Posts Tagged ‘ಸಿನೆಮಾ’

ನಟಿಯರ ಲಂಗದ ಎತ್ತರ ಹಾಗೂ ಜಾಗತಿಕ ಸಂಚು!

( ನಗೆ ನಗಾರಿ ಸಿನಿಕ ಸಂಶಯ-ಚೋದನಾ ಬ್ಯೂರೋ)
ಜಗತ್ತು ನಾವಂದುಕೊಂಡಷ್ಟು ಸರಳವಾಗಿ ನಡೆಯುವುದಿಲ್ಲ. ಬೆಳ್ಳಗಿರುವುದೆಲ್ಲ ಹಾಲು ಆಗಿರುವುದಿಲ್ಲ. ಹಾಗೂ ಹಾಲು ಬೆಳ್ಳಗೇ ಇರಬೇಕೆಂಬ ನಿಯಮವೂ ಇಲ್ಲ. ಕಣ್ಣೆದುರು ಕಂಡದ್ದಷ್ಟೇ ಘಟನೆಯ ಸಂಪೂರ್ಣ ಸತ್ಯವಲ್ಲ. ತೆರೆಮರೆಯಲ್ಲಿ ಘೋರವಾದ ಸಂಚುಗಳು ರೂಪುಗೊಳ್ಳುವುದು, ಕಾಣದ ಕೈಗಳು ಇಡೀ ಜಗತ್ತಿನ ಆಗುಹೋಗುಗಳನ್ನು ನಿರ್ದೇಶಿಸುವುದು, ಜನ ಸಾಮಾನ್ಯರು ತಾವೆಷ್ಟೇ ಸ್ವತಂತ್ರರು ಎಂದುಕೊಂಡರೂ ತಮ್ಮ ಕೃತಿಗಳನ್ನು ಬದುಕಿನ ನಿರ್ಧಾರಗಳು ತಮ್ಮ ಕೈಲಿಲ್ಲ ಎಂಬ ಅರಿವು ಎಲ್ಲರಿಗೂ ಇರುವುದಿಲ್ಲ. ಈ ಜಗತ್ತಿನಲ್ಲಿ ಸದಾ ಮಹಾ ಸಂಚೊಂದು ಸದ್ದಿಲ್ಲದೆ [...]

Continue reading »

ನಗೆಸಾಮ್ರಾಟರ ಸಚ್ ಕಾ ಸಾಮ್ನಾ!

 
ಮೊನ್ನೆ "ಸಚ್ ಕಾ ಸಾಮ್ನಾ" ಕಾರ್ಯಕ್ರಮಕ್ಕೆ ನಮ್ಮ ನಗೆಸಾಮ್ರಾಟರೂ ಹೋಗಿದ್ದರು.
ಅವರಿಗೆ ಕೇಳಲಾದ ಮೊದಲ ಪ್ರಶ್ನೆ "ಚಿತ್ರಮಂದಿರದ ಒಳಹೋಗುವ ಮುನ್ನ ನೀವೇನು ಮಾಡುತ್ತೀರಿ?
ಕೊಂಚವೂ ಗೊಂದಲವಿಲ್ಲದೇ ನಗೆಸಾಮ್ರಾಟರು "ನನ್ನ ಲಾಜಿಕ್ಕುಗಳನ್ನು ಜೇಬಿನಲ್ಲಿಡುತ್ತೇನೆ" ಎಂದಾಗ ನಿರೂಪಕ ಗಲಿಬಿಲಿ!
ಸುಧಾರಿಸಿಕೊಂಡು "ನಗೆಸಾಮ್ರಾಟರು ನೀಡಿದ ಉತ್ತರ ಸರಿಯೋ ತಪ್ಪೋ ನೋಡೋಣ" ಅಂತ ಪಾಲಿಗ್ರಾಫ್ ಮೆಶೀನ್ ನಲ್ಲಿ ಬಂದ ಉತ್ತರ ನೋಡಿದರೆ ಅದು ಸತ್ಯ ಎಂದಾಗಿತ್ತು!
ಮುಂದಿನ ಪ್ರಶ್ನೆ," ಶಿವರಾಜ್ ಕುಮಾರ್ ಅಭಿನಯದ "ಓಂ" ಚಿತ್ರಕ್ಕೂ ಅವರದೇ ಅಭಿನಯದ "ತವರಿಗೆ ಬಾ ತಂಗಿ" ಚಿತ್ರಕ್ಕೂ ಇರುವ ಸಾಮ್ಯತೆ ಏನು?"
ಅದರಲ್ಲಿ [...]

Continue reading »

ಕವಿರಾಜರ ಸಾಹಿತ್ಯದಿಂದಾಗಿ ಕಪಾಳಮೋಕ್ಷ!

ಇದು ಹೊಸ ಅಂಕಣ.

ನಮ್ಮ ಮಾಧ್ಯಮ ಲೋಕದಲ್ಲಿ ತುಂಬಿಕೊಂಡಿರುವ ಅದ್ಭುತ ಪ್ರತಿಭೆಗಳನ್ನು, ಎಲೆ ಮರೆಯಲ್ಲಿ ಅಡಗಿರುವ ಕಾಯಿಗಳನ್ನು, ಪೀಚುಗಳನ್ನು ಬಯಲಿಗೆಳೆಯುವ ಪ್ರಯತ್ನ. ಕುಂದಾಪುರದ ರಂಜಿತ್ ಅಡಿಗ ಈ ಅಂಕಣವನ್ನು ನಿರ್ವಹಿಸಲಿದ್ದಾರೆ. ನಮ್ಮ ಸಿನೆಮಾ ಸಾಹಿತ್ಯ, ಪತ್ರಿಕೆಗಳು, ಟಿವಿ ಚಾನಲ್ಲುಗಳು- ಇಲ್ಲೆಲ್ಲಾ ಹರಡಿಕೊಂಡಿರುವ ಈ ಅಪ್ರತಿಮ ಪ್ರತಿಭೆಗಳ ಪೋಷಣೆಗೆ ನಾವು ಕಟಿ ಬದ್ಧರಾಗಿದ್ದೇವೆ.

……………………..
ಅವನಿಗೆ ಸಾರಿ ಸಾರಿ ಹೇಳಿದ್ದೆ. ಪ್ರೇಯಸಿ ಪಕ್ಕದಲ್ಲಿದ್ದಾಗ ಅಥವ ಆಕೆಗಾಗಿ ಹಾಡುವಾಗ ಯಾವುದಾದರೂ ರೋಮ್ಯಾಂಟಿಕ್ ಹಿಂದಿ ಸಾಂಗನ್ನು ಹಾಡು; ಇಲ್ಲವೇ ಚಂದದ ಭಾವಗೀತೆ ಯನ್ನು [...]

Continue reading »

ವಿಶೇಷ ಸಂದರ್ಶನ: ಖ್ಯಾತ ನಿರ್ದೇಶಕ ಚೂರಿಯವರೊಂದಿಗೆ

(‘ಮುದಿಯಾ’ ಸಿನೆಮಾದ ಮುಖಾಂತರ ಕನ್ನಡ ಸಿನೆಮಾ ರಂಗವನ್ನು ಅಲ್ಲಾಡಿಸಿ ಹಾಕಿದ ಹಸಿ ಹಸಿ ಪ್ರತಿಭೆಯ ನಿರ್ದೇಶಕ ಚೂರಿ ತಮ್ಮ ಬಯೋ ಡೇಟಾದಲ್ಲಿ ಈಗಾಗಲೇ ಮೂರು ಸಿನೆಮಾಗಳ ನಿರ್ದೇಶಕ ಎಂಬ ಸಾಲನ್ನು ಸೇರಿಸಿಕೊಂಡಿದ್ದಾರೆ. ಮೊದಲ ಚಿತ್ರ ‘ಮುದಿಯಾ’ ಕನ್ನಡ ನಾಡಿನ ಸಿನೆಮಾ ಮಂದಿರಗಳಲ್ಲೆಲ್ಲಾ ನೂರಾರು ದಿನ ಓಡಿತು, ಅಂತೆಯೇ ಅವರ ಎರಡನೆಯ ಸಿನೆಮಾ ‘ಲವ್ ಲೆಟರು’ ನಾಡಿನ ನೂರಾರು ಸಿನೆಮಾ ಮಂದಿರಗಳಿಂದ ಓಡಿತು, ಈಗ ಅವರು ತಮ್ಮ ಪ್ರತಿಭೆ ಹಾಗೂ ಪ್ರೇಕ್ಷಕರ ತಾಳ್ಮೆಯನ್ನೆಲ್ಲಾ ಪ್ರಯೋಗಕ್ಕೆ ಒಡ್ಡಿ ಮೂರನೆಯ ಸಿನೆಮಾ [...]

Continue reading »

ಚೋಕರೀ ಫ್ರಂ ಉಸ..ಡಿಫರೆಂಟ್ ಸಿನೆಮಾ!!

ಸಂಪದಿಗ ಗಣೇಶರ ಬರಹವನ್ನು ಅಲ್ಲಿಂದ ನೇರವಾಗಿ ಹೈಜ್ಯಾಕ್ ಮಾಡಿ ಇಲ್ಲಿ ಹಾಕಿದ್ದೇವೆ.
- ನಗೆ ಸಾಮ್ರಾಟ್

 
ಹೌದು. ಇದೂ ಡಿಫರೆಂಟ್ ಸಿನಿಮಾಗಳ ಸಾಲಲ್ಲಿ ಒಂದು ಸಿನಿಮಾ. ನಾಯಕಿ, ಕೋಟ್ಯಾಧೀಶ…(ಇಂತಹ ಕತೆಗಳು ಸಾವಿರಾರು ಬಂದಿದೆ ಎಂದಿರಾ?.. ಪೂರ್ತಿ ಕೇಳಿ..) ಅಮೆರಿಕಾ(USA-ಉಸಾ)ಅಧ್ಯಕ್ಷನ ಒಬ್ಬಳೇ ಮಗಳು!! ಹೇಗಿದೆ  ? -ನಮ್ಮದು ಡಿಫರೆಂಟೂ.. ನಾಯಕಿ,ಟು ಪೀಸ್ ಡ್ರೆಸ್‌ನಲ್ಲಿ.. ‘ಸೂರ್ಯಗ್ರಹಣ’ದ ಬಗ್ಗೆ (ಡಿಫರೆಂಟೂ) ಹಾಡು ಹೇಳುತ್ತಾ.., [...]

Continue reading »

ಎಲ್ಲಾ ಓಕೆ ಬರೀ ಹುಡುಗೀರ್ಗೆ ಯಾಕೆ?

(ನಗೆ ನಗಾರಿ ಸಿನೆಮಾ ಬ್ಯೂರೋ)
‘ಮೊಗ್ಗಿನ ಮನಸ್ಸು’ ಎಂಬ ಸಿನೆಮಾದ ‘ಪುರುಷ’ ನಿರ್ದೇಶಕರು ಹಾಗೂ ‘ಪುರುಷ’ ನಿರ್ಮಾಪಕರು, ‘ಪುರುಷ’ ಗೀತ ಸಾಹಿತಿಗಳು ಆ ಸಿನೆಮಾದ ಪೋಸ್ಟರಿನಲ್ಲಿ ‘ಇದು ಹುಡುಗಿಯರಿಗೆ ಮಾತ್ರ’ ಎಂದು ಬರೆಸಿ ಕುಚೋದ್ಯವನ್ನು ಮಾಡಿದ್ದಾರೆ. ‘ಈ ಸಿನೆಮಾ ಹುಡುಗರ ಹೃದಯಕ್ಕೆ ಹಾನಿಕರವಾದದ್ದು’ ಎಂದು ಬೇರೆ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಎಲ್ಲಾ ಸಂಗತಿಗಳನ್ನು ಗಮನಿಸಿ ವಿಪರೀತ ಕುತೂಹಲಿಗಳಾದ ನಗೆ ಸಾಮ್ರಾಟರು ಸಿನೆಮಾವೊಂದನ್ನು ಬಿಟ್ಟು ಉಳಿದ ಸಂಗತಿಗಳಲ್ಲಿ ಆಸಕ್ತಿ ವಹಿಸಿ ವರದಿಗಾರಿಕೆಗೆ ನಡೆದರು.
ಒಂದು ಸಿನೆಮಾ ಹೇಗಿದೆ ಎಂಬ ಮಿಲಿಯನ್ ಡಾಲರ್ [...]

Continue reading »

ಹಿರಿಯ ನಾಯಕರ ಮೀಸಲಾತಿಗೆ ಆಗ್ರಹ

( ನಗೆ ನಗಾರಿ ಸಿನಿಮಾ ಬ್ಯೂರೋ)
‘ಕನ್ನಡದ ಹಿರಿಯ ನಾಯಕ ನಟರುಗಳಿಗೆ ಇತ್ತೀಚೆಗೆ ತೀರಾ ಅವಮಾನವಾಗುತ್ತಿದೆ. ಸಿನೆಮಾಗಳಿಗೆಲ್ಲಾ ಶಾಲಾ ಕಾಲೇಜು ಹುಡುಗರು ನಾಯಕರಾಗುತ್ತಿದ್ದಾರೆ. ವರ್ಷಕ್ಕೆ ಡಬ್ಬಾದಿಂದ ಹೊರಬರುವ ಚಿತ್ರಗಳಲ್ಲಿ ಶೇಕಡಾ ನೂರಕ್ಕೆ ನೂರರಷ್ಟು ಯುವ ನಾಯಕರೇ ಹೆಚ್ಚಾಗಿದ್ದಾರೆ. ಇದು ಚಿತ್ರರಂಗದ ಆರೋಗ್ಯಕ್ಕೆ ಒಳ್ಳೆಯದಲ್ಲ. ಸರ್ವ ಸಮಾನತೆಯ ಸಿದ್ಧಾಂತದ ಮೇಲೆ ಸಿನೆಮಾಗಳು ತಯಾರಾಗಬೇಕು. ಹೀಗಾಗಿ ನಾವು ಹಿರಿಯ ನಾಯಕರಿಗೆ ವರ್ಷಕ್ಕೆ ಕನಿಷ್ಟ ಪಕ್ಷ ಇಪ್ಪತ್ತು ಪರ್ಸೆಂಟ್ ಸಿನೆಮಾಗಳಲ್ಲಾದರೂ ಹೀರೋ ಪಾತ್ರವನ್ನು ಮೀಸಲು ಇಡಬೇಕು ಎಂದು ಒತ್ತಾಯ ಪಡಿಸುತ್ತಿದ್ದೇವೆ.’ ಎನ್ನುತ್ತದೆ ಚಿತ್ರರಂಗದಲ್ಲಿ [...]

Continue reading »