರಿದ್ದಂತೆ. ಅವುಗಳಲ್ಲಿ ಯಾರ ಮೇಲೂ ವೈಯಕ್ತಿಕ ನಂಜು ಕಾರಲಾಗಿರುವುದಿಲ್ಲ. ವ್ಯಕ್ತಿ ಕೇಂದ್ರಿತವಾದ ಹೀಯಾಳಿಕೆಯಿರುವುದಿಲ್ಲ. ಯಾರಿಗೂ ನೋವಾಗುವಂತಹ ಜನಾಂಗೀಯ ನಿಂದನೆಯಾಗಲಿ ಇರುವುದಿಲ್ಲ. ಆದರೂ ಅವುಗಳು ‘ಘೆಟ್ಟೋ’ಗಳಲ್ಲಿ ಮಾತ್ರ ಅಸ್ತಿತ್ವ ಉಳಿಸಿಕೊಂಡಿರುತ್ತವೆ.
ಅವುಗಳ ಗುಣಮಟ್ಟವನ್ನು ನಿರ್ಲಕ್ಷಿಸಲಾಗುವುದಿಲ್ಲ. ಜೋಕೊಂದರ [...]

Continue reading »

ಚರ್ಚೆ: ಸ್ನೇಹ ಸೇತು ಕಡಿಯುವ ಮುನ್ನ

ತನ್ನನ್ನು ತಾನು ಗೇಲಿ ಮಾಡಿಕೊಂಡು ನಗುವುದೇ ಅತ್ಯಂತ ಶ್ರೇಷ್ಠವಾದ ಹಾಸ್ಯ. ಇನ್ನೊಬ್ಬನ ಕಾಲೆಳೆಯುವುದೂ, ಅಸಹಾಯಕತೆಯನ್ನು ಲೇವಡಿ ಮಾಡುವುದೂ ಹಾಸ್ಯದ ಪರಿಧಿಯಲ್ಲಿ ಓಡಾಡಿಕೊಂಡಿರಲು ಪರವಾನಿಗೆ ಪಡೆದಿದೆಯಾದರೂ ಅದು ಆ ಇನ್ನೊಬ್ಬನಿಗೆ ನೋವುಂಟು ಮಾಡುವ ಯಾವ ಹಕ್ಕನ್ನು ಹೊಂದಿಲ್ಲ. ಇನ್ನೊಬ್ಬನನ್ನು ನೋಯಿಸುವ ಹಾಸ್ಯ ಕುಹಕವಾಗುತ್ತದೆ.
ಹಾಸ್ಯವನ್ನು ಸವಿಯುವುದಕ್ಕೆ, ವ್ಯಂಗ್ಯವನ್ನು ಆಸ್ವಾದಿಸುವುದಕ್ಕೆ ಹಾಸ್ಯಪ್ರಜ್ಞೆಯೆಂಬುದು ಆವಶ್ಯಕವಾಗಿ ಇರಲೇಬೇಕು. ಹಾಸ್ಯಪ್ರಜ್ಞೆ ಇಲ್ಲದ ಗಂಭೀರ ಘಮಂಡಿಗಳಿಗೆ ನವಿರಾದ, ಆರೋಗ್ಯಕರವಾದ, ಹಾರ್ಮ್‌ಲೆಸ್ ಆದ ಹಾಸ್ಯ, ವಿಡಂಬನೆಯೂ ಸಹ ವೈಯಕ್ತಿಕ ದೂಷಣೆಯಾಗಿ, ಅಫೆನ್ಸಿವ್ ಆಗಿ ಕಾಣುತ್ತೆ. ಅಂಥವರ ಬಗ್ಗೆ [...]

Continue reading »

ಚರ್ಚೆ: ಜೋಕು ಹುಟ್ಟುವ ಸಮಯ!

 
ಕವಿತೆ ಹುಟ್ಟುವುದು ಹೇಗೆ, ಕವಿತೆಯ ಅಪ್ಪ ಅಮ್ಮ ಯಾರು, ಕಥೆ ಜನ್ಮ ತಾಳುವ ಪರಿಸರ ಎಂಥದ್ದು, ಕಾದಂಬರಿ ಮೊಟ್ಟೆ ಒಡೆದು ಮರಿಯಾಗುವದಕ್ಕೆ ಬೇಕಾದ ಕಾವು ಎಷ್ಟು ಎಂದೆಲ್ಲಾ ಅಳತೆ ಮಾಪಕಗಳನ್ನು ಹಿಡಿದು ಬೆವರು ಹರಿಸುವ ಸಂಶೋಧಕ, ಪಂಡಿತರಿಂದ ತಪ್ಪಿಸಿಕೊಂಡಿರುವ ಪ್ರಶ್ನೆ- ಜೋಕುಗಳು ಹುಟ್ಟುವುದು ಹೇಗೆ? ಈ ಜಗತ್ತಿನಲ್ಲಿರುವ ಅಸಂಖ್ಯಾತ ದಾಖಲಿತ ಜೋಕುಗಳಿಗೆ ಅಪ್ಪ ಅಮ್ಮಂದಿರು ಯಾರೂ ಇಲ್ಲವೇ? ಒಂದು ಜೋಕು ಹುಟ್ಟು ಪಡೆದು ಬೇರೆ ಬೇರೆ ಸಂಸ್ಕೃತಿಯ ಜನರ ನಡುವೆ ನಲುಗಿ ಹೊಸ ರೂಪ ಪಡೆದು [...]

Continue reading »

ಚರ್ಚೆ: ನಗುವಿನ ಬಗೆ

ನಗುವಿನಲ್ಲಿರುವ ಬಗೆಗಳೆಷ್ಟು!
ಮುದ್ದು ಕಂದ ತುಟಿ ಅರಳಿಸಿ ನಕ್ಕ ನಗು, ಪುಂಡ ಪೋರನೊಬ್ಬ ತಪ್ಪು ಮಾಡಿ ಕ್ಷಮೆ ಕೋರುವಂತೆ ನಿಂತು ನಕ್ಕ ನಗು, ಬೊಚ್ಚ ಬಾಯಿಯ ಮುದುಕ ಅಪಾನವಾಯುವಿಗೆ ಮುಕ್ತಿ ನೀಡಿ ಮುಖದಲ್ಲಿ ಅರಳಿಸಿದ ನಗು, ಧ್ಯಾನದಲ್ಲಿ ಕುಳಿತವನ ಮುಖದಲ್ಲಿನ ಮಂದಸ್ಮಿತದ ನಗು, ಜೋಕು ಕೇಳಿ ತಡೆಯಲಾಗದು ಪಕ್ಕೆಲುಬು ಹಿಡಿದುಕೊಂಡು ಉರುಳಾಡಿ ನಕ್ಕ ನಗು, ಸಮಸ್ಯೆಗಳೆಲ್ಲಾ ಪರಿಹಾರವಾದಾಗ ನಿಟ್ಟುಸಿರಿನ ಸಂಗಡ ಹೊರಬಂದ ನಗು, ಸವಾಲನ್ನು ಕಂಡು ಸಿನಿಕತೆಯಿಂದ ಹುಟ್ಟಿದ ನಗು, ದೊಡ್ಡ ವರ ಮೂರ್ಖತನವನ್ನು ಕಂಡು ಹುಟ್ಟಿದ ನಗು, [...]

Continue reading »

ಚರ್ಚೆ: ಹಾಸ್ಯ v/s ಗಾಂಭೀರ್ಯ

ಆದರೆ ತಮ್ಮ ಸಣ್ಣ ಕಥೆಗಳಲ್ಲಿ, ಕಾದಂಬರಿಗಳಲ್ಲಿ ಅವರಿಗೇ ವಿಶಿಷ್ಟವಾದ ಹಾಸ್ಯಾತ್ಮಕವಾದ ಶೈಲಿಯನ್ನು ಬೆಳೆಸಿ ಹೆಸರಾದ ಮಲಯಾಳಿ ಲೇಖಕ ವೈಕಂ ಮಹಮದ್ ಬಶೀರ್ ಅಭಿಪ್ರಾಯ ಬೇರೆ ತೆರನಾದದ್ದು:

Continue reading »

ಚರ್ಚೆ: ಅಳುವ ಕಡಲಿನಲಿ ತೇಲಿ ಬರುತಲಿದೆ ನಗೆಯ ಹಾಯಿ ದೋಣಿ…

 
ಸಂಕಟದ ನೆನಪೂ ನಮ್ಮಲ್ಲಿ ನಗೆಯುಕ್ಕಿಸುವುದು ಎಂಥಾ ಸೋಜಿಗವಲ್ಲವೇ?
ಚಿಕ್ಕವರಾಗಿದ್ದಾಗ ಅಪ್ಪನ ಜೇಬಿನಿಂದ ಹತ್ತು ರುಪಾಯಿ ಎಗರಿಸಿ, ಮನೆಯ ಹಿಂದಿನ ಬೀದಿಯ ಅಪರಿಚಿತ ಅಂಗಡಿಗೆ ಹೋಗಿ ಎರಡು ರುಪಾಯಿಗೆ ಬಟಾಣಿ ತಗೆದುಕೊಂಡು ಉಳಿದ ಎಂಟು ರೂಪಾಯಿಯನ್ನು ವಾರದ ಇತರ ದಿನಗಳಿಗೆ ಎಂದು ಉಳಿಸಿಟ್ಟುಕೊಂಡು, ಬಟಾಣಿ ಮೆಲ್ಲುತ್ತಾ ಊರೆಲ್ಲಾ ತಿರುಗಿ ಮನೆಗೆ ಬಂದು ಚಡ್ಡಿ ಬಿಚ್ಚಿ ಒಗೆಯಲು ಎಸೆವಾಗ ಅಪ್ಪನ ಎದುರೇ ಚಿಲ್ಲರೆ ಠಣ್ ಠಣ್ ಎಂದು ಬಿದ್ದದ್ದು, ಹೋಂವರ್ಕ್ ಮಾಡದಿದ್ದರೂ ತಾನು ಮಾಡಿರುವುದಾಗಿಯೂ, ಹೋಂ ವರ್ಕ್ ಪುಸ್ತಕ ಮನೆಯಲ್ಲಿ [...]

Continue reading »

ಚರ್ಚೆ: ನಗುವುದು ಅಷ್ಟು ಕಷ್ಟವೇ!

‘ನಗುವುದು ಅಷ್ಟು ಕಷ್ಟವೇ?’ ಎಂಬ ಪ್ರಶ್ನಗೆ ಉತ್ತರಿಸುವ ಮೊದಲು ಬೆಂಗಳೂರಿನ ಅಷ್ಟೂ ಲಾಫಿಂಗ್ ಕ್ಲಬ್ಬುಗಳ ಪ್ರತಿದಿನ ಬೆಳಗಿನ ಸರ್ಕಸ್ಸುಗಳನ್ನು, ಟಿವಿ ಚಾನಲ್‌ಗಳಲ್ಲಿನ ಪ್ರೈಂ ಟೈಮ್ ಕಾಮಿಡಿ ಕಿಲಾಡಿಗಳ ಎಲ್ಲಾ ಸಾಹಸಗಳನ್ನು ಒಮ್ಮೆ ಅವಲೋಕಿಸಬೇಕು. ಹೌದು! ನಗುವುದು ನಿಜಕ್ಕೂ ಕಷ್ಟ ಇಲ್ಲವಾದರೆ ಮನುಷ್ಯ ಅದಕ್ಕಾಗಿ ಇಷ್ಟೋಂದು ಖರ್ಚು ಮಾಡುತ್ತಿದ್ದನೇ?
ನಮ್ಮ ಬದುಕಿನ ಗತಿಯನ್ನ ಹೇಗೆ ಮಾರ್ಪಾಟುಗೊಳಿಸಿಕೊಂಡಿದ್ದೇವೆ ಎಂಬುದನ್ನು ಗಮನಿಸಿದರೆ ನಮಗೆ ನಗುವುದಕ್ಕೆ ಏಕೆ ಸಾಧ್ಯವಾಗುತ್ತಿಲ್ಲ ಎಂಬುದರ ಅರಿವಾಗುತ್ತದೆ. ಮೂರು ನಾಲ್ಕು ಮಂದಿ ಕಲೆಯಬೇಕು, ಒಬ್ಬರ ಕಾಲನ್ನೊಬ್ಬರು ಎಳೆಯುವ ಕೆಲಸದಲ್ಲಿ ತೊಡಗಿಕೊಳ್ಳಬೇಕು, [...]

Continue reading »

ನಗುವುದಕ್ಕೆ ಕಾರಣ ಬೇಕಿತ್ತಾ?

‘ಏನಿದೆ ಅಂತ ನಗು ನಗುತ್ತಾ ಇರಬೇಕು? ಈ ಬೋರು ಬದುಕಿನಲ್ಲಿ ನಗೋದಕ್ಕೆ ಏನು ಸಿಕ್ಕುತ್ತೆ?’ ಎಂಬ ಶಿಕಾಯತ್ತು ತುಂಬಾ ಮಂದಿಯದು. ಇವರ ಸಮಸ್ಯೆ ನಗುವುದಕ್ಕೆ ಇವರಿಗೆ ಕಾರಣಗಳು ಸಿಕ್ಕುವುದಿಲ್ಲ. ಓದಿದ ಜೋಕುಗಳು ಹಳೆಯವು ಅನ್ನಿಸುತ್ತವೆ, ಯಾರೋ ಮಾಡಿದ ವ್ಯಂಗ್ಯ ಕುಚೇಷ್ಟೆ ದಡ್ಡತನ ಅನ್ನಿಸುತ್ತದೆ, ನಗುವ ಅವಕಾಶಗಳು ಬಂದಾಗ ಅವುಗಳನ್ನು ಅನುಮಾನಿಸಿ ನೋಡುತ್ತಾರೆ. ನಗುವಂಥ ಸಂದರ್ಭ ಬಂದರೂ ನೋಡಿದವರಿಗೆ ತಮ್ಮದು ವಿವೇಕ ಪೂರ್ಣವಾದ ಮಂದ ಹಾಸ, ಮಿಲಿಯನ್ ಡಾಲರ್ ಸ್ಮೈಲ್ ಎನ್ನಿಸುವಂತೆ ಹಲ್ಕಿರಿಯುತ್ತಾರೆ. ಇವರಿಗೆ ಕಾರಣವಿಲ್ಲದೆ ನಗುವುದೆಂದರೆ ಏನು [...]

Continue reading »

ನಗು ಸಹಜವೋ, ಗಾಂಭೀರ್ಯ ಸಹಜವೋ?

ನಗು ಸಹಜವೋ, ಗಾಂಭೀರ್ಯ ಸಹಜವೋ?
ಇದೊಂದು ಸರಳವಾದ ಪ್ರಶ್ನೆ. ಸಣ್ಣಸಣ್ಣದಕ್ಕೂ ನಗುತ್ತಾ, ಮುಸಿಮುಸಿ ಎಂದು ಹಲ್ಕಿರಿಯುತ್ತಾ, ವಿನಾಕಾರಣ ನಗುವ ಮಕ್ಕಳು ಕೊಂಚ ಬೆಳೆಯುತ್ತಿದ್ದಂತೆಯೇ ಅವರಿಗೆ ದೊಡ್ಡವರು ‘ಸ್ವಲ್ಪ ಗಂಭೀರವಾಗಿರುವುದನ್ನು ಕಲಿತುಕೋ’ ಎಂದು ಉಪದೇಶಿಸತೊಡಗುತ್ತಾರೆ. ಸಣ್ಣ ವಯಸ್ಸಿನಲ್ಲೇ ಮುಖದ ಮೇಲಿನ ತುಂಟಾಟಗಳಿಗೆಲ್ಲಾ ಟಾಟಾ ಹೇಳಿ ಅಲ್ಲಿ ದೊಡ್ಡವರ ಗಾಂಭೀರ್ಯಕ್ಕೆ ವಾಸ್ತವ್ಯ ಕಲ್ಪಿಸಿದ ಹುಡುಗ ಇಡೀ ‘ಹುಡುಗು ಕುಲ’ದ ಆದರ್ಶವಾಗುತ್ತಾನೆ.
ಮೂಗಿನ ಕೆಳಗೆ ಮೀಸೆ ಮೂಡಿ, ಅದರ ಗಡಿಯಾಚೆಗೆ ಹುಲುಸಾಗಿ ಗಡ್ಡ ಹರವಿಕೊಂಡು ಬೆಳೆದು ನೆತ್ತಿ ವಿಶಾಲವಾಗುತ್ತಾ, ಕಪ್ಪು ಕೂದಲ ರಾಶಿಯ ಮಧ್ಯೆ [...]

Continue reading »