ಕೆಲವು ಬಗೆಯ ಜೋಕುಗಳಿವೆ. ಅವುಗಳು ಸಾಮಾನ್ಯ ಜೋಕುಗಳಿಗಿಂತ ಹೆಚ್ಚು ಚಲಾವಣೆಯಲ್ಲಿರುತ್ತವೆ. ಮೊಬೈಲುಗಳಲ್ಲಿ ಕ್ಷಣಮಾತ್ರದಲ್ಲಿ ಪ್ರತ್ಯಕ್ಷವಾಗಿ ಮೊಬೈಲಿಗ ಕಣ್ಣಾಡಿಸಿ ಆಸ್ವಾದಿಸಿ, ಅಲ್ಲಿಂದ ನಾಲ್ಕೈದು ವಿಳಾಸದಾರರಿಗೆ ರವಾನೆಯಾದೊಡನೆಯೇ ಪುರ್ರೆಂದು ಮೊಬೈಲ್ ಅಂಗಳದಿಂದ ಅಂತರಿಕ್ಷಕ್ಕೆ ಹಾರಿ ಬಿಡುತ್ತವೆ.
ಅವುಗಳಿಗೆ ಎಲ್ಲೆಡೆಯಲ್ಲೂ ಪ್ರವೇಶವಿಲ್ಲ. ಜೋಕುಗಳ ಸಮಾಜದಲ್ಲಿ ಅವು ಅಸೃಶ್ಯರಿದ್ದಂತೆ. ಅವುಗಳಲ್ಲಿ ಯಾರ ಮೇಲೂ ವೈಯಕ್ತಿಕ ನಂಜು ಕಾರಲಾಗಿರುವುದಿಲ್ಲ. ವ್ಯಕ್ತಿ ಕೇಂದ್ರಿತವಾದ ಹೀಯಾಳಿಕೆಯಿರುವುದಿಲ್ಲ. ಯಾರಿಗೂ ನೋವಾಗುವಂತಹ ಜನಾಂಗೀಯ ನಿಂದನೆಯಾಗಲಿ ಇರುವುದಿಲ್ಲ. ಆದರೂ ಅವುಗಳು ‘ಘೆಟ್ಟೋ’ಗಳಲ್ಲಿ ಮಾತ್ರ ಅಸ್ತಿತ್ವ ಉಳಿಸಿಕೊಂಡಿರುತ್ತವೆ.
ಅವುಗಳ ಗುಣಮಟ್ಟವನ್ನು ನಿರ್ಲಕ್ಷಿಸಲಾಗುವುದಿಲ್ಲ. ಜೋಕೊಂದರ [...]
Posts Tagged ‘ಚರ್ಚೆ’
25 Jul
ಚರ್ಚೆ: ಡರ್ಟಿ ಜೋಕೆಂಬ ಬೇಲಿ ಹಾರುವ ಹುಮ್ಮಸ್ಸು!
11 Mar
ಚರ್ಚೆ: ಸ್ನೇಹ ಸೇತು ಕಡಿಯುವ ಮುನ್ನ
ತನ್ನನ್ನು ತಾನು ಗೇಲಿ ಮಾಡಿಕೊಂಡು ನಗುವುದೇ ಅತ್ಯಂತ ಶ್ರೇಷ್ಠವಾದ ಹಾಸ್ಯ. ಇನ್ನೊಬ್ಬನ ಕಾಲೆಳೆಯುವುದೂ, ಅಸಹಾಯಕತೆಯನ್ನು ಲೇವಡಿ ಮಾಡುವುದೂ ಹಾಸ್ಯದ ಪರಿಧಿಯಲ್ಲಿ ಓಡಾಡಿಕೊಂಡಿರಲು ಪರವಾನಿಗೆ ಪಡೆದಿದೆಯಾದರೂ ಅದು ಆ ಇನ್ನೊಬ್ಬನಿಗೆ ನೋವುಂಟು ಮಾಡುವ ಯಾವ ಹಕ್ಕನ್ನು ಹೊಂದಿಲ್ಲ. ಇನ್ನೊಬ್ಬನನ್ನು ನೋಯಿಸುವ ಹಾಸ್ಯ ಕುಹಕವಾಗುತ್ತದೆ.
ಹಾಸ್ಯವನ್ನು ಸವಿಯುವುದಕ್ಕೆ, ವ್ಯಂಗ್ಯವನ್ನು ಆಸ್ವಾದಿಸುವುದಕ್ಕೆ ಹಾಸ್ಯಪ್ರಜ್ಞೆಯೆಂಬುದು ಆವಶ್ಯಕವಾಗಿ ಇರಲೇಬೇಕು. ಹಾಸ್ಯಪ್ರಜ್ಞೆ ಇಲ್ಲದ ಗಂಭೀರ ಘಮಂಡಿಗಳಿಗೆ ನವಿರಾದ, ಆರೋಗ್ಯಕರವಾದ, ಹಾರ್ಮ್‌ಲೆಸ್ ಆದ ಹಾಸ್ಯ, ವಿಡಂಬನೆಯೂ ಸಹ ವೈಯಕ್ತಿಕ ದೂಷಣೆಯಾಗಿ, ಅಫೆನ್ಸಿವ್ ಆಗಿ ಕಾಣುತ್ತೆ. ಅಂಥವರ ಬಗ್ಗೆ [...]
20 Feb
ಚರ್ಚೆ: ಜೋಕು ಹುಟ್ಟುವ ಸಮಯ!
ಕವಿತೆ ಹುಟ್ಟುವುದು ಹೇಗೆ, ಕವಿತೆಯ ಅಪ್ಪ ಅಮ್ಮ ಯಾರು, ಕಥೆ ಜನ್ಮ ತಾಳುವ ಪರಿಸರ ಎಂಥದ್ದು, ಕಾದಂಬರಿ ಮೊಟ್ಟೆ ಒಡೆದು ಮರಿಯಾಗುವದಕ್ಕೆ ಬೇಕಾದ ಕಾವು ಎಷ್ಟು ಎಂದೆಲ್ಲಾ ಅಳತೆ ಮಾಪಕಗಳನ್ನು ಹಿಡಿದು ಬೆವರು ಹರಿಸುವ ಸಂಶೋಧಕ, ಪಂಡಿತರಿಂದ ತಪ್ಪಿಸಿಕೊಂಡಿರುವ ಪ್ರಶ್ನೆ- ಜೋಕುಗಳು ಹುಟ್ಟುವುದು ಹೇಗೆ? ಈ ಜಗತ್ತಿನಲ್ಲಿರುವ ಅಸಂಖ್ಯಾತ ದಾಖಲಿತ ಜೋಕುಗಳಿಗೆ ಅಪ್ಪ ಅಮ್ಮಂದಿರು ಯಾರೂ ಇಲ್ಲವೇ? ಒಂದು ಜೋಕು ಹುಟ್ಟು ಪಡೆದು ಬೇರೆ ಬೇರೆ ಸಂಸ್ಕೃತಿಯ ಜನರ ನಡುವೆ ನಲುಗಿ ಹೊಸ ರೂಪ ಪಡೆದು [...]
12 Feb
ಚರ್ಚೆ: ನಗುವಿನ ಬಗೆ
ನಗುವಿನಲ್ಲಿರುವ ಬಗೆಗಳೆಷ್ಟು!
ಮುದ್ದು ಕಂದ ತುಟಿ ಅರಳಿಸಿ ನಕ್ಕ ನಗು, ಪುಂಡ ಪೋರನೊಬ್ಬ ತಪ್ಪು ಮಾಡಿ ಕ್ಷಮೆ ಕೋರುವಂತೆ ನಿಂತು ನಕ್ಕ ನಗು, ಬೊಚ್ಚ ಬಾಯಿಯ ಮುದುಕ ಅಪಾನವಾಯುವಿಗೆ ಮುಕ್ತಿ ನೀಡಿ ಮುಖದಲ್ಲಿ ಅರಳಿಸಿದ ನಗು, ಧ್ಯಾನದಲ್ಲಿ ಕುಳಿತವನ ಮುಖದಲ್ಲಿನ ಮಂದಸ್ಮಿತದ ನಗು, ಜೋಕು ಕೇಳಿ ತಡೆಯಲಾಗದು ಪಕ್ಕೆಲುಬು ಹಿಡಿದುಕೊಂಡು ಉರುಳಾಡಿ ನಕ್ಕ ನಗು, ಸಮಸ್ಯೆಗಳೆಲ್ಲಾ ಪರಿಹಾರವಾದಾಗ ನಿಟ್ಟುಸಿರಿನ ಸಂಗಡ ಹೊರಬಂದ ನಗು, ಸವಾಲನ್ನು ಕಂಡು ಸಿನಿಕತೆಯಿಂದ ಹುಟ್ಟಿದ ನಗು, ದೊಡ್ಡ ವರ ಮೂರ್ಖತನವನ್ನು ಕಂಡು ಹುಟ್ಟಿದ ನಗು, [...]
23 Jan
ಚರ್ಚೆ: ಹಾಸ್ಯ v/s ಗಾಂಭೀರ್ಯ
ಆದರೆ ತಮ್ಮ ಸಣ್ಣ ಕಥೆಗಳಲ್ಲಿ, ಕಾದಂಬರಿಗಳಲ್ಲಿ ಅವರಿಗೇ ವಿಶಿಷ್ಟವಾದ ಹಾಸ್ಯಾತ್ಮಕವಾದ ಶೈಲಿಯನ್ನು ಬೆಳೆಸಿ ಹೆಸರಾದ ಮಲಯಾಳಿ ಲೇಖಕ ವೈಕಂ ಮಹಮದ್ ಬಶೀರ್ ಅಭಿಪ್ರಾಯ ಬೇರೆ ತೆರನಾದದ್ದು:
3 Nov
ಚರ್ಚೆ: ನಗುವುದು ಅಷ್ಟು ಕಷ್ಟವೇ!
‘ನಗುವುದು ಅಷ್ಟು ಕಷ್ಟವೇ?’ ಎಂಬ ಪ್ರಶ್ನಗೆ ಉತ್ತರಿಸುವ ಮೊದಲು ಬೆಂಗಳೂರಿನ ಅಷ್ಟೂ ಲಾಫಿಂಗ್ ಕ್ಲಬ್ಬುಗಳ ಪ್ರತಿದಿನ ಬೆಳಗಿನ ಸರ್ಕಸ್ಸುಗಳನ್ನು, ಟಿವಿ ಚಾನಲ್‌ಗಳಲ್ಲಿನ ಪ್ರೈಂ ಟೈಮ್ ಕಾಮಿಡಿ ಕಿಲಾಡಿಗಳ ಎಲ್ಲಾ ಸಾಹಸಗಳನ್ನು ಒಮ್ಮೆ ಅವಲೋಕಿಸಬೇಕು. ಹೌದು! ನಗುವುದು ನಿಜಕ್ಕೂ ಕಷ್ಟ ಇಲ್ಲವಾದರೆ ಮನುಷ್ಯ ಅದಕ್ಕಾಗಿ ಇಷ್ಟೋಂದು ಖರ್ಚು ಮಾಡುತ್ತಿದ್ದನೇ?
ನಮ್ಮ ಬದುಕಿನ ಗತಿಯನ್ನ ಹೇಗೆ ಮಾರ್ಪಾಟುಗೊಳಿಸಿಕೊಂಡಿದ್ದೇವೆ ಎಂಬುದನ್ನು ಗಮನಿಸಿದರೆ ನಮಗೆ ನಗುವುದಕ್ಕೆ ಏಕೆ ಸಾಧ್ಯವಾಗುತ್ತಿಲ್ಲ ಎಂಬುದರ ಅರಿವಾಗುತ್ತದೆ. ಮೂರು ನಾಲ್ಕು ಮಂದಿ ಕಲೆಯಬೇಕು, ಒಬ್ಬರ ಕಾಲನ್ನೊಬ್ಬರು ಎಳೆಯುವ ಕೆಲಸದಲ್ಲಿ ತೊಡಗಿಕೊಳ್ಳಬೇಕು, [...]
21 Aug
ನಗು ಸಹಜವೋ, ಗಾಂಭೀರ್ಯ ಸಹಜವೋ?
ನಗು ಸಹಜವೋ, ಗಾಂಭೀರ್ಯ ಸಹಜವೋ?
ಇದೊಂದು ಸರಳವಾದ ಪ್ರಶ್ನೆ. ಸಣ್ಣಸಣ್ಣದಕ್ಕೂ ನಗುತ್ತಾ, ಮುಸಿಮುಸಿ ಎಂದು ಹಲ್ಕಿರಿಯುತ್ತಾ, ವಿನಾಕಾರಣ ನಗುವ ಮಕ್ಕಳು ಕೊಂಚ ಬೆಳೆಯುತ್ತಿದ್ದಂತೆಯೇ ಅವರಿಗೆ ದೊಡ್ಡವರು ‘ಸ್ವಲ್ಪ ಗಂಭೀರವಾಗಿರುವುದನ್ನು ಕಲಿತುಕೋ’ ಎಂದು ಉಪದೇಶಿಸತೊಡಗುತ್ತಾರೆ. ಸಣ್ಣ ವಯಸ್ಸಿನಲ್ಲೇ ಮುಖದ ಮೇಲಿನ ತುಂಟಾಟಗಳಿಗೆಲ್ಲಾ ಟಾಟಾ ಹೇಳಿ ಅಲ್ಲಿ ದೊಡ್ಡವರ ಗಾಂಭೀರ್ಯಕ್ಕೆ ವಾಸ್ತವ್ಯ ಕಲ್ಪಿಸಿದ ಹುಡುಗ ಇಡೀ ‘ಹುಡುಗು ಕುಲ’ದ ಆದರ್ಶವಾಗುತ್ತಾನೆ.
ಮೂಗಿನ ಕೆಳಗೆ ಮೀಸೆ ಮೂಡಿ, ಅದರ ಗಡಿಯಾಚೆಗೆ ಹುಲುಸಾಗಿ ಗಡ್ಡ ಹರವಿಕೊಂಡು ಬೆಳೆದು ನೆತ್ತಿ ವಿಶಾಲವಾಗುತ್ತಾ, ಕಪ್ಪು ಕೂದಲ ರಾಶಿಯ ಮಧ್ಯೆ [...]
3 Jul
ಚರ್ಚೆ: ಕಲ್ಲು ನಗುವ ಸಮಯ!
ನಮ್ಮ ವೇಗದ ನಗರದ ಬದುಕಿನಲ್ಲಿ ಎಲ್ಲವೂ ಕಮಾಡಿಟಿಗಳಾದ ಹಾಗೆಯೇ ನಗುವೂ ಒಂದು ಪ್ರಾಡಕ್ಟ್ ಆಗುತ್ತಿದೆಯಾ ಎಂಬ ಸಂಶಯ ಮೂಡುತ್ತದೆ. ಜನರಿಗೆ ನಗುವುದಕ್ಕೆ ಕಾರಣಗಳು ಬೇಕು. ನಗು ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿದರೆ ಜೋಕುಗಳನ್ನು ಹುಡುಕಲು ಶುರು ಮಾಡುತ್ತಾರೆ. ಜೋಕ್ ಪುಸ್ತಕಗಳನ್ನು ಕೊಳ್ಳುತ್ತಾರೆ. ನೂರಾರು ರುಪಾಯಿ ಶುಲ್ಕ ಕಟ್ಟಿ ಲಾಫಿಂಗ್ ಕ್ಲಬ್ಬುಗಳಿಗೆ ಸೇರಿಕೊಂಡು ನಗುತ್ತಾರೆ. ಕೆಲವರು ತುಂಬಾ ಪರಿಶ್ರಮ ವಹಿಸಿ ನಗುವುದರಲ್ಲಿ ಗಂಭೀರವಾದ ಸಾಧನೆ ಮಾಡುತ್ತಾರೆ. ನಗುವುದು ಎಂದರೇನೇ ಎಲ್ಲಾ ಪ್ರಯತ್ನಪೂರ್ವಕ ಕ್ರಿಯೆಗಳನ್ನು ಮರೆಯುವುದು, ಜನರು ನಗುವುದನ್ನೂ ಪ್ರಯತ್ನ [...]
26 Apr
ಚರ್ಚೆ: ನಗುವುದಕ್ಕೂ ನಮಗೆ ವೈದ್ಯರ ಪ್ರಿಸ್ಕ್ರಿಪ್ಷನ್ ಬೇಕಾ?
ನಮ್ಮ ಬದುಕುಗಳು ನಗರ ಕೇಂದ್ರಿತವಾಗುತ್ತಾ ಹೋದಂತೆಲ್ಲಾ ನಾವು ಯಾಂತ್ರಿಕರಾಗುತ್ತಿದ್ದೇವಾ? ಈ ವ್ಯಾಪಾರಿ ಜಗತ್ತಿನ ಅವ್ಯಕ್ತ ಕಾನೂನುಗಳಿಗೆ ನಮ್ಮನ್ನು ನಾವು ಒಡ್ಡಿಕೊಂಡಿದ್ದೇವೆಯೇ? ನಮ್ಮನ್ನು ನಗಿಸುವುದಕ್ಕೂ ಒಬ್ಬ ಜೋಕರ್‌ನನ್ನು ಅಪಾಯಿಂಟ್ ಮಾಡಿಕೊಳ್ಳುವ ಅನಿವಾರ್ಯತೆಯನ್ನು ಸೃಷ್ಟಿಸಿಕೊಂಡಿದ್ದೇವಾ? ನಮಗೆ ನಗುವುದಕ್ಕೆ ಸಿನೆಮಾ, ಹಾಸ್ಯ ಲೇಖನ, ಕಾಲೆಳೆಯುವಿಕೆ, ಯಾರದೋ ಮೇಲಿನ ಜೋಕು, ಬೆಳ್ಳಂಬೆಳಗಿನಲ್ಲಿ ಪಾರ್ಕಿನಲ್ಲಿ ಫೀಸು ಪಡೆದು ನಗಿಸುವ ಲಾಫಿಂಗ್ ಕ್ಲಬ್ಬುಗಳು ಕೇವಲ ನೆಪಗಳಾ ಅಥವಾ ಅನಿವಾರ್ಯತೆಗಳಾ?
ನಮ್ಮ ಬದುಕಿನಿಂದ ನಗು ಕಾಣೆಯಾಗುತ್ತಿರುವುದು ಎಲ್ಲಿಂದ? ಮನುಷ್ಯರ ಮುಖವನ್ನೇ ನೋಡಬಯಸದ ನಮಗೆ ನಗುವಿಗೆ ಎಲ್ಲಿ ವ್ಯವಧಾನವಿರುತ್ತದೆ? ಪಕ್ಕದ [...]
Recent Comments