Posts Tagged ‘ಭಯೋತ್ಪಾದನೆ’

ಭಾರತವೂ ಭಯೋತ್ಪಾದಕ ರಾಷ್ಟ್ರ: ಕ್ರಿಕೆಟ್ ಜಗತ್ತು

 
(ನಗಾರಿ ಕಿರಿಕಿರಿ ಕ್ರಿಕೆಟ್ಟು ಬ್ಯೂರೋ)
ಅಫಘಾನಿಸ್ತಾನದ ಬಾಡಿಗೆ ಹಂತಕರು, ತಮ್ಮದೇ ಸೈನ್ಯದ ಬೇನಾಮಿ ಸೈನಿಕರು, ಬಲೂಚಿಸ್ತಾನದ ಬುಡಕಟ್ಟು ಪಂಗಡದ ಯೋಧರನ್ನು ಭಾರತದೊಳಕ್ಕೆ ನುಗ್ಗಿಸಿ ಭಾರತೀಯ ಸೇನೆಯ ತಾಣಗಳ ಮೇಲೆ, ಕಾಶ್ಮೀರದಲ್ಲಿನ ಮುಸ್ಲಿಮೇತರ ಜನರ ಮೇಲೆ ದಾಳಿ ನಡೆಸಿ ಅದನ್ನು ಜಿಹಾದ್, ಸ್ವಾತಂತ್ರ್ಯ ಹೋರಾಟ, ಧರ್ಮ ಯುದ್ಧ ಎಂದು ಕರೆದುಕೊಂಡು ಹೆಮ್ಮೆಯಿಂದ ಸೋಲುತ್ತಿದ್ದ ಪಾಕಿಸ್ತಾನ ತನ್ನ ಹೋರಾಟವನ್ನು ಹೊಸತೊಂದು ಎತ್ತರಕ್ಕೆ ಕೊಂಡೊಯ್ದದ್ದು ಇತ್ತೀಚೆಗೆ. ಆಟದ ಮೈದಾನದಲ್ಲಿ ನಡೆಯುವ ಕಾಳಗವನ್ನು ಬೌಂಡರಿ ಲೈನ್ ದಾಟುತ್ತಿದ್ದಂತೆಯೇ ಮರೆತು ಬಿಡಬೇಕು ಎಂದು ವಿವೇಕಿ [...]

Continue reading »

ಕಗ್ಗತ್ತಲ ನಡುವೆ ಬೆಳ್ಳಿಯ ಗೆರೆ

– ನಗೆ ಸಾಮ್ರಾಟ್

ತುಂಬಾ ದಿನಗಳಿಂದ ನಮ್ಮ ಕನ್ನಡದ ಪತ್ರಿಕಗಳನ್ನು, ಸುದ್ದಿ ವಾಹಿನಿಗಳನ್ನು ಗಮನಿಸುವುದನ್ನು ಮರೆತು ನಾವು ಇಂಗ್ಲೀಷ್ ಪೇಪರನ್ನು, ಟಿವಿ ಚಾನೆಲ್ಲುಗಳನ್ನು ಹುಚ್ಚರಂತೆ ಗಮನಿಸುತ್ತಿದ್ದೆವು. ಕಾರಣವಿಷ್ಟೇ, ಎಲ್ಲದರೂ ಒಂದೇ ಒಂದು ಕ್ಷಣಕ್ಕಾದರೂ ಬೆಳಕಿನ ಕಿರಣಗಳು ಮೂಡಬಹುದೇನೋ ಎಂದು!

ಇಡೀ ದೇಶವೇ ಸಮೂಹ ಸನ್ನಿಯ ಕಪಿಮುಷ್ಟಿಯಲ್ಲಿ ನರಳುತ್ತಿರುವುದನ್ನು,ನಮ್ಮ ಸುತ್ತ ಮುತ್ತಲಿನ ಜನರೆಲ್ಲರೂ ಯಾವುದೋ ಹಿಪ್ನಾಟಿಸಂಗೆ ಒಳಗಾದವರಂತೆ ವರ್ತಿಸುತ್ತಿರುವಾಗ ಈ ಭೂಮಿಯ ಮೇಲೆ ಆ ದೇವರು ಸ್ಯಾಂಪಲ್ಲಿಗಾಗಿಯಾದರೂ ಇರಲಿ ಎಂದು ಸೃಷ್ಟಿಸಿದ ವಿವೇಕಿಗಳು ಎಲ್ಲಿಹೋದರು ಎಂದು ಹುಡುಕುತ್ತಿದ್ದೆವು. ಸಮೂಹ [...]

Continue reading »

ಸ್ಟೇಟ್ ಲೆಸ್ ಉಗ್ರವಾದಿಗಳು ಬರುವುದು ಸ್ವರ್ಗದಿಂದ

(ನಗೆ ನಗಾರಿ ನೆರೆ ‘ಹೊರೆ’ ಬ್ಯೂರೋ)
ದೊಡ್ಡಣ್ಣನೊಂದಿಗೆ ಇದ್ದರೆ ತಾನು ಉದ್ಧಾರವಾಗುವುದಿಲ್ಲ. ಸದಾ ಆತ ತೊಟ್ಟು ಬಿಟ್ಟ ಅಂಗಿಯನ್ನು, ಆತ ಬಳಸಿ ಬಿಟ್ಟ ಪಾಠಿ ಚೀಲವನ್ನು ಸಹಿಸಿಕೊಳ್ಳುತ್ತಾ ಎರಡನೆಯ ದರ್ಜೆಯವನಾಗಿ ಬದುಕಬೇಕು. ನಾನು ಬೇರೆಯಾಗಿ ಹೋಗುತ್ತೇನೆ. ನನ್ನ ಬದುಕನ್ನು ನಾನು ಕಟ್ಟಿಕೊಳ್ಳುತ್ತೇನೆ. ನನ್ನ ಕಾಲುಗಳ ಮೇಲೆ ನಾನು ನಿಲ್ಲುತ್ತೇನೆ, ಯಾರ ಹಂಗೂ ಇಲ್ಲದೆ ಬೆಳೆದು ನಿಂತು ನಾನು ಜಗತ್ತಿಗೆ ಮಾದರಿಯಾಗುತ್ತೇನೆ ಎಂದು ತನ್ನನ್ನು ಭಾರತವೆಂಬ ದೇಶದಿಂದ ಬೇರ್ಪಡಿಸಿಕೊಂಡು ಪಾಕ್(ಪವಿತ್ರ)ಸ್ಥಾನ್(ನೆಲ) ಎಂದು ಕರೆದುಕೊಂಡ ದೇಶದಲ್ಲಿ ಮಣ್ಣಿನ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿರುವುದು [...]

Continue reading »

ಸಂಪಾದಕೀಯ : ನಾವಿನ್ನೂ ಬದುಕಿದ್ದೇವೆ!

ಬಗಲಲ್ಲೇ ಕೂತ ಶತ್ರು ನಮ್ಮೊಡನೆ ಹರಟೆಗೆ ಕೂತವನಂತೆ ವರ್ತಿಸುತ್ತಾ ಒಳಗೊಳಗೇ ಕತ್ತಿ ಮಸೆಯುತ್ತಾ, ತನ್ನ ಆಯುಧಗಳನ್ನು, ಮುಳ್ಳುಗಳನ್ನು ಹರಿತಗೊಳಿಸುತ್ತಾ, ಅವುಗಳನ್ನು ಪರೀಕ್ಷಿಸುವ ಮನಸ್ಸಾದಾಗ ನಮ್ಮ ಮೇಲೆ ಪ್ರಯೋಗಿಸುತ್ತಾ ಹತ್ತು ಇಪ್ಪತ್ತೋ, ನೂರೂ, ಸಾವಿರವೋ ಹೀಗೆ ಲೆಕ್ಕ ಹಿಡಿಯುವ ಪ್ರಯಾಸ ತೆಗೆದುಕೊಳ್ಳದೆ ತಿಗಣೆಗಳಂತೆ ನಮ್ಮನ್ನು ಹೊಸಕಿ ಹಾಕುತ್ತಿದ್ದಾನೆ. ಈ ಕಾರ್ಯಕ್ರಮ ತೀರಾ ಇತ್ತೀಚಿನಮುಂಬೈನ ನಡುಗಿದಲ್ಲವಾದರೂ ಮೊನ್ನೆ ಸಿ ಹಾಕಿದ ಭಯೋತ್ಪಾದಕರ ದಾಳಿ ಹಾಗೂ ಘಟಿಸಿದ ಭೀಕರ ಕಾಳಗ, ಮೃತರಾದ ದೇಶ ವಿದೇಶಗಳ ನಾಗರೀಕರು, ವೀರ ಸೇನಾನಿಗಳು, ಟಿವಿಯಲ್ಲಿ ಧ್ವನಿಯೆತ್ತದೆ [...]

Continue reading »

ಸೀರಿಯಸ್ಲೀ ಸೀರಿಯಸ್ಸು: ಸತ್ತ ನೊಣ, ಹೆಗ್ಗಣಗಳ ಪರಿಮಳ!

‘ಕಂಡವರ ತಟ್ಟೆಯಲ್ಲಿನ ಸತ್ತ ನೊಣದ ಬಗ್ಗೆ ಮಾತನಾಡುವ ಮೊದಲು ನಿಮ್ಮ ತಟ್ಟೆಯಲ್ಲಿನ ಸತ್ತ ಹೆಗ್ಗಣವನ್ನು ತೆಗೆದುಹಾಕಿ’ ಎಂಬುದು ಚರ್ಚಾಸ್ಪರ್ಧೆಗಳಲ್ಲಿ ವೀರಾವೇಷದಿಂದ ಹೋರಾಡಿ ಹಲವು ಬಾರಿ ವಿಜಯಿಯಾಗಿ ವಿಜಯಮಾಲೆಯನ್ನು ಧರಿಸಿ ಮೆರೆದು ಜನರು ಮರೆತು ಹೋದವರೂ, ವೀರಮರಣವನ್ನಪ್ಪಿ ನಾಲ್ಕು ಕ್ಷಣ ನೆರೆದವರ ಮೌನಾಚರಣೆಯನ್ನು ಸ್ವೀಕರಿಸಿದವರೂ, ಮುಖಹೇಡಿಗಳಾಗಿ ಹೌಹಾರಿ ಬಸವಳಿದು ಹೋದವರೂ ಎಲ್ಲರಿಗೂ ಪ್ರಿಯವಾದ ವಾಕ್ಯ. ಇದರರ್ಥ ನಿಮ್ಮಲ್ಲಿರುವ ದೊಡ್ಡ ತಪ್ಪನ್ನು ಮೊದಲು ತಿದ್ದಿಕೊಳ್ಳಿ ಆಮೇಲೆ ಇನ್ನೊಬ್ಬರಲ್ಲಿರುವ ಸಣ್ಣ ತಪ್ಪಿನ ಬಗ್ಗೆ ಮಾತನಾಡಲು ನಿಮಗೆ ಅರ್ಹತೆ ಬರುತ್ತದೆ ಎಂದು. ಉದಾಹರಣೆಗೆ: [...]

Continue reading »

ಪ್ರಧಾನಿಯವರ ಆರೋಗ್ಯ ಕಾಪಾಡಲು ಮನವಿ

(ನಗಾರಿ  ರಾಷ್ಟ್ರೀಯ ಸುದ್ದಿ ಬ್ಯೂರೋ)

ಕಡೆಗೂ ತಾವು ವಿದೇಶಿ ಹಸ್ತಗಳ ಹಿಡಿತದಲ್ಲಿಲ್ಲ ಎಂಬುದನ್ನು ಮಾನುಅ ನಿಧಾನಿ ಮೋಹನ ಮನ ಸಿಂಗರು ಕಳೆದ ವಿಶ್ವಾಸಮತ ಕೋರಿಕೆಯ ಸಂದರ್ಭದಲ್ಲಿ ಜಗಜ್ಜಾಹೀರು ಮಾಡಿದ್ದಾರೆ. ದೇಶದ ಆಮ್ ಆದ್ಮಿಗೆ ನಮ್ಮ ನಿಧಾನಿ ತಮ್ಮ ಸ್ವಂತ ಮೆದುಳಿನಿಂದಲೇ ದೇಶವನ್ನು ಮುಂದಕ್ಕೆ ಓಡಿಸುತ್ತಿದ್ದಾರೆ ಎಂಬ ಸಮಾಧಾನ ಸಿಕ್ಕಲು ನಾಲ್ಕು ವರ್ಷ ಬೇಕಾಯಿತು. ಹೀಗಿರುವಾಗ ನಮ್ಮ ನಿಧಾನಿಯವರ ‘ಖಾಸಗಿ ಆರೋಗ್ಯ’ ನೋಡಿಕೊಳ್ಳುವ ವೈದ್ಯರು ನಗೆ ಸಾಮ್ರಾಟರೊಂದಿಗೆ ಮಾತನಾಡಲು ಸಮಯ ಮಾಡಿಕೊಂಡರು.
‘ಯಾವುದೇ ಮನುಷ್ಯನಿಗೆ ದಿನನಿತ್ಯದ ಚಟುವಟಿಕೆಯ ಜೊತೆಗೆ ದೇಹಾರೋಗ್ಯವನ್ನು ಜಬರ್ದಸ್ತಾಗಿ [...]

Continue reading »