(ನಗೆ ನಗಾರಿ ಕ್ರೀಡಾವಿನೋದ ಬ್ಯೂರೋ)
ಸಾವಿರಾರು ರುಪಾಯಿಗಳ ಔಷಧಿ, ಹಣ್ಣು ಹಂಪಲು ತಿಂದು ಅರಗಿಸಿಕೊಂಡರೂ ನಮ್ಮ ನಾಡಿನ ಮಕ್ಕಳು ಎರಡು ಕಾಲ ಮೇಲೆ ನಿಲ್ಲುವುದರೊಳಗೆ ಕಣ್ಮುಚ್ಚುತ್ತವೆ ಆದರೆ ‘ಕಳೆದು ಹೋಗಿದೆ ಹುಡುಕಿ ಕೊಡಿ’ ಎಂದು ಪೋಲಿಸ್ ಸ್ಟೇಷನ್ನಿನಲ್ಲಿ ದಾಖಲಾದ ಅರ್ಜಿಗಳು ಚಿರಂಜೀವಿಗಳು. ಬಹುಶಃ ಇಲ್ಲಿಯೂ ನಮ್ಮ ನಾಡಿನ ಜನತೆ ಸಾವಿರಾರು ರೂಗಳ ಔಷಧಿ ಶೈತ್ಯೋಪಚಾರದ ಖರ್ಚನ್ನು ಮಾಡಿದರೆ ಆ ಅರ್ಜಿಗಳ ಕೊಲೆಗೆ ನಮ್ಮ ಪೋಲೀಸರು ಸಂಚನ್ನು ರೂಪಿಸುವ ಮಟ್ಟಿಗೆ ಕಾರ್ಯ ಪ್ರವೃತ್ತರಾಗಬಹುದು.
ಹುಡುಕುವುದರ ಕಷ್ಟ ಅದನ್ನು [...]
Posts Tagged ‘ಕುಚೇಲ’
30 Sep
ಕಳೆದು ಹೋಗಿದೆ ಹುಡುಕಿ ಕೊಡಿ…
26 Sep
ಸಂತಾಪಕೀಯ: ಅನಾಮಿಕ ಅತಿಥಿಯ ಬೆನ್ನತ್ತಿ…
ಇಷ್ಟು ದಿನ ನಗೆ ನಗಾರಿ ಆಫೀಸಿನಲ್ಲಿ ನೆಲೆಸಿದ್ದ ಶಾಂತಿ ಅನೇಕರಲ್ಲಿ ಕೆಟ್ಟ ಕೂತಹಲವನ್ನು, ಕೆಲವರಲ್ಲಿ ಒಳ್ಳೆಯ ಸಂಶವನ್ನೂ ಮೂಡಿಸಿದ್ದು ನಮ್ಮ ಗಮನಕ್ಕೆ ಬಂದಿದೆ. ಅನ್ಯಗ್ರಹವಾಸಿಗಳಾದ ರಾಜ್ಯದ ಗೃಹ ಮಂತ್ರಿಗಳು ನಗಾರಿ ಸದ್ದಡಗಿಸಿದ್ದು ನಮ್ಮ ಸರಕಾರದ ಸಾಧನೆ ಎಂದು ಕೆ.ಎಸ್.ಆರ್.ಟಿ.ಸಿ ಟಿಕೆಟ್ ಹಿಂಭಾಗದ ಸಾಧನೆಗಳ ಪಟ್ಟಿಯಲ್ಲಿ ಸೇರಿಸಲು ಹೊಂಚು ಹಾಕಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡ ಮಹತ್ಕಾರ್ಯಕ್ಕಾಗಿ ಎರಡನೆಯ ಗೌಡಾಗೆ ಯಡ್ಡಿ ಕತ್ತೆತ್ತಿ ಸುತ್ತಲೂ ಕಣ್ಣಾಡಿಸುತ್ತಿದ್ದಾರೆ. ಮಠಗಳ ರೇಷನ್ ಕೊರಕ ಹುಳುಗಳಾಗಿ ಭವ್ಯ ಜೀವನವನ್ನು ದಿವ್ಯವಾಗಿ ಕಳೆಯುತ್ತಿರುವ ಪಾರ್ಟ್ [...]
2 Mar
ಇದೂ ಮುಗಿಯುತ್ತೆ… (ಮುಗಿಯಿತು)
(ಇಲ್ಲೀವರ್ಗೂ ಏನಾಗಿತ್ತು ಅಂದ್ರೆ….)
ಮಂಡಿಯೂರಿಯವರ ಮಾತಿನ ಮಾಂತ್ರಿಕ ಮೋಡಿಗೆ ಒಳಗಾದ ಕುಚೇಲನಿಗೆ ತಾನು ಕುರಿಯಲ್ಲ ಹುಲಿ ಎಂಬ ಆತ್ಮವಿಶ್ವಾಸ ಮೂಡಿತು. ಇಷ್ಟು ದಿನ ತನ್ನೊಳಗಿದ್ದ ಶಕ್ತಿಯನ್ನು ಕಾಣದೆ ಸಂಕಟ ಪಟ್ಟದ್ದಕ್ಕೆ ಆತನಿಗೆ ದುಃಖವಾಯಿತು. ಇನ್ನು ಮುಂದೆ ಮಂಡಿಯೂರಿಯವರ ಈ ಸೂಪರ್ ಫಾರ್ಮುಲಾವನ್ನು ಅಳವಡಿಸಿಕೊಂಡು ಬದುಕನ್ನು ಸುಖದ ಬೀಡಾಗಿಸಿಕೊಳ್ಳಬೇಕು ಎಂದುಕೊಂಡು ಜೇಬಿನಲ್ಲಿ ಉಳಿದಿದ್ದ ಚಿಲ್ಲರೆ ಕಾಸನ್ನೆಲ್ಲಾ ಮಂಡಿಯೂರಿಯವರ ಎದುರು ಇಟ್ಟು ಮಂಡಿಯೂರಿ ಬಾಗಿ ನಮಸ್ಕರಿಸಿ ಅಲ್ಲಿಂದ ಹೊರಟ.
ಮುಂದೆ ದಿನನಿತ್ಯದ ಬದುಕಿನಲ್ಲಿ ಯಾವುದೇ ಕಷ್ಟ ಬಂದರೂ ‘ಈ ಕಷ್ಟ ಶಾಶ್ವತವಲ್ಲ. ಇದು [...]
6 Feb
ನಗಾರಿ ಹುಟ್ಟು ಹಬ್ಬಕ್ಕೆ ಶುಭಾಶಯಗಳ ಸುರಿಮಳೆ!
ನಗೆ ನಗಾರಿ ಡಾಟ್ ಕಾಮ್‌ನ ವಾರ್ಷಿಕೋತ್ಸವ ಸಮಾರಂಭದ ಬಗ್ಗೆ ಸವಿರವಾದ ವರದಿಯನ್ನು ನೀಡಬೇಕಿದ್ದ ತೊಣಚಪ್ಪ ಹಾಗೂ ಕುಚೇಲರು ಪಾರ್ಟಿಯಲ್ಲಿನ ಪ್ರಸಾದ, ತೀರ್ಥದಿಂದ ‘ಸಮಾಧಿ’ ಸ್ಥಿತಿಯನ್ನು ತಲುಪುವುದರಿಂದ ಸಾಮ್ರಾಟರಾದ ನಾವೇ ಕುದುರೆಗಳ ಲಗಾಮು ಹಿಡಿಯಬೇಕಿದೆ. ಹೀಗಾಗಿ ವರದಿ ಕೊಂಚ ತಡವಾಗಲಿದೆ. ಆದರೆ ನಮ್ಮಹಾಗೂ ನಮ್ಮ ಪತ್ರಿಕೆಯ ಹುಟ್ಟು ಹಬ್ಬಕ್ಕೆ ನಮ್ಮ ಭಕ್ತ ವೃಂದವು ಪ್ರತಿಕ್ರಿಯಿಸಿರುವ ರೀತಿಯನ್ನು ನೆನೆಯದಿದ್ದರೆ ನಮಗೆ ಮನಃಶಾಂತಿ ಲಭ್ಯವಾಗುವುದಿಲ್ಲ.
ಗಣೇಶ್.ಕೆ
mareyabahudemba bhayadinda eegale abhinandisuttiddene.
aadare neevu nageyanna nandisabedi anta kelikolluttene.
ಪ್ರಸಾದ್
ನೂರ್ಕಾಲ ಬೆಳಗಲಿ ನಗೆಯ ದೀವಿಗೆ
ಅನುಗಾಲವೂ ಹರಿಯಲಿ [...]
1 Feb
ಬೆಳಗಾನೆ ಎದ್ದು ನಾ ಯಾರ್ಯಾರ ಒದೆಯಲಿ?
ಇಂದು ಬೆಳಗ್ಗೆ ಎಂದಿಗಿಂತ ಅರ್ಧ ಗಂಟೆ ಬೇಗನೆ ಎದ್ದ ಕುಚೇಲನಿಗೆ ಒಂದು ದೊಡ್ಡ ಜಿಜ್ಞಾಸೆ ಹುಟ್ಟಿಕೊಂಡಿತು. ಹುಲುಮಾನವರು ಹಾಸಿಗೆಯಿಂದೇಳುತ್ತಿದ್ದ ಹಾಗೆಯೇ ತಮ್ಮ ಅಂಗೈಯಲ್ಲಿ ದೇವಾಧಿದೇವತೆಗಳನ್ನು ಕಲ್ಪಿಸಿಕೊಂಡು ಅವರಿಗೆ ನಮಿಸಿಯೋ, ಕೋಣೆಯಲ್ಲಿ ನೇತು ಹಾಕಿಕೊಂಡ ದೇವರ ಪಟಕ್ಕೆ ಕೈ ಮುಗಿಯುತ್ತಲೋ, ಎಡ ಮಗ್ಗುಲಲ್ಲಿ ಎದ್ದೆವಾ ಎಂದು ಗಾಬರಿಯಾಗುತ್ತಲೋ, ರಾತ್ರಿಯ ಗುಂಡು ಜಾಸ್ತಿಯಾಯಿತಾ ಎಂದು ಆತ್ಮಾವಲೋಕನ ಮಾಡಿಕೊಳ್ಳುತ್ತಲೋ, ನಿದ್ರೆ ಕೆಡಿಸಿ ಎಚ್ಚರಿಸಿದ ಹಾಲಿನವನನ್ನೋ, ಪೇಪರ್‌ನವನನ್ನೋ ಬೈದುಕೊಳ್ಳುತ್ತಲೋ, ಇಷ್ಟು ಬೇಗ ಬೆಳಕಾಯಿತಾ ಎಂದು ಅಚ್ಚರಿಗೊಳ್ಳುತ್ತಲೋ, ಮಾಡಬೇಕಾದ ಕೆಲಸಗಳ ಪಟ್ಟಿ ತಯಾರಿಸುತ್ತಲೋ, ದೂರದಲ್ಲಿರುವ [...]
7 Jul
ಭಜ್ಜಿ ಸಿಂಗಿಗೆ ಶಾಂತನಿಂದ ಕೋಚಿಂಗ್
(ನಗೆ ನಗಾರಿ ಕ್ರೀಡಾ ಬ್ಯೂರೋ)
ದೇಶ ಬಿಟ್ಟು ನೂರಾರು ಮೈಲು ದೂರ ಹಾರಿ ಹೋಗಿ ಅಲ್ಲಿನ ತಂಡದ ಆಟಗಾರನೊಬ್ಬನಿಗೆ ತನ್ನ ಭಾಷೆಯಲ್ಲಿಯೇ ‘ತೆರೆ ಮಾ ಕೀ..’ ಎಂದು ಮೈದನದಲ್ಲೇ ಬೈದು ಅದನ್ನು ಆ ಆಸ್ಟ್ರೇಲಿಯನ್ನು ‘ಮಂಕೀ’ ಎಂದು ಅರ್ಥೈಸಿಕೊಂಡು ಅವಮಾನಿತನಾದವನಂತೆ ನಟಿಸಿ ಕೇಸು ಜರುಗಿಸಿ ಸುಸ್ತಾದದ್ದು ಹಳೆಯ ಸಂಗತಿಯಾದರೂ ಆ ಮಂಕೀ ವೀರನಿಗೆ ಟಾಂಗುಕೊಟ್ಟ ಹರ್‌ಭಜನ್ ಸಿಂಗ್ ದೇಶದ ಜನರ ಕಣ್ಣಿನಲ್ಲಿ ಹೀರೋ ಆಗಿದ್ದ. ಅವನ ವಿರುದ್ಧ ಪ್ರಪಂಚದ ಪತ್ರಿಕೆಗಳೆಲ್ಲಾ ಮುರಕೊಂಡು ಬಿದ್ದರೂ ನಮ್ಮ ಜನರು ಎರಡೂ ಕೈಚಾಚಿ [...]
Recent Comments