Posts Tagged ‘ನಗೆ ನಗಾರಿ ಡಾಟ್ ಕಾಮ್’

ತುಟಿಯರಳಿಸುವ ಕೆಮರಾ

ಸಾವಿರ ಅಕ್ಷರಗಳು ಕೊಡಲಾಗದ ಅನುಭವವನ್ನು ಕೇವಲ ಒಂದು ಚಿತ್ರಕೊಡುತ್ತದೆಯಂತೆ. ಆ ಒಂದು ಚಿತ್ರದ ಜೊತೆಗೆ ನಾಲ್ಕೇ ನಾಲ್ಕು ಪದಗಳು ರಾಜಿಯಾಗಿಬಿಟ್ಟರಂತೂ ಅವು ಕೊಡುವ ಅನುಭವ ವರ್ಣಿಸಲಾಗದ್ದು. ಇಂಥ ಚಿತ್ರ-ಪದಗಳ ಜುಗಲ್ ಬಂದಿಗಾಗಿ ನಗಾರಿ ತೆರೆದಿರುವ ಪುಟ ‘ನಗೆ ಚಿತ್ರ’

ಈ ಸಂಚಿಕೆ ಸ್ಯಾಂಪಲ್:

ದೇವರನ್ನು ಕಾಣುವ ಸುಲಭ ಉಪಾಯ!

Continue reading »

ನಗೆಚಿತ್ರ

ಸಾವಿರ ಅಕ್ಷರಗಳು ಕೊಡಲಾಗದ ಅನುಭವವನ್ನು ಕೇವಲ ಒಂದು ಚಿತ್ರಕೊಡುತ್ತದೆಯಂತೆ. ಆ ಒಂದು ಚಿತ್ರದ ಜೊತೆಗೆ ನಾಲ್ಕೇ ನಾಲ್ಕು ಪದಗಳು ರಾಜಿಯಾಗಿಬಿಟ್ಟರಂತೂ ಅವು ಕೊಡುವ ಅನುಭವ ವರ್ಣಿಸಲಾಗದ್ದು. ಇಂಥ ಚಿತ್ರ-ಪದಗಳ ಜುಗಲ್ ಬಂದಿಗಾಗಿ ನಗಾರಿ ತೆರೆದಿರುವ ಪುಟ ‘ನಗೆ ಚಿತ್ರ

ಈ ಸಂಚಿಕೆ ಸ್ಯಾಂಪಲ್:

ಹುಹ್! ಇನ್ನೆಷ್ಟು ಕಾಲ ಈ ಮನುಷ್ಯನನ್ನ ಸಹಿಸಬೇಕೋ…

Continue reading »

ಚರ್ಚೆ: ಡರ್ಟಿ ಜೋಕೆಂಬ ಬೇಲಿ ಹಾರುವ ಹುಮ್ಮಸ್ಸು!

 
ಕೆಲವು ಬಗೆಯ ಜೋಕುಗಳಿವೆ. ಅವುಗಳು ಸಾಮಾನ್ಯ ಜೋಕುಗಳಿಗಿಂತ ಹೆಚ್ಚು ಚಲಾವಣೆಯಲ್ಲಿರುತ್ತವೆ. ಮೊಬೈಲುಗಳಲ್ಲಿ ಕ್ಷಣಮಾತ್ರದಲ್ಲಿ ಪ್ರತ್ಯಕ್ಷವಾಗಿ ಮೊಬೈಲಿಗ ಕಣ್ಣಾಡಿಸಿ ಆಸ್ವಾದಿಸಿ, ಅಲ್ಲಿಂದ ನಾಲ್ಕೈದು ವಿಳಾಸದಾರರಿಗೆ ರವಾನೆಯಾದೊಡನೆಯೇ ಪುರ್ರೆಂದು ಮೊಬೈಲ್ ಅಂಗಳದಿಂದ ಅಂತರಿಕ್ಷಕ್ಕೆ ಹಾರಿ ಬಿಡುತ್ತವೆ.
ಅವುಗಳಿಗೆ ಎಲ್ಲೆಡೆಯಲ್ಲೂ ಪ್ರವೇಶವಿಲ್ಲ. ಜೋಕುಗಳ ಸಮಾಜದಲ್ಲಿ ಅವು ಅಸೃಶ್ಯರಿದ್ದಂತೆ. ಅವುಗಳಲ್ಲಿ ಯಾರ ಮೇಲೂ ವೈಯಕ್ತಿಕ ನಂಜು ಕಾರಲಾಗಿರುವುದಿಲ್ಲ. ವ್ಯಕ್ತಿ ಕೇಂದ್ರಿತವಾದ ಹೀಯಾಳಿಕೆಯಿರುವುದಿಲ್ಲ. ಯಾರಿಗೂ ನೋವಾಗುವಂತಹ ಜನಾಂಗೀಯ ನಿಂದನೆಯಾಗಲಿ ಇರುವುದಿಲ್ಲ. ಆದರೂ ಅವುಗಳು ‘ಘೆಟ್ಟೋ’ಗಳಲ್ಲಿ ಮಾತ್ರ ಅಸ್ತಿತ್ವ ಉಳಿಸಿಕೊಂಡಿರುತ್ತವೆ.
ಅವುಗಳ ಗುಣಮಟ್ಟವನ್ನು ನಿರ್ಲಕ್ಷಿಸಲಾಗುವುದಿಲ್ಲ. ಜೋಕೊಂದರ [...]

Continue reading »

ನಗೆ ನಗಾರಿ ಮಾಸಪತ್ರಿಕೆ ಮಾರುಕಟೆಯಲ್ಲಿ!

 
ನಗೆ ನಗಾರಿಯ ಸಾಮ್ರಾಜ್ಯದ ಸಮಸ್ತ ಪ್ರಜೆಗಳಿಗೂ ಸಂತಸದ ಸುದ್ದಿ.
ನಗೆ ನಗಾರಿ ಡಾಟ್ ಕಾಮ್ ತನ್ನ ಒಂದು ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಸಂದರ್ಭದಲ್ಲೇ ಈ ಸವಿ ಸುದ್ದಿಯನ್ನು ಹಂಚಿಕೊಳ್ಳಬೇಕಿತ್ತು. ಆದರೆ ಸಿದ್ಧತೆಯ ಕೊರತೆಯಿಂದ ಪ್ರಕಟಿಸಲು ಹಿಂದುಮುಂದು ನೋಡಿದೆವು. ಆದರೀಗ ಬಹುತೇಕ ನಿಶ್ಚಿತವಾಗಿದೆ. ‘ನಗೆ ನಗಾರಿ’ ಮಾಸಪತ್ರಿಕೆ ಇಂದಿನಿಂದ ನಿಮಗೆ ರಾಜ್ಯದ ಎಲ್ಲಾ ಪುಸ್ತಕದಂಗಡಿಗಳಲ್ಲಿ ಲಭ್ಯವಿದೆ.
ನಗೆ ನಗಾರಿಯ ಬ್ಲಾಗಿನಲ್ಲಿನ ವೈವಿಧ್ಯಮಯ ಹಾಸ್ಯದ ಸರಕನ್ನು ಆನಂದಿಸಿದ ಪ್ರತಿಯೊಬ್ಬರಿಗೂ ಈ ಪತ್ರಿಕೆಯ ನಮ್ಮ ಪ್ರಯತ್ನ ಆವಶ್ಯಕವಾಗಿ ಸಂತೋಷ ನೀಡುತ್ತದೆ [...]

Continue reading »

ಅಮ್ಮ ಫೋನೂ- ಬೋಂಡಾ ಜಾಮೂನೂ!

“ಬೆಂಗಳೂರು ಹುಡುಗೀರಂದ್ರೆ, ತಮ್ಮ ತೂಕ, ತಮ್ಮ ಮೇಕಪ್, ಫ್ಯಾಶನ್ ಮ್ಯಾಗಸೀನ್, ಫಿಲ್ಮಿ ಗಾಸಿಪ್ಸ್ ಗಳಲ್ಲೇ ಕಳೆದು ಹೋಗಿರುವ, ಕನ್ನಡದ ಗಂಧವೇ ಗೊತ್ತಿಲ್ಲದವರಂತೆ ಇಂಗ್ಲಿಷನ್ನೇ ತಮ್ಮ ಮಾತೃ ಭಾಷೆಯನ್ನಾಗಿಸಿಕೊಂಡಿರುವವರು ಎಂಬ ಕಲ್ಪನೆ ದಟ್ಟವಾಗಿರುವಾಗ ಬರೆಯುವ ಸಾಹಸಕ್ಕೆ ಕೈ ಹಾಕಲು ತುಸು ಹಿಂಜರಿಕೆ ಆಗುತ್ತಿದೆ. ಆದರೂ ಇನ್ನು ಬರೆಯದೇ ಇರುವುದಕ್ಕಾಗುವುದಿಲ್ಲವೆನಿಸಿ ಬ್ಲಾಗಿಂಗ್ ಶುರುವಿಟ್ಟುಕೊಂಡಿದ್ದೇನೆ!” ಎಂದೆನ್ನುತ್ತಾ ಹೇಮಾಂತರಂಗ ಬ್ಲಾಗು ತೆರೆದಿರುವ ಮಿಸ್ ಹೇಮಾ ಪವಾರ್ “ಬರವಣಿಗೆ, ನನ್ನ ಭಾವನೆಗಳನ್ನು ಹರಿಬಿಡಲು ನಾನು ಹುಡುಕಿಕೊಂಡ ದಾರಿಯಷ್ಟೆ. ಭೋರ್ಗರೆವ ಭಾವಗಳಿಗೆ ಅಕ್ಷರಗಳ ಬೊಗಸೆಯೊಡ್ಡಿ ಬ್ಲಾಗಿನ [...]

Continue reading »

ಆಂಡ್ ದಿ ವಿನ್ನರ್ ಈಸ್…

 
ನಗೆ ನಗಾರಿ ಡಾಟ್ ಕಾಮ್‌ನ ಮೊದಲನೇ ವರ್ಷದ ಹುಟ್ಟುಹಬ್ಬ ಭಾರಿ ಸಂಭ್ರಮ, ಸಡಗರದಿಂದ ನಡೆಯಿತು. ಕಾರ್ಯಕ್ರಮಕ್ಕೆ ಹಾಜರಾಗಿದ್ದ ಎಲ್ಲರೂ ಸಾಮ್ರಾಟರ ಪ್ರತಿಭೆಯನ್ನು ಹಾಡಿ ಹೊಗಳಿ ಅವರ ಕೃಪೆಗೆ ಪಾತ್ರರಾದರು. ಕಾರ್ಯಕ್ರಮದ ನಂತರ ಆಯೋಜಿಸಲಾಗಿದ್ದ ಭೂರಿ ಭೋಜನವನ್ನು ಸಾಂಗವಾಗಿ ಪೂರೈಸಿದ ಗಣ್ಯರು ಅಡುಗೆ ಭಟ್ಟನಾಗಿದ್ದ ಕುಚೇಲನನ್ನೂ ಹೊಗಳಿದ್ದು ಸಾಮ್ರಾಟರನ್ನು ಕೆರಳಿಸಿತು. ಕಾರ್ಯಕ್ರಮದ ಬಗ್ಗೆ ನಮ್ಮ ಚೇಲ ಕುಚೇಲ ಹಾಗೂ ನಮ್ಮ ಗತಕಾಲದ ಗೆಳೆಯ ತೊಣಚಪ್ಪನವರು ಸವಿವರವಾದ ವರದಿಯನ್ನು ನೀಡಲಿದ್ದಾರೆ. ನಾವು ಈಗ ನಮ್ಮ ಸ್ಪರ್ಧೆಗಳ ವಿಜೇತರನ್ನು ಘೋಷಿಸಲಿದ್ದೇವೆ…
ಮೊದಲ ಬಹುಮಾನ
    [...]

Continue reading »

ನಗೆ ನಗಾರಿ ಕಛೇರಿಗೆ ಸಿಬಿಐ ದಾಳಿ!

ಅಗ್ನಿ ಪರೀಕ್ಷೆಯಲ್ಲಿ ಸೀತಾ ಮಾತೆ ಡಿಸ್ಟಿಂಕ್ಷನ್ ಪಡೆದು ಪಾಸಾದ ಹಾಗೆಯೇ ಸಾಮ್ರಾಟರು ಸಿಬಿಐ ಪರೀಕ್ಷೆಯಲ್ಲಿ ರಾಜ್ಯಕ್ಕೇ ಮೊದಲ ಬಹುಮಾನವನ್ನು ಗಳಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ನಮ್ಮೆಲ್ಲಾ ವಿರೋಧಿಗಳಿಗೆ ನಾವು ಒಂದು ವಿಷಯ ಸ್ಪಷ್ಟ ಪಡಿಸಲು ಇಚ್ಚಿಸುತ್ತೇವೆ: ನಮ್ಮಲ್ಲಿಲ್ಲದ ಅಪ್ರಮಾಣಿಕತೆಯನ್ನು, ವಂಚನೆ ಬುದ್ಧಿಯನ್ನು ಇದೆ ಸಾಬೀತು ಮಾಡುವುದಕ್ಕೆ ಸ್ವತಃ ಆ ರಾಮಲಿಂಗ ರಾಜುವಿಗೂ ಸಾಧ್ಯವಿಲ್ಲ!

Continue reading »