Posts Tagged ‘ನಗೆ ನಗಾರಿ ವಾರ್ಷಿಕೋತ್ಸವ’

ನಗಾರಿ ಹುಟ್ಟು ಹಬ್ಬಕ್ಕೆ ಶುಭಾಶಯಗಳ ಸುರಿಮಳೆ!

ನಗೆ ನಗಾರಿ ಡಾಟ್ ಕಾಮ್‌ನ ವಾರ್ಷಿಕೋತ್ಸವ ಸಮಾರಂಭದ ಬಗ್ಗೆ ಸವಿರವಾದ ವರದಿಯನ್ನು ನೀಡಬೇಕಿದ್ದ ತೊಣಚಪ್ಪ ಹಾಗೂ ಕುಚೇಲರು ಪಾರ್ಟಿಯಲ್ಲಿನ ಪ್ರಸಾದ, ತೀರ್ಥದಿಂದ ‘ಸಮಾಧಿ’ ಸ್ಥಿತಿಯನ್ನು ತಲುಪುವುದರಿಂದ ಸಾಮ್ರಾಟರಾದ ನಾವೇ ಕುದುರೆಗಳ ಲಗಾಮು ಹಿಡಿಯಬೇಕಿದೆ. ಹೀಗಾಗಿ ವರದಿ ಕೊಂಚ ತಡವಾಗಲಿದೆ. ಆದರೆ ನಮ್ಮಹಾಗೂ ನಮ್ಮ ಪತ್ರಿಕೆಯ ಹುಟ್ಟು ಹಬ್ಬಕ್ಕೆ ನಮ್ಮ ಭಕ್ತ ವೃಂದವು ಪ್ರತಿಕ್ರಿಯಿಸಿರುವ ರೀತಿಯನ್ನು ನೆನೆಯದಿದ್ದರೆ ನಮಗೆ ಮನಃಶಾಂತಿ ಲಭ್ಯವಾಗುವುದಿಲ್ಲ.
ಗಣೇಶ್.ಕೆ
mareyabahudemba bhayadinda eegale abhinandisuttiddene.
aadare neevu nageyanna nandisabedi anta kelikolluttene.
ಪ್ರಸಾದ್
ನೂರ್ಕಾಲ ಬೆಳಗಲಿ ನಗೆಯ ದೀವಿಗೆ
ಅನುಗಾಲವೂ ಹರಿಯಲಿ [...]

Continue reading »

ಸಂಪಾದಕೀಯ: ಒಂದು ವರ್ಷದ ಬಸಿರನ್ನು ಇಳಿಸಿ…

 
ಅವನ್ನು ಸಾರ್ಥಕದ ಕ್ಷಣಗಳು ಎನ್ನುವರು. ಯೋಗಿಯೊಬ್ಬ ಹತ್ತಾರು ವರ್ಷಗಳ ಕಾಲ ಕಠಿಣ ತಪವನ್ನಾಚರಿಸಿ ಅನೇಕ ಸಿದ್ಧಿಗಳನ್ನು ಪಡೆದುಕೊಂಡು, ನಾನಾ ತಂತ್ರಗಳನ್ನು ಮೈಗೂಡಿಸಿಕೊಳ್ಳುತ್ತಿದ್ದರೂ ಅಂತಿಮವಾದ ಸಾಧನೆ ಮಾಡಿದಾಗ, ಆತನಿಗೆ ದೈವಸಾಕ್ಷಾತ್ಕಾರವಾದಾಗ ಅನುಭವಿಸುವ ರೋಮಾಂಚನದಂತಹುದು. ಓಟಗಾರನೊಬ್ಬ ಒಂದೊಂದೇ ಮೈಲುಗಲ್ಲುಗಳನ್ನು ದಾಟುತ್ತಾ ಸಂಭ್ರಮ ಪಟ್ಟರೂ ಸಹ ಕಡೆಯ ಗಮ್ಯವನ್ನು ಮುಟ್ಟಿ ನಿಂತಾಗ ಆಗುವ ಸಮಾಧಾನದಂತಹುದು. ಇದನ್ನು ನಾವು ಆ ದಿನ ಅನುಭವಿಸಿದೆವು ಎಂಬುದಕ್ಕೆ ನಮ್ಮ ಕಣ್ಣುಗಳಲ್ಲಿ ಅಪರೂಪಕ್ಕೆಂಬಂತೆ ಹರಿದ ಕಂಬನಿಗಳೇ ಸಾಕ್ಷಿ. ನಗೆ ನಗಾರಿಯ ವಾರ್ಷಿಕೋತ್ಸವಕ್ಕೆಂದು ಜಗತ್ತಿನಲ್ಲೇ ಅತ್ಯಂತ ರಹಸ್ಯಮಯವಾದ ಸ್ಥಳದಲ್ಲಿ [...]

Continue reading »

ಆಂಡ್ ದಿ ವಿನ್ನರ್ ಈಸ್…

 
ನಗೆ ನಗಾರಿ ಡಾಟ್ ಕಾಮ್‌ನ ಮೊದಲನೇ ವರ್ಷದ ಹುಟ್ಟುಹಬ್ಬ ಭಾರಿ ಸಂಭ್ರಮ, ಸಡಗರದಿಂದ ನಡೆಯಿತು. ಕಾರ್ಯಕ್ರಮಕ್ಕೆ ಹಾಜರಾಗಿದ್ದ ಎಲ್ಲರೂ ಸಾಮ್ರಾಟರ ಪ್ರತಿಭೆಯನ್ನು ಹಾಡಿ ಹೊಗಳಿ ಅವರ ಕೃಪೆಗೆ ಪಾತ್ರರಾದರು. ಕಾರ್ಯಕ್ರಮದ ನಂತರ ಆಯೋಜಿಸಲಾಗಿದ್ದ ಭೂರಿ ಭೋಜನವನ್ನು ಸಾಂಗವಾಗಿ ಪೂರೈಸಿದ ಗಣ್ಯರು ಅಡುಗೆ ಭಟ್ಟನಾಗಿದ್ದ ಕುಚೇಲನನ್ನೂ ಹೊಗಳಿದ್ದು ಸಾಮ್ರಾಟರನ್ನು ಕೆರಳಿಸಿತು. ಕಾರ್ಯಕ್ರಮದ ಬಗ್ಗೆ ನಮ್ಮ ಚೇಲ ಕುಚೇಲ ಹಾಗೂ ನಮ್ಮ ಗತಕಾಲದ ಗೆಳೆಯ ತೊಣಚಪ್ಪನವರು ಸವಿವರವಾದ ವರದಿಯನ್ನು ನೀಡಲಿದ್ದಾರೆ. ನಾವು ಈಗ ನಮ್ಮ ಸ್ಪರ್ಧೆಗಳ ವಿಜೇತರನ್ನು ಘೋಷಿಸಲಿದ್ದೇವೆ…
ಮೊದಲ ಬಹುಮಾನ
    [...]

Continue reading »

‘ಚಿತ್ರ’ಗುಪ್ತ ಸ್ಪರ್ಧೆ

ನಗೆ ನಗಾರಿಯ ಹುಟ್ಟು ಹಬ್ಬದ ಸಂಭ್ರಮಕ್ಕೆ ನಿನ್ನೆ ತಿಳಿಸಿದ ಹಾಗೆ ಕಾರ್ಯಕ್ರಮಗಳ ಆಯೋಜನೆ ಶುರುವಾಗಿದೆ.
ಮೊದಲ ಹಂತವಾಗಿ ‘ಚಿತ್ರ ಗುಪ್ತ’ ಸ್ಪರ್ಧೆಯನ್ನು ನಡೆಸಲು ತೀರ್ಮಾನಿಸುತ್ತಿದ್ದೇವೆ. ಇಲ್ಲಿ ಕೊಟ್ಟಿರುವ ಚಿತ್ರಕ್ಕೆ ಅತ್ಯಂತ ಮೊನಚಾದ, ಹಾಸ್ಯಯುಕ್ತವಾದ, ವ್ಯಂಗ್ಯೋಕ್ತಿಯೊಂದನ್ನು ನೀಡಬೇಕು. ನಿಮ್ಮ ಸಾಲು ಆದಷ್ಟು ಚಿಕ್ಕದಿರಲಿ, ಚಿಕ್ಕದಾಗಿರಲಿ.
ನಮ್ಮ ಹೆಸರಾಂತ ಅನಾಮಧೇಯ ತೀರ್ಪುಗಾರರು ನಿಮ್ಮ ಸಾಲುಗಳನ್ನು ಡಿಸೆಕ್ಟ್ ಮಾಡಲು ಸಿದ್ಧರಾಗಿ ನಿಂತಿದ್ದಾರೆ.

ನಿಮ್ಮ ಚಾಟೋಕ್ತಿಗಳನ್ನು ಈ ಬರಹಕ್ಕೆ ಕಮೆಂಟ್ ಹಾಕುವುದರ ಮೂಲಕ ತಿಳಿಸಬಹುದು. ಕಮೆಂಟು ಯಾವ ಹೆಸರಲ್ಲಾದರೂ ಬರೆಯಿರಿ ಆದರೆ ಸಂಪರ್ಕಕ್ಕಾಗಿ ನಿಮ್ಮ ಇಮೇಲ್ ವಿಳಾಸವನ್ನು [...]

Continue reading »