Tag Archives: ಮಜಾವಾಣಿ

ಬ್ಲಾಗ್ ಬೀಟ್ 22

18 Jul

 

ನಾವು ಮಾಡುವ ತಪ್ಪನ್ನು ನಮಗಿಂತಾ ಚೆನ್ನಾಗಿ ಯಾರ್ಯಾರು ಮಾಡಿದ್ದಾರೆ ಎಂದು ವಿವರವಾಗಿ ದಾಖಲಿಸುವ ಕಲೆಯನ್ನೇ ವಿಮರ್ಶೆ ಎನ್ನುವುದು. ನಮ್ಮ  ಪ್ರಮುಖ ಪತ್ರಿಕೆಗಳು ಇದನ್ನು ಮಿರ್ಚಿ, ಮಸಾಲಾ ಹೆಸರಿನಲ್ಲಿ ಮಾಡುತ್ತಿವೆ. ಪ್ರತಿ ಸಂಚಿಕೆಯಲ್ಲಿ ಇದನ್ನೇ ನಾವು ‘ಬ್ಲಾಗ್ ಬೀಟ್’ ಹೆಸರಿನಲ್ಲಿ ಮಾಡುತ್ತಿದ್ದೇವೆ.

ನಮ್ಮ ವಿಮರ್ಶೆಯ ಮೊನೆಗೆ ನಿಮ್ಮ ಬ್ಲಾಗೂ ತಾಕಬೇಕೆಂದಿದ್ದರೆ ಇಲ್ಲೊಂದು ಕಮೆಂಟ್ ಹಾಕಿ.

……………………..

ಬೊಗಳೆ

 

‘ಸ್ವಂತ ಮನೆ’ಯನ್ನು ಕಟ್ಟಿಕೊಳ್ಳುವುದರಲ್ಲಿ ಮಜಾವಾಣಿ ಆಯ್ತು ಈಗ ಬೊಗಳೆಯ ಸರದಿ! ನಾವಿನ್ನೂ ವರ್ಡ್ ಪ್ರೆಸ್ಸೆಂಬ ಮನೆ ಮಾಲೀಕನ ಮರ್ಜಿಯಲ್ಲಿ ಬದುಕುತ್ತಾ ಬಾಡಿಗೆ ಮನೆ ಸೊಗಸು ನೀವೇನು ಬಲ್ಲಿರಿ, ಈ ಜಗತ್ತೇ ಬಾಡಿಗೆ ಮನೆ, ಈ ದೇಹ ಬಾಡಿಗೆ ಮನೆ… ಬಾಡಿಗೆತನಕ್ಕೆಲ್ಲಿ ಕೊನೆ ಎಂದು ದೇವದಾಸ ಪದ ಹಾಡಿಕೊಳ್ಳುತ್ತಾ ಇದ್ದೇವೆ.

ಸ್ವಂತ ಮನೆ ಕಟ್ಟಿಕೊಂಡಿರುವ ಬೊಗಳೆಯಲ್ಲಿ ಎಂಪಿಗಳು ಎಮ್ಮೆಗಳಾಗಲು ಒಪ್ಪಲಿಲ್ಲವೇಕೆ ಎಂಬ ವರದಿಯಿದೆ.

ಮೋಟುಗೋಡೆ

 

ಮೋಟುಗೋಡೆಗೆ ಎದುರಾಗಿ ಚಲ್ಲಣವಿಲ್ಲದ ಚೋಟುಗಳನ್ನು ನಿಲ್ಲಿಸಿ ನೋಡಿಕೊಳ್ಳಿ ಎಂದು ಸವಾಲೆಸೆದು ತಲ್ಲಣ ಸೃಷ್ಟಿಸಿರುವ ಮೋಟುಗೋಡೆ ಬ್ಲಾಗಿನಲ್ಲಿ ಖ್ಯಾತರು ಮೋಟುಗೋಡೆಯನ್ನು ಜಿಗಿದು ಮಾಡಿದ ಸಾಹಸದ ದಾಖಲಾತಿ ಮುಂದುವರೆದಿದೆ. ಗಂಗಾಧರ ಚಿತ್ತಾಲರ, ಅಡಿಗರ ಗೋಡೆ ದಾಟಿದ ಸಾಹಸಗಳು ಇಲ್ಲಿವೆ

ಕೆಂಡಸಂಪಿಗೆ

 

ಮುದ್ರಣಕ್ಕೆ ಕಾಗದವನ್ನು ಬಳಸದ, ವರದಿಗಾರರಿಗೆ, ಬರಹಗಾರರಿಗೆ , ಅನಾಮಿಕ ಕಮೆಂಟುದಾರರಿಗೆ ಟಿಎ, ಡಿಎ, ಬಾಟಾ ಕೊಡದ   ಕೆಂಡಸಂಪಿಗೆಯಲ್ಲಿ ಕಾಸ್ಟ್ ಕಟಿಂಗ್ ನಡೆಯುತ್ತಿದೆಯಾ ಎಂಬ ಸಂಶಯ ಸಾಮ್ರಾಟರಿಗೆ ಬಂದಿದೆ.

ಜಗತ್ತಿನಾದ್ಯಂತ ಪತ್ರಿಕೆಗಳು ತಮ್ಮ ಹೆಚ್ಚುವರಿ ವರದಿಗಾರರನ್ನು, ಪ್ರೂಫ್ ತಿದ್ದುವ ಬುದ್ಧಿವಂತರನ್ನು ಮನೆಗೆ ಕಳಿಸುತ್ತಿದ್ದರೆ ಕೆಂ.ಸಂದಲ್ಲಿ ಅಪ್ರತಿಮ ವರದಿಗಾರ ಸುದ್ದಿ ಕ್ಯಾತನನ್ನೇ ಹೊರಗೆ ಅಟ್ಟಲಾಗಿದೆ.

ಈ ಬಗ್ಗೆ ಕೆಂ.ಸಂದ ಅತಿಥಿ ಸಂಪಾದಕರು ಕೊಂಚ ಗಮನ ಹರಿಸಲಿ ಎಂಬುದು ನಗೆ ಸಾಮ್ರಾಟರ ಕೋರಿಕೆ.

ಇನ್ನು ಅತಿಥಿ ಸಂಪಾದಕರ ಹೊಸತೊಂದು ಐಡಿಯಾ ಬಗ್ಗೆ ನಮ್ಮ ಸಂಪೂರ್ಣ ಬೆಂಬಲವಿದೆ.

ಬ್ಲಾಗ್ ಬೀಟ್ 20

7 May

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

……………………………………………………

ಟೂನಂಗಡಿ 001

ಟೂನಂಗಡಿ ತೆರೆದು ಕೂತಿರುವ ಅಮೃತ್.ವಿ ಉದಯವಾಣಿಯಲ್ಲಿ ಪ್ರಕಟವಾದ ತಮ್ಮ ಕಾರ್ಟೂನುಗಳಲ್ಲಿ ಕೆಲವನ್ನು ಬ್ಲಾಗಿಗೆ ಹಾಕಿರುವುದು ಬೀಟ್ ಹೊರಟ ಸಾಮ್ರಾಟರ ಕಣ್ಣಿಗೆ ಬಿತ್ತು. ಹಾಗೆ ಕಣ್ಣಿಗೆ ಬಿದ್ದದ್ದನ್ನು  ಸಾವಕಾಶವಾಗಿ ಹೊರಗೆ ತೆಗೆದು ಅವರು ಇಲ್ಲಿ ಹಾಕಿದ್ದಾರೆ.

ಪಂಚ್ ಲೈನು

ಹುಡುಗಿಯರ ವಿಷಯದಲ್ಲೂ ರಾಜಕಾರಣದಲ್ಲೂ ತಲಾ ಒಂದೊಂದಾಗಿ ಪಿ.ಎಚ್.ಡಿ ಮಾಡುತ್ತಿರುವಂತೆ ಕಾಣುವ ಪಂಚ್ ಲೈನ್ ಗಣೇಶರು ಹುಡುಗಿಯರ ಮನಸ್ಸು ಗೆಲ್ಲೋದು ಚುನಾವಣೆ ಗೆಲ್ಲೋದೂ ಆಲ್ಮೋಸ್ಟ್ ಸೇಮ್ ಅಂತಾರೆ. ಹೇಗೆ ಅಂದ್ರಾ? ಇಲ್ ನೋಡಿ…

ಪುಗಸಟ್ಟೆ

ರಾಜಕೀಯದಲ್ಲಿನ ಎಡದ ಬಲ ಹಾಗೂ ಬಲದ ಎಡದ ಸುಳಿಯಲ್ಲಿ ಪುಗಸಟ್ಟೆ ಉಪದೇಶ ಕೊಡುವ ಬ್ಲಾಗಿಗರು ಒಂದು ಗಂಭೀರ ಪ್ರಶ್ನೆ ಕೇಳಿದ್ದಾರೆ. ‘ಈ ಘಟನೆ’ ಭಾರತದಲ್ಲಿ ನಡೆಯುವುದು ಯಾವಾಗ ಎಂಬುದು ಅವರ ಪ್ರಶ್ನೆ. ಇದಕ್ಕೆ ಉತ್ತರಿಸಬೇಕಾದಾವರು, ಮಾತನಾಡದೆ ಮಾಡಿ ತೋರಿಸುವವರನ್ನು ಹುಡುಕಿ ನಮ್ಮ ಚೇಲ ದೇಶಾಂತರ ಹೊರಟಿದ್ದಾನೆ.

ಬೊಗಳೆ

ಅಶಿಕ್ಷಿತರು, ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದವರೇ ತುಂಬಿ ಹೋಗಿರುವ ರಾಜಕೀಯ ರಂಗಕ್ಕೆ ಸುಶಿಕ್ಷಿತರು ಧುಮುಕುತ್ತಿರುವ ವಿದ್ಯಮಾನದ ಸಮಗ್ರ ವರದಿಯನ್ನು ಬೊಗಳೆ ಬ್ಯೂರೋ ಪ್ರಕಟಿಸಿದೆ. ಮಾನವಿಲ್ಲದ ದಂಡ ಪಿಂಡಗಳಾದ ರಾಜಕಾರಣಿಗಳಿಗೆ ಮಾನದಂಡವನ್ನು ವಿಧಿಸುವ ಮಹೋನ್ನತ ಕಾರ್ಯಕ್ಕೆ ಕೈ ಹಾಕಿದೆ. ಅವರ ಸಾಹಸಕ್ಕೆ ಸಂತಾಪ ಸೂಚಿಸುತ್ತಾ ನಾವು ಅಲ್ಲಿಂದ ಪರಾರಿಯಾಗಿದ್ದೇವೆ.

ಮೋಟುಗೋಡೆ

ಇರುವ ಮೋಟು ಗೋಡೆಯನ್ನು ಎಗರಿ ಎಗರಿ ಜಿರಾಫೆಯಂತೆ ಎತ್ತರವಾಗಿರುವ ಮೋಟುಗೋಡೆ ಬಳಗ ಕಂಪ್ಯೂಟರ್ ಕರ್ಮಕಾಂಡವನ್ನು ವರದಿ ಮಾಡಿದೆ. ರಿಸೆಷನ್ ಸಮಯದಲ್ಲಿ ಎಲ್ಲರನ್ನೂ ಕಾಡುತ್ತಿರುವ ಕಂಪ್ಯೂಟರ್ ಕರ್ಮ ಕಾಂಡವಲ್ಲ ಇದು. ಇದು ಮೋಟುಗೋಡೆಯ ಸ್ಪೆಷಲ್ ‘ಡಿಕ್’ಆಕ್ಷನ್!

ಮಜಾವಾಣಿ

ಮಜಾವಾಣಿ ಪತ್ರಿಕೆ ಈಗ ಮೈತುಂಬಿಕೊಂಡು ನಿಂತಿದೆ. ಅಗ್ರ ರಾಷ್ಟ್ರೀಯ ವಾರ್ತೆಯಿಂದ ಹಿಡಿದು ವಿಶೇಷ ಸಂದರ್ಶನದವರೆಗೆ ಎಲ್ಲಾ ವಿಭಾಗಗಳಲ್ಲೂ ನೈಪುಣ್ಯತೆ ಮೆರೆದಿದೆ.

ಈ ಸಂಚಿಕೆಯಲ್ಲಿ ಹಿನ್ನೆಲೆ ಕೆಮ್ಮು ಕಲಾವಿದ ದಮ್ಮುಲ ಕೃಷ್ಣಪ್ಪನವರ ಅಪರೂಪದ ಸಂದರ್ಶವನ್ನು ಪ್ರಕಟಿಸಲಾಗಿದೆ. ಕೆಮ್ಮಾಭಿಮಾನಿಗಳು ಹಾಗೂ ದಮ್ಮಾಭಿಮಾನಿಗಳು ಅವಶ್ಯಕವಾಗಿ ಓದಲೇಬೇಕಾದ ಸಂದರ್ಶನವಿದು.

ಬ್ಲಾಗ್ ಬೀಟ್ 17

2 Feb

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

……………………………………………………

 

ವಾರೆ ಕೋರೆ ಬಿಡುಗಡೆ

ಜಗತ್ತಿನಾದ್ಯಂತ ಭಾರಿ ಕುತೂಹಲ ಉಂಟು ಮಾಡಿದ್ದ ಕನ್ನಡ ಹಾಸ್ಯ ಪತ್ರಿಕೆ ವಾರೆ ಕೋರೆ ಬಿಡುಗಡೆಯಾಯಿತು. ಕನ್ನಡ ನಾಡಿನಲ್ಲಿ ತುಂಟರಗಾಳಿಯನ್ನು ಎಬ್ಬಿಸಲು ಸಂಕಲ್ಪ ತೊಟ್ಟಿರುವ ಪ್ರಕಾಶ್ ಶೆಟ್ಟಿಯವರಿಗೆ ಅಭಿನಂದನೆಗಳು.

 

ಪತ್ರಿಕೆ ಬಿಡುಗಡೆಯ ಫೊಟೊ… ನಿದ್ರೇವೇಗೌಡರ ಅ‘ಮೃತ’ ಹಸ್ತದಿಂದ ಪತ್ರಿಕೆ ಬಿಡುಗಡೆ

KPN photo

ಬಿಡುಗಡೆ ಕಾರ್ಯಕ್ರಮದ ವರದಿ…

press

 

ಬೊಗಳೆ ರಗಳೆ

ವಸ್ತುನಿಷ್ಠ ಹಾಗೂ ವ್ಯಕ್ತಿ ಕಷ್ಟ ವರದಿಗಾರಿಕೆಯಲ್ಲಿ ಎತ್ತಿದ ಕೈ ಎಂಬ ಕುಖ್ಯಾತಿಯನ್ನು ಸಂಪಾದಿಸಿ ಸುಸ್ತಾಗಿರುವ ಬೊಗಳೆ ರಗಳೆ ಬ್ಯೂರೋ ಬೇರೆಲ್ಲಾ ಪತ್ರಿಕೆಗಳು ವರದಿ ಮಾಡದ ಸುದ್ದಿಗಳನ್ನು ವರದಿ ಮಾಡುವ ಕಾಯಕವನ್ನು ಮುಂದುವರೆಸಿದೆ.

ಕರುನಾಟಕದ ಅಮುಖ್ಯಮಂತ್ರಿಯವರು ಬೆಳಗಿನ ಉಪಹಾರಕ್ಕೆ ಇಡ್ಲಿ ವಡೆಯನ್ನು ತಿನ್ನುತ್ತಾರೆ ಎಂಬ ಸುದ್ದಿಯನ್ನು ಬೆನ್ನತ್ತಿ ವಿಸ್ತೃತವಾದ ವರದಿಯನ್ನು ಮಾಡಿದ್ದಾರೆ.

“ರಾಜ್ಯದ ಅಮುಖ್ಯಮಂತ್ರಿಗಳು ಬೆಳಗ್ಗಿನ ಉಪಾಹಾರಕ್ಕೆ ಇಡ್ಲಿ ವಡೆ ತಿನ್ನುತ್ತಾರೆ ಎಂದು ವರದ್ದಿಯಾಗಿರುವುದು ತನಿಖೆಗೆ ಅರ್ಹ ಎಂದು ಬೊಗಳೂರು ಓದುಗರೆಲ್ಲರೂ ಪ್ರತಿಭಟನೆ ಮಾಡಿರುವುದರಿಂದ ಒತ್ತಡಕ್ಕೆ ಮಣಿದ ನಮ್ಮ ಅನ್ವೇಷಣಾ ಬ್ಯುರೋ, ರದ್ದಿಗಾರರನ್ನು ಅಟ್ಟಾಡಿಸಿ ಕಳುಹಿಸಿತು.”

ಸುದ್ದಿಗೆ ಸಂಬಂಧ ಪಟ್ಟವರು ಪಡವರು ಹೀಗೆ ಯಾರ್ಯಾರನ್ನೆಲ್ಲಾ ಹಿಡಿದು ಸುದ್ದಿಯನ್ನು ಪಡೆಯಬೇಕು ಎಂಬುದಕ್ಕೆ ಯುವ ಉತ್ಸಾಹಿ ಪತ್ರಿಕೋದ್ಯಮದ ವಿದ್ಯಾರ್ಥಿನಿಯರಿಗೆ ಈ ವರದಿ ದಾರಿ ದೀಪವಾಗಲಿದೆ.

 

ಪಂಚ್ ಲೈನ್

ಓದುಗರನ್ನು ಗಾಬರಿ ಪಡಿಸುವುದಕ್ಕಾಗಿಯೋ ಇಲ್ಲವೇ ಓಡಿಸುವುದಕ್ಕಾಗಿಯೋ ಹೊಸ ಹೊಸ ಅವತಾರಗಳನ್ನೆತ್ತುವೆ ಎಂದು ವೀರ ಪ್ರತಿಜ್ಞೆ ಮಾಡಿರುವ ಪಂಚ್ ಲೈನ್ ಧೀರ ಗಣೇಶರು ಪರೀಕ್ಷೆಯ ನಂತರ ಪಂಚ್ ಲೈನಿಗೆ ಮರಳುವುದಾಗಿ ಮಾತು ಕೊಟ್ಟಿದ್ದರು. ಆದರೆ ವೇದಿಕೆಯ ಮೇಲೆ ನಾಟಕದ ಡೈಲಾಗಿನ ಪಂಚನ್ನೂ, ಲೈನನ್ನೂ ಮರೆತಂತೆ ಬ್ಲಾಗನ್ನು ಮರೆತಿರುವ ಹಾಗಿದೆ. ಅವರಿಗೆ ಈ ಮೂಲಕ ಸಾಮ್ರಾಟರುನ ನೆನಪಿಸುವುದೆಂದರೆ, ಮಾತು ಉಳಿಸಿಕೊಳ್ಳದಿದ್ದ ಆ ಶ್ರೀಕೃಷ್ಣನನ್ನೇ ಜನರು ಮರೆತು ‘ದೇವರಿದ್ದಾನಾ?’ ಎಂದು ಪ್ರಶ್ನಿಸುತ್ತಿದ್ದಾರೆ, ಇನ್ನು ಅವರಂತಹ ಹುಲುಮಾನವರ ಗತಿ ಏನು? ಆದಷ್ಟು ಬೇಗ ಗಣೇಶ್ ಪಂಚಿನ ಮೇಲೆ ಪಂಚುಗಳನ್ನು ರವಾನಿಸಲಿ ಎಂಬುದು ನಮ್ಮ ಅಶಯ.

 

ಮಜಾವಾಣಿ

ಎಲ್ಲಿ ಬೇಲಿಗಿಲ್ಲವೋ ಅರಿವು, ಎಲ್ಲಿ ಗಾಳಿಗಿಲ್ಲವೋ ಭಯವೂ, ಎಲ್ಲಿಲ್ಲವೋ ಸತ್ಯದ ಸುಳಿವು ಅಲ್ಲಿ ನಾವಿರುತ್ತೇವೆ ಎಂದು ಅಭಯ ನೀಡಿರುವ ಮಜಾವಾಣಿಯ ಸಂಪಾದ ಮಹಾಶಯರು ವಾಣಿಯನ್ನು ಮರೆತು ‘ಮಜಾ’ ಮಾಡುತ್ತಿರುವಂತಿದೆ ಎಂದು ಸಾಮ್ರಾಟರು ಗಡ್ಡ ಬೋಳಿಸುವ ಸಂಸ್ಥೆಯ ನೌಕರರು ಆಡಿಕೊಳ್ಳುತ್ತಿದ್ದಾರೆ.

ಬ್ಲಾಗ್ ಸ್ಪಾಟಿನಿಂದ ಫೇರಿಕಿತ್ತ ಮೇಲೆ ಮಜಾವಾಣಿ ಸೊರಗಿದೆಯೇ ಎಂಬ ಬಗ್ಗೆ ಲೋಕಾಯುಕ್ತ ತನಿಖೆಯನ್ನೂ, ಮಜಾವಾಣಿಯ ಸಂಪಾದಕರು ಪತ್ರಿಕಾ ಧರ್ಮ ಮೆರೆಯುವುದಕ್ಕೆ ಮಂಗಳೂರಿನ ಕಡೆಯ ಅಮ್ನೇಶಿಯಾ ಪ್ರವೇಶಿಸಿ ದಿವಂಗತರಾದರೋ ಎಂಬುದನ್ನು ಪತ್ತೆಹಚ್ಚಲು ನಮ್ಮ ಚೇಲ ಕುಚೇಲನ ತನಿಖೆಯನ್ನು ನಾವು ಆದೇಶಿಸಿದ್ದೇವೆ.

ಬ್ಲಾಗ್ ಬೀಟ್ 15

17 Sep

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

……………………………………………………..

ನಗೆ ಸಾಮ್ರಾಟರಿಗೆ ಬೀಟಿಗೆ ಹೊರಡುವುದು ಯಾಕೋ ತುಂಬಾ ಯಾಂತ್ರಿಕವೆನಿಸಲು ಶುರುವಾಗಿದೆ. ನಕ್ಕು ನಕ್ಕೂ ಮಂದಿ ದಣಿದಿರುವಂತೆ ಬ್ಲಾಗುಗಳಲ್ಲಿ ನಗೆಯ ಬರವಣಿಗೆಗೆ ಸ್ವಲ್ಪ ದಣಿವು ಕಾಣಿಸಿಕೊಂಡಂತೆ ಕಾಣುತ್ತದೆ. ಆದರೂ ಸಾಮ್ರಾಟರು ತಮ್ಮ ಕೆಲಸವನ್ನು ತಾವು ಮಾಡುತ್ತಿದ್ದಾರೆ. ಈ ಸಂಚಿಕೆ ಬ್ಲಾಗ್ ಬೀಟ್ ನಿಮ್ಮೆದುರಿನಲ್ಲಿದೆ:

ಕೆಂಡ ಸಂಪಿಗೆಯ ಸುದ್ದಿ ಕ್ಯಾತ

ಹವ್ಯಾಸಕ್ಕಾಗಿ ಮದುವೆಯಾಗಿ, ಕ್ರಮೇಣ ಮದುವೆಯಾಗುವುದನ್ನೇ ಹವ್ಯಾಸವಾಗಿಸಿಕೊಂಡು ಎಂಭತ್ತಾರು ಪತ್ನಿಯರನ್ನು ಕಟ್ಟಿಕೊಂಡು ನೂರಾ ಎಪ್ಪತ್ತು ಮಕ್ಕಳ ತಂದೆಯಾಗಿರುವ ನೈಜೀರಿಯಾದ ಮಹಮ್ಮದ್ ಬೆಲ್ಲಾ ಅಬೂಬೆಕರ್ ನ ಸಾಧನೆ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿರುವುದನ್ನು ಸುದ್ದಿ ಕ್ಯಾತ ವರದಿ ಮಾಡಿದ್ದಾನೆ.

ಎಂಭತ್ತಾರು ಪತ್ನಿಯರನ್ನು ಕಟ್ಟಿಕೊಂಡು ಎಂಭತ್ನಾಲ್ಕು ವರ್ಷ ಬದುಕಿರುವ ಅಬೂಬೆಕರ್‌ನಿಂದ ‘ಯಶಸ್ವೀ ಗಂಡನಿಗೆ ಹತ್ತೇ ಸೂತ್ರಗಳು’ ಪುಸ್ತಕ ಬರೆಸಲು ಸಂಪರ್ಕಿಸಲಾಗುತ್ತಿದೆ. ಅದಕ್ಕೆ ಬುಕರ್ ಸಿಕ್ಕರೂ ಸಿಗಬಹುದು!

ಪ್ರಕಾಶ್ ಶೆಟ್ಟಿ ಪಂಚ್

ಹ್ಯಾಂಗಿಸಿ ಕೊಂಡ ಪ್ರಕಾಶ್ ಶೆಟ್ಟಿ ತಮ್ಮ ಕಾರ್ಟೂನುಗಳ ಪ್ರದರ್ಶನದ ವರದಿಯನ್ನು ಬ್ಲಾಗಿನಲ್ಲಿ ಅಲ್ಲಲ್ಲಿ ಚೆಲ್ಲಿದ್ದಾರೆ.
ಎಂದಿನಂತೆ ಅವರ ಹರಿತವಾದ ಗೆರೆಗಳ ಬರೆಗೆ ನರೇಂದ್ರ ಮೋದಿ, ಯಡ್ಡಿ, ಲಾಲು, ಪೊಲೀಸು ಬಲಿಯಾಗಿದ್ದಾರೆ.

ಬೊಗಳೂರು ವಾರ್ತೆ

ಜಗತ್ತಿನಲ್ಲಿ ಹೆಚ್ಚುತ್ತಿರುವ ಹಾಟ್ ಕಲ್ಚರಿನ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಬೊಗಳೂರು ಬ್ಯೂರೋ, ಸ್ಯಾಂಪಲ್ಲಿಗೆ ಬಟ್ಟೆಹಾಕುವ ನಟೀ ಮಣಿಯರನ್ನೂ, ಬಟ್ಟೆಯನ್ನು ಸ್ಯಾಂಪಲ್ಲಿಗಾಗಿ ಹಾಕುವವರನ್ನೂ ತರಾಟೆಗೆ ತೆಗೆದುಕೊಂಡಿದೆ.
ಡಿವೋರ್ಸು, ತಾಳಿ ಎಂದೆಲ್ಲಾ ಮ್ಯಾರೀಡ್ ಲೈಫಿನ ವರೀಡ್ ಸಂಗತಿಗಳನ್ನು ವರದ್ದಿ ಮಾಡಿರುವುದರಿಂದ ಬ್ಯಾಚುಲರ್ ಆದ ನಗೆ ಸಾಮ್ರಾಟರು ಅಲ್ಲಿಂದ ಕಾಲ್ಕೀಳುವ ಮುನ್ನ ಈ ನೋಟೀಸನ್ನು ಗಮನಿಸಿದ್ದಾರೆ:
“ಬ್ರಹ್ಮಾಂಡ ಸೃಷ್ಟಿಯ ರಹಸ್ಯವರಿಯುವ ನೆಪದಲ್ಲಿ ಬೊಗಳೆ ರಗಳೆ ಬ್ಯುರೋದ ವಿರುದ್ಧ ಸುರಂಗ ಕಾರ್ಯಾಚರಣೆ ನಡೆಸಿ, ರಹಸ್ಯ ಪತ್ತೆ ಹಚ್ಚುವ ಅಸಹ್ಯ ಕಾರ್ಯ ಆರಂಭವಾಗಿರುವುದರಿಂದ ಕೆರಳಿರುವ ಬೊಗಳೂರು ಮಂದಿ, ಪ್ರತಿಭಟನಾರ್ಥವಾಗಿ ಬ್ಯುರೋ ಬಾಗಿಲು ಮುಚ್ಚಿ ಒಂದು ವಾರ ಕಾಲ ಪರಾರಿಯಾಗಲು ಮತ್ತು ಇಲ್ಲದ ತಲೆ ಮರೆಸಿಕೊಳ್ಳಲು ನಿರ್ಧರಿಸಿದ್ದಾರೆ.”
ತಲೆ ಮರೆಸಿಕೊಂಡಿರುವ ಬೊಗಳೂರು ಮಂದಿಯನ್ನು ಪತ್ತೆ ಹಚ್ಚಲು ಸೂಪರ್ ಕಾಪ್ ಚೇಲ ಕುಚೇಲನಿಗೆ ಬಹಳಷ್ಟು ಅರ್ಜಿಗಳು ಬಂದಿದ್ದು ಆತ ಸಾಮ್ರಾಟರ ಅಪ್ಪಣೆಗಾಗಿ ಕಾಯುತ್ತಾ ತುದಿಗಾಲಲ್ಲಿ ಮಲಗಿ ಗೊರಕೆ ಹೊಡೆಯುತ್ತಿದ್ದಾನೆ!

ಮಜಾವಾಣಿ

ತಮ್ಮ ಪತ್ರಿಕೆಗಾಗಿ ಪ್ರತ್ಯೇಕ ತಾಣವನ್ನು ತೆರೆದಿರುವ ಮಜಾವಾಣಿ ತನ್ನ ಅತ್ಯಂತ ನಿಕಟ ಪ್ರತಿಸ್ಪರ್ಧಿ ಪತ್ರಿಕೆಯ ವೇಗಕ್ಕೆ ತಕ್ಕಂತೆ ಓಡಲು ಸಾಧ್ಯವಾಗುತ್ತಿಲ್ಲ ಎಂಬ ಸಂಗತಿ ಸಾಮ್ರಾಟರ ಗಮನಕ್ಕೆ ಬಂದಿದೆ. ಹೀಗಾಗಿ ಅಲ್ಲಿ ಹೊಸ ವರದಿಗಳ್ಯಾವುವೂ ಪತ್ತೆಯಾಗಿಲ್ಲ.
ಸಾಮ್ರಾಟರು ಬೀಟು ಹಾಕುವಾಗ ‘ಹಗ್ಗಗಳ ಮೇಲೆ ಶಾಸನ ವಿಧಿಸಿದ ಎಚ್ಚರಿಕೆಯ’ ವರದಿ ಪತ್ತೆಯಾಯಿತು.

ಬ್ಲಾಗ್ ಬೀಟ್ 14

1 Sep

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

……………………………………………………..

ಮಜಾವಾಣಿ ಪಲಾಯನ

ಬ್ಲಾಗ್ ಸ್ಪಾಟಿನ ಅಂಗಳದಿಂದ ಮಜಾವಾಣಿ ಎಂಬ ವಸ್ತು ನಿಷ್ಟ ಪತ್ರಿಕೆ ಪಲಾಯನ ಗೈದಿದ್ದು ಇದರಲ್ಲಿ ನಮ್ಮ ಕೈವಾಡವೇನೂ ಇಲ್ಲ ಎಂದು ಬೊಗಳೆ ಬ್ಯೂರೋ ನೀಡಿದ ಸ್ಪಷ್ಟನೆ ಎಲ್ಲೂ ಪ್ರಕಟವಾಗಿಲ್ಲ.
ತನ್ನದೇ ಆದ ತಾಣವನ್ನು ತೆರೆದುಕೊಂಡು ಸಂಪದದ ಶಾಮಿಯಾನದಲ್ಲಿ ಅಂಗಡಿ ತೆರೆದಿರುವ ‘ಮಜಾವಾಣಿ’ ತನ್ನ ಪ್ರತಿಸ್ಪರ್ಧಿ ಪತ್ರಿಕೆಗಳಿಗಿಂತ ಗಾವುದ ದೂರ ಓಡಿ ತನಗೆ ಉಸೇನ್ ಬೋಲ್ಟ್ ಆದರ್ಶ ಎಂಬುದನ್ನು ಸಾಬೀತು ಪಡಿಸಿದೆ. ಇಷ್ಟೇ ವೇಗವಾಗಿ ಓಡುತ್ತಿದ್ದರೆ ಪ್ರತಿಸ್ಪರ್ಧಿಗಳು ಮುನಿಸಿಕೊಂಡು ರೇಸಿನಿಂದಲೇ ಹಿಂದಕ್ಕೆ ಸರಿಯಬಹುದು ಎಂಬ ಎಚ್ಚರಿಕೆಯನ್ನು ನಗೆಸಾಮ್ರಾಟರು ರವಾನಿಸಿದ್ದಾರೆ!

ಬೊಗಳೆ

ಬ್ಲಾಗು ಎಂಬುದನ್ನು ಕನ್ನಡದಲ್ಲಿ ಏನೆಂದು ಕರೆಯಬೇಕು ಎಂಬುದಕ್ಕೆ ಉತ್ತಮವಾದ ಜನಾಭಿಪ್ರಾಯವನ್ನು ಮೂಡಿಸುವಲ್ಲಿ, ಜನರ ಕೆನ್ನೆಗೆ ಬೆಣ್ಣೆ ತಿಕ್ಕಿ ತಮ್ಮ ಪತ್ರಿಕೆಯ ಹೆಸರೇ ಅದಕ್ಕೆ ಸೂಚಿತವಾಗುವಂತೆ ಮಷ್ಕಿರಿ ಮಾಡುವಲ್ಲಿ ಅಸತ್ವ ಅನ್ವೇಷಿಗಳು ಯಶಸ್ವಿಯಾಗಿದ್ದಾರೆ. ಬ್ಲಾಗೆಂಬ ಒಲಿಂಪಿಕ್ಸಿನಲ್ಲಿ ಒಂದೊಂದು ಪತ್ರಿಕೆ ಒಂದೊಂದು ಸಾಧನೆ ಮಾಡುತ್ತಿದ್ದರೂ ನಗೆಸಾಮ್ರಾಟರು ಏನನ್ನೂ ಮಾಡದೆ ಸುಮ್ಮನಿದ್ದು ಮಾಡಿರುವ ಸಾಧನೆಯನ್ನು ಯಾರೂ ನೆನೆಸಿಕೊಳ್ಳುತ್ತಿಲ್ಲ ಎಂದು ಅವರ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ ಬೀಜಿಂಗಿಗೆ ತೆರಳದ ಸುದ್ದಿ ಮೂಲಗಳಿಂದ ತರಿಸಿಕೊಂಡ ವರದಿಯ ಪ್ರಕಾರ ಬೀಜಿಂಗಿನಲ್ಲಿ ಎಂಟು ಬಂಗಾರದ ಪದಕಗಳನ್ನು ನುಂಗಿದ ಮೀನನ್ನು ಅಮೇರಿಕಾಕ್ಕೆ ವಾಪಸ್ಸು ಕಳುಹಿಸಿದ ವರದಿಯನ್ನು ಪ್ರಕಟಿಸಿದೆ.

ಕೆಂಡಸಂಪಿಗೆಯ ಸುದ್ದಿಕ್ಯಾತ

ಹುಡುಗರೇ ನೀವು ಎಷ್ಟಾದರೂ ಮಂದಿ ಹುಡುಗಿಯರನ್ನು ಗರ್ಲ್‌ಫ್ರೆಂಡ್‌ಗಳಾಗಿ ಹೊಂದಿರಿ, ಅವರಿಗೆ ಎಷ್ಟಾದರೂ ಮಿಸ್ ಕಾಲ್ ಕೊಡಿ ಇಲ್ಲವೇ ಸ್ವೀಕರಿಸಿ ಆದರೆ ಮೆಸೇಜು ಮಾತ್ರ ಮಾಡಬೇಡಿ. ಹಾಗೊಂದು ವೇಳೆ ನೀವು ಮೇಸೇಜು ಮಾಡಿದರೆ ನಿಮಗೇ ಆಪತ್ತು ಎಂದು ಸರ್ವೆ ತಿಳಿಸಿದ ಸಂಗತಿಯನ್ನು ಸುದ್ದಿ ಕ್ಯಾತ ವರದಿ ಮಾಡಿದ್ದಾನೆ,
ಇತ್ತೀಚೆಗೆ ಈಸೋಪನ ಕಥೆಗಳಂತೆ ತನ್ನ ಪ್ರತಿಯೊಂದು ವರದಿಗೂ ನೀತಿಯನ್ನು ಕೊಡಮಾಡುತ್ತಿರುವ ಸುದ್ದಿ ಕ್ಯಾತ ಈ ವರದಿಗೆ ಕೊಟ್ಟ ನೀತಿ: ಹುಡುಗಿಯರು ಹತ್ತಿರ ಇದ್ದರೆ ಮೊಬೈಲ್ ಹೊರತೆಗೆಯಬೇಡಿ.

ಪಂಚ್ ಲೈನ್

ಬಿಜೆಪಿಯವರು ಏನೇನನ್ನೋ ಗಾಳಿಗೆ ತೂರಿ ಮತ್ತೇನನ್ನೋ ಹಿಡಿದುಕೊಳ್ಳುತ್ತಾರೆ ಎಂದು ಮರ್ಮಾಘಾತುಕಕಾರಿ ಪಂಚನ್ನು ಕೊಟ್ಟಿದ್ದ ಗಣೇಶ್ ಹಠಾತ್ತನೆ ಬ್ಲಾಗಿನ ಅಂಗಳದಿಂದ ಮರೆಯಾಗಿಬಿಟ್ಟಿದ್ದಾರೆ.
ನಗೆ ಸಾಮ್ರಾಟರು ನಮ್ಮ ಪಂಚಿನ ಚಾಂಪಿಯನ್ ಗಣೇಶರನ್ನು ಇತರ ದೇಶದವರು ಅಪಹರಿಸಿ ಒಲಿಂಪಿಕ್ಕಿನಲ್ಲಿ ಪಂಚಿಸಿ ಚಿನ್ನ ಗೆದ್ದು ತರಲು ಕಳುಹಿಸಿದ್ದಾರೇನೋ ಎಂದು ಸಂಶಯಿಸಿದ್ದರು. ಇದನ್ನು ಪತ್ತೇ ಹಚ್ಚಲು ತಮ್ಮ ಚೇಲ ಕುಚೇಲನನ್ನು ಅಟ್ಟಿದ್ದರು. ಆದರೆ ಪಂಚು ಕೊಡುವುದರಲ್ಲಿ ಚಿನ್ನವಿರಲಿ ತಗಡೂ ಸಹ ಗಣೇಶ್‌ಗೆ ಒಲಿಯದಿದ್ದುದರಿಂದ ಸಾಮ್ರಾಟರು ನೆಮ್ಮದಿಯಾಗಿದ್ದಾರೆ.

ಬ್ಲಾಗ್ ಬೀಟ್ 8

28 May

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ಸುದ್ದೀಶ. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

………………………………………………………………..

ಪಂಚ್ ಲೈನ್

ಪಂಚು ಹೊಡೆಯುವುದರಲ್ಲಿ ಸಿದ್ಧ ಹಸ್ತರಾಗಿ ಕಾಣುವ ಗಣೇಶ್ ನಿಜವಾದ ಮೌತ್ ಕಾ ಸೌದಾಗರ್ ನಮ್ಮ ಸೋನಿಯಮ್ಮ ಹೇಳಿದ ಹಾಗೆ ಗುಜರಾಥಿನ ನರೇಂದ್ರ ಮೋದಿಯಲ್ಲ. ಮತ್ತ್ಯಾರು? ಹಾಗಾದರೆ ಈ ಲಿಂಕನ್ನು ಕ್ಲಿಕ್ಕಿಸಿ.

ಸಂತೆ ನೆರೆಯುವುದಕ್ಕೆ ಮುನ್ನವೇ ಗಂಟು ಕಳ್ಳರು ದೌಡಾಯಿಸಿದರು ಎಂಬಂತೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ನೂ ತೆರೆಯುವುದಕ್ಕೆ ಮುಂಚೆಯೇ ಅದಕ್ಕೆ ಯಾವ ಹೆಸರಿಡಬೇಕು ಎಂಬ ಬಗ್ಗೆ ಚೌಕಾಶಿ ನಡೆಯಲು ಶುರುವಾಗಿದೆ. ಕೆಂಪೇ‘ಗೌಡ’ರ ಹೆಸರಿಡಬೇಕೋ, ವಿಶ್ವೇಶ್ವರ‘ಅಯ್ಯ’ನವರ ಹೆಸರಿಡಬೇಕೋ, ಟಿಪ್ಪು ‘ಸುಲ್ತಾನ್’ನ ಹೆಸರನ್ನು ಮಡಗಬೇಕೋ ಅನ್ನೋ ವಿಚಾರವಾಗಿ ಭಾರೀ ‘ಚರ್ಚೆ’ ನಡೆಯುತ್ತಿದೆ. ಇದಕ್ಕೊಂದು ಒಳ್ಳೆಯ ಪರಿಹಾರವನ್ನು ಗಣೇಶ್ ಕೊಟ್ಟಿದ್ದಾರೆ. ವಿಮಾನ ನಿಲ್ದಾಣಕ್ಕೆ ಯಾರ ಹೆಸರು ಸೂಕ್ತ?

………………………………………………………………..

ಬೊಗಳೆ ರಗಳೆ

ಕನ್ನಡ ನಾಡಿನ ಪತ್ರಿಕೆಗಳೆಲ್ಲಾ ರಾಜಕೀಯದ ಬಿಸಿಯನ್ನು ಮನೆ ಮೆನೆಗೆ ತಲುಪಿಸಿ ಬೇಸಿಗೆಯನ್ನು ಮತ್ತಷ್ಟು ಅಸಹನೀಯಗೊಳಿಸುವಲ್ಲಿ ಪೈಪೋಟಿ ನಡೆಸುತ್ತಿರುವಾಗ ಬೊಗಳೂರು ಭಯ ಭೀತ ಬ್ಯೂರೋ ತಾನೇನೂ ಕಡಿಮೆಯಿಲ್ಲ ಎಂದು ರಾಜಕೀಯ ವರದ್ದಿಯನ್ನು ಪ್ರಕಟಿಸಿದೆ. ರಾಜ್ಯಾದ್ಯಂತ ನೇತಾಗಳೆಂಬ ಭೂತಗಳು ಓಡಾಡುತ್ತಾ ಭಯೋತ್ಪಾದನೆ ಮಾಡುತ್ತಿರುವುದನ್ನು ‘ರಾತ್ರಿ ಏಳರವರೆಗಿನ ಪ್ರಜ್ಞಾವಂತ’ ಮತದಾರ ಅನಂತರ ಕಣ್ಣು ಕೆಂಪು ಮಾಡಿಕೊಂಡು ನೋಡುತ್ತಿರುವುದನ್ನು ಬೊಗಳೂರು ವಾಹ್-ರದ್ದಿಗಾರ ತಂದು ಸುರಿದಿದ್ದಾನೆ.

………………………………………………………………..

ಮಜಾವಾಣಿ

ಚುನಾವಣೆಗಳು ಹತ್ತಿರಬಂದಾಗ ಪತ್ರಿಕೆಗಳು ಮದುವೆ ಮನೆಯಲ್ಲಿ ಸಿಂಗಾರಗೊಂಡ ವಧುವಿನ ಹಾಗಾಗಿರುತ್ತವೆ. ಇದಕ್ಕೆ ಅಂತರ್ಜಾಲದ ಅತ್ಯಂತ ‘ಜನಪ್ರಿಯ’ ‘ವಿಶ್ವಾಸಾರ್ಹ’ ಪತ್ರಿಕೆಯೂ ಕಡಿಮೆಯಿಲ್ಲ. ಅವರು ಚುನಾವಣೆಯ ಸಂದರ್ಭದಲ್ಲಿ ಜನಮತವನ್ನು ಸಂಗ್ರಹಿಸಿ ತಮ್ಮ ಪತ್ರಿಕೆಯಲ್ಲಿ ಚಾಪಿಸಿಕೊಂಡಿದ್ದಾರೆ. ಮುಂದಿನದು ಸಂಪಾದಕರ ಮಾತುಗಳಲ್ಲಿ…

ಕರ್ನಾಟಕ ರಾಜ್ಯಕ್ಕೆ ಇದು ಸಂಕ್ರಮಣ ಕಾಲ. ಯಾರಿಂದ ನಾವು ಮೋಸ ಹೋಗಬೇಕೆಂದು ನಿರ್ಧರಿಸ ಬೇಕಾದ ಕಾಲ. ಇಂತಹ ಸಂದರ್ಭದಲ್ಲಿ,  ನಮ್ಮ ನಾಡು,ನುಡಿ, ರಾಜಕಾರಣಗಳ ಬಗೆಗೆ ನಮ್ಮ ಜನರ ನಾಡಿ ಹೇಗೆ ಮಿಡಿಯುತ್ತಿದೆ, ಅವರನ್ನು ಕಾಡುತ್ತಿರುವ ವಿಷಯಗಳೇನು ಎಂಬುದನ್ನು ಅವರ ಮಾತುಗಳಲ್ಲೇ ಇಲ್ಲಿ ಹಿಡಿದು ಕೊಡಲಾಗಿದೆ.   – ಸಂ.

………………………………………………………………..

ಪ್ರಕಾಶ್ ಶೆಟ್ಟಿ ಪಂಚ್

ಶೆಟ್ಟಿಯವರ ಗೆರೆಗಳಲ್ಲಿ ಸೆರೆಯಾಗಿರುವ ಸಂಗತಿಗಳು ಹಲವು. ಗರ್ಜಿಸುವುದನ್ನೇ ಮರೆತಿರುವ ಮಹಾರಾಷ್ಟ್ರದ ಹಳೆಯ ಹುಲಿಯ ಅಳಲಾದರೂ ಏನು? ಜಾರ್ಜು ಬುಸ್ಸು ಇನ್ ಫ್ಲೇಷನ್ನಿಗೆ ಸಂ-ಚೋದಿಸಿದ ಕಾರಣ ಯಾವುದು? ಚುನಾವಣೆ ಕಿಕ್ಕಿಗಾಗಿ ಕೆಲವು ಶೆಟ್ಟಿ ಪಂಚುಗಳು….

………………………………………………………………..

Follow

Get every new post delivered to your Inbox.

Join 38 other followers