ನಗೆ ನಗಾರಿಯ ಸಾಮ್ರಾಜ್ಯದ ಸಮಸ್ತ ಪ್ರಜೆಗಳಿಗೂ ಸಂತಸದ ಸುದ್ದಿ.
ನಗೆ ನಗಾರಿ ಡಾಟ್ ಕಾಮ್ ತನ್ನ ಒಂದು ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಸಂದರ್ಭದಲ್ಲೇ ಈ ಸವಿ ಸುದ್ದಿಯನ್ನು ಹಂಚಿಕೊಳ್ಳಬೇಕಿತ್ತು. ಆದರೆ ಸಿದ್ಧತೆಯ ಕೊರತೆಯಿಂದ ಪ್ರಕಟಿಸಲು ಹಿಂದುಮುಂದು ನೋಡಿದೆವು. ಆದರೀಗ ಬಹುತೇಕ ನಿಶ್ಚಿತವಾಗಿದೆ. ‘ನಗೆ ನಗಾರಿ’ ಮಾಸಪತ್ರಿಕೆ ಇಂದಿನಿಂದ ನಿಮಗೆ ರಾಜ್ಯದ ಎಲ್ಲಾ ಪುಸ್ತಕದಂಗಡಿಗಳಲ್ಲಿ ಲಭ್ಯವಿದೆ.
ನಗೆ ನಗಾರಿಯ ಬ್ಲಾಗಿನಲ್ಲಿನ ವೈವಿಧ್ಯಮಯ ಹಾಸ್ಯದ ಸರಕನ್ನು ಆನಂದಿಸಿದ ಪ್ರತಿಯೊಬ್ಬರಿಗೂ ಈ ಪತ್ರಿಕೆಯ ನಮ್ಮ ಪ್ರಯತ್ನ ಆವಶ್ಯಕವಾಗಿ ಸಂತೋಷ ನೀಡುತ್ತದೆ [...]
Posts Tagged ‘ಪತ್ರಿಕೆ’
1 Apr
ನಗೆ ನಗಾರಿ ಮಾಸಪತ್ರಿಕೆ ಮಾರುಕಟೆಯಲ್ಲಿ!
17 Mar
ನೀವೂ ಜನಪ್ರಿಯ ಅಂಕಣಕಾರರಾಗಬಹುದು!
(ಮೊದಲ ಭಾಗ)
೪. ಗುರಿಯ ಸ್ಪಷ್ಟತೆಯಿರಲಿ
ಅಂಕಣ ಬರಹಗಾರನಿಗೆ ತನ್ನ ಅಂಕಣವನ್ನು ಓದುವವರು ಯಾರು ಎಂಬ ಬಗ್ಗೆ ಸ್ಪಷ್ಟತೆ ಇರಬೇಕು. ಆ ಸೂರ್ಯನಿಗೇ ಇಡೀ ಜಗತ್ತನ್ನು ತೃಪ್ತಿ ಪಡಿಸಲು ಸಾಧ್ಯವಿಲ್ಲ. ಹೀಗಿರುವಾಗ ಹುಲುಮಾನವನಾದ ಅಂಕಣಕಾರ ಎಲ್ಲರನ್ನೂ ಮೆಚ್ಚಿಸಬೇಕೆನ್ನುವುದು ಅಸಾಧ್ಯವಾದ ಸಂಗತಿ. ತಾನು ಮೆಚ್ಚಿಸಬೇಕಾದ್ದು ತನ್ನ ಅಂಕಣವನ್ನು ಓದುವ ವರ್ಗವನ್ನು ಎಂಬುದನ್ನು ಅಂಕಣಕಾರ ಬಹುಬೇಗ ಮನದಟ್ಟು ಮಾಡಿಕೊಳ್ಳಬೇಕು. ನಿಮ್ಮ ಅಂಕಣ ಬರಹಕ್ಕೆ ಯುವಕರೇ ಪ್ರಮುಖವಾದ ಓದುಗರು ಎನ್ನುವುದಾದರೆ ಓಂ ಪ್ರಕಾಶ್ ಸಿನೆಮಾದ ಡೈಲಾಗ್ ಮಾದರಿಯಲ್ಲಿ ಹೆಡ್ಡಿಂಗುಗಳನ್ನೂ ಲೇಖನದಲ್ಲಿ [...]
16 Mar
ಪ್ರಖ್ಯಾತ ಅಂಕಣಕಾರರಾಗುವುದು ಹೇಗೆ?
ಈ ಹಿಂದೆ ನಾವು ಉತ್ತಮ ಕವಿಯಾಗಲು ನೀಡಿದ್ದ ಪಂಚ ಸೂತ್ರಗಳನ್ನು ಬಳಸಿ ಅತ್ಯಂತ ಯಶಸ್ವಿ ಕವನಗಳನ್ನು ಗೀಚಿ ಕವಿಯಾದ ಅನೇಕರು ನಮ್ಮನ್ನು ಅಭಿನಂದಿಸಿದ ಹಿನ್ನೆಲೆಯಲ್ಲಿ ಅಂದು ಶುರು ಮಾಡಿದ್ದ ಸಾಹಿತ್ಯ ಅಭಿಯಾನವನ್ನು ಮುಂದುವರೆಸಲು ನಿರ್ಧರಿಸಿದ್ದೇವೆ.
ಈ ಮಾಲಿಕೆಯ ಎರಡನೆಯ ಆವೃತ್ತಿಯಲ್ಲಿ ನಾವು ಅತಿ ಸಾಮಾನ್ಯ ಬರಹಗಾರ ಕೂಡ ‘ಪ್ರಖ್ಯಾತ ಅಂಕಣಕಾರನಾಗುವುದು ಹೇಗೆ?’ ಎಂದು ತಿಳಿಸಿಕೊಡುತ್ತೇವೆ. ಎಂದಿನಂತೆ ನಮ್ಮ ಸಲಹೆ ಸೂಚನೆಗಳು ಅತ್ಯಂತ ಚುಟುಕಾಗಿಯೂ, ಸ್ಪುಟವಾಗಿಯೂ, ಪರಿಣಾಮಕಾರಿಯಾಗಿಯೂ ಇರುತ್ತವೆಂಬುದನ್ನು ನೆನಪಿಸಬೇಕಿಲ್ಲ. ಹಾಗಾದರೆ, ಭಯ, ಭಕ್ತಿ, ಶ್ರದ್ಧೆಗಳಿಂದ ನಮ್ಮ ಉಪದೇಶ ಕೇಳಲು [...]
14 Nov
ಸೀರಿಯಸ್ಲೀ ಸೀರಿಯಸ್ಸು: ಸತ್ತ ನೊಣ, ಹೆಗ್ಗಣಗಳ ಪರಿಮಳ!
‘ಕಂಡವರ ತಟ್ಟೆಯಲ್ಲಿನ ಸತ್ತ ನೊಣದ ಬಗ್ಗೆ ಮಾತನಾಡುವ ಮೊದಲು ನಿಮ್ಮ ತಟ್ಟೆಯಲ್ಲಿನ ಸತ್ತ ಹೆಗ್ಗಣವನ್ನು ತೆಗೆದುಹಾಕಿ’ ಎಂಬುದು ಚರ್ಚಾಸ್ಪರ್ಧೆಗಳಲ್ಲಿ ವೀರಾವೇಷದಿಂದ ಹೋರಾಡಿ ಹಲವು ಬಾರಿ ವಿಜಯಿಯಾಗಿ ವಿಜಯಮಾಲೆಯನ್ನು ಧರಿಸಿ ಮೆರೆದು ಜನರು ಮರೆತು ಹೋದವರೂ, ವೀರಮರಣವನ್ನಪ್ಪಿ ನಾಲ್ಕು ಕ್ಷಣ ನೆರೆದವರ ಮೌನಾಚರಣೆಯನ್ನು ಸ್ವೀಕರಿಸಿದವರೂ, ಮುಖಹೇಡಿಗಳಾಗಿ ಹೌಹಾರಿ ಬಸವಳಿದು ಹೋದವರೂ ಎಲ್ಲರಿಗೂ ಪ್ರಿಯವಾದ ವಾಕ್ಯ. ಇದರರ್ಥ ನಿಮ್ಮಲ್ಲಿರುವ ದೊಡ್ಡ ತಪ್ಪನ್ನು ಮೊದಲು ತಿದ್ದಿಕೊಳ್ಳಿ ಆಮೇಲೆ ಇನ್ನೊಬ್ಬರಲ್ಲಿರುವ ಸಣ್ಣ ತಪ್ಪಿನ ಬಗ್ಗೆ ಮಾತನಾಡಲು ನಿಮಗೆ ಅರ್ಹತೆ ಬರುತ್ತದೆ ಎಂದು. ಉದಾಹರಣೆಗೆ: [...]
Recent Comments