Tag Archives: ನಗೆ ನಗಾರಿ ವಾರ್ಷಿಕೋತ್ಸವ

ನಗಾರಿ ಹುಟ್ಟು ಹಬ್ಬಕ್ಕೆ ಶುಭಾಶಯಗಳ ಸುರಿಮಳೆ!

6 ಫೆಬ್ರ

ನಗೆ ನಗಾರಿ ಡಾಟ್ ಕಾಮ್‌ನ ವಾರ್ಷಿಕೋತ್ಸವ ಸಮಾರಂಭದ ಬಗ್ಗೆ ಸವಿರವಾದ ವರದಿಯನ್ನು ನೀಡಬೇಕಿದ್ದ ತೊಣಚಪ್ಪ ಹಾಗೂ ಕುಚೇಲರು ಪಾರ್ಟಿಯಲ್ಲಿನ ಪ್ರಸಾದ, ತೀರ್ಥದಿಂದ ‘ಸಮಾಧಿ’ ಸ್ಥಿತಿಯನ್ನು ತಲುಪುವುದರಿಂದ ಸಾಮ್ರಾಟರಾದ ನಾವೇ ಕುದುರೆಗಳ ಲಗಾಮು ಹಿಡಿಯಬೇಕಿದೆ. ಹೀಗಾಗಿ ವರದಿ ಕೊಂಚ ತಡವಾಗಲಿದೆ. ಆದರೆ ನಮ್ಮಹಾಗೂ ನಮ್ಮ ಪತ್ರಿಕೆಯ ಹುಟ್ಟು ಹಬ್ಬಕ್ಕೆ ನಮ್ಮ ಭಕ್ತ ವೃಂದವು ಪ್ರತಿಕ್ರಿಯಿಸಿರುವ ರೀತಿಯನ್ನು ನೆನೆಯದಿದ್ದರೆ ನಮಗೆ ಮನಃಶಾಂತಿ ಲಭ್ಯವಾಗುವುದಿಲ್ಲ.

ಗಣೇಶ್.ಕೆ

mareyabahudemba bhayadinda eegale abhinandisuttiddene.
aadare neevu nageyanna nandisabedi anta kelikolluttene.

ಪ್ರಸಾದ್

ನೂರ್ಕಾಲ ಬೆಳಗಲಿ ನಗೆಯ ದೀವಿಗೆ
ಅನುಗಾಲವೂ ಹರಿಯಲಿ ಸಾಮ್ರಾಟರ ಕಿರುನಗೆ
ಅಭಿಮಾನಿಗಳ ಎದೆಯಲ್ಲಿ ಸಂಭ್ರಮವು ಬಗೆಬಗೆ.
“ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು”

ಹೇಮಾ ಪವಾರ್

ಸಾಮ್ರಾಟರೇ ವರ್ಷವಿಡೀ ನಗೆ ನಗಾರಿಯ ರಥ ಸುಗಮವಾಗಿ ನಡೆಸಿಕೊಂಡು ಬಂದಿದ್ದೀರಿ. ಅದರ ರಹಸ್ಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನೂ ಮುಗಿಸಿದ್ದೀರಿ. ನಿಮ್ಮ ಚೇಲ ಕುಚೇಲನ ಭಯಂಕರ ವಿರೋಧವಿದ್ದರೂ, ನಮ್ಮೆಲ್ಲರ ಪರವಾಗಿ ನಿಮಗೊಂದು ಸನ್ಮಾನ ಸಮಾರಂಭ ಏರ್ಪಡಿಸಬೇಕೆಂದಿದ್ದೇವೆ, ಇದಕ್ಕೆ ನಿಮ್ಮ ಅಭಿಪ್ರಾಯವೇನು??

ವಿ. ಸುಮಂತ ಶ್ಯಾನುಭಾಗ್

ಸಾಮ್ರಾಟರೆ .. ಸನ್ಮಾನವೆಂದರೆ ಯಾರ ಬಳಿ ಏನು ಇಲ್ಲವೋ ಅದನ್ನು ಕೊಡುವುದು ಎಂದರ್ಥ .. ಹೇಮಾ ಅವರಿಗೆ ಎಷ್ಟು ಸೊಕ್ಕು ನೋಡು ನಿಮಗೆ ಮಾನ ಮರ್ಯಾದೆ ಕೊಡುತ್ತೇನೆ ಅಂಥಾ ಇದ್ದಾರೆ

ಏನೇ ಇರಲಿ ಸಮಸ್ತ ಕನ್ನಡಿಗರಿಗೆ ದಿನವೂ ಹಾಸ್ಯರಸದ ಭೂರಿಭೋಜನ ಬಡಿಸುತ್ತಿರುವ , ಸ್ವಯಂಘೋಷಿತ ನಗೆಸಾಮ್ರಾಟ್ , ಕಲಿಯುಗದ ಆಸ್ಥಾನ ವಿದೂಷಕ , ಒಂದು ವರುಷದ ಮಗು “ನಗೆನಗಾರಿ ” ಮತ್ತದರ ಚಮಚಾಗಳಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಕೋರುತ್ತಿದ್ದೇನೆ .
ಶ್ರೀ ದೇವರು ತಮಗೆ ದೀರ್ಘಾಯುಷ್ಯ ,ಆರೋಗ್ಯ ,ಸುಖ ಶಾಂತಿ ನೆಮ್ಮದಿಗಳನ್ನು ಕರುಣಿಸಲೆಂದು ಆತನ ಚರಣಕಮಲಗಳಲ್ಲಿ ಪ್ರಾರ್ಥಿಸುತ್ತೇನೆ . ನಿಮ್ಮ ನಗಾರಿಯ ಶಬ್ದ ಕನ್ನಡನಾಡಿನಾದ್ಯಂತ ಮಾರ್ದನಿಸಲಿ ,ನಿಮ್ಮ ನಗೆಗಡಲಲ್ಲಿ ಇನ್ನೊ ದೊಡ್ಡ ದೊಡ್ಡ ನಗುವಿನ ಅಲೆಗಳು ಏಳಲಿ ಹಾಗೋ ನಮ್ಮಂಥ ನಿಮ್ಮ ಅಭಿಮಾನಿಗಳು ಆ ನಗೆಗಡಲಲ್ಲಿ ತೇಲುವಂತಾಗಲಿ ಎಂದು ಹಾರೈಸುತ್ತೇನೆ .

ಮತ್ತೊಮ್ಮೆ ಜನ್ಮದಿನದ ಹಾರ್ದಿಕ ಶುಭಾಶಯಗಳೊಂದಿಗೆ

ರಂಜಿತ್ ಅಡಿಗ

“ಸೋಮಾರಿ ಮಿತ್ರ”ನೆಂದು ಉಲ್ಲೇಖಿಸಿ, ನಿಮ್ಮ ಅಸಂಖ್ಯ ಓದುಗರೆದುರು ನನ್ನನ್ನು ನೆನೆದುದ್ದಕ್ಕೆ ಕಣ್ತುಂಬಿ ಬಂತು.

ಅಂದ ಹಾಗೆ ಫೆಬ್ರವರಿ ೧೪ ಹತ್ತಿರ ಬಂತು, ಸಾಮ್ರಾಟರ ಪ್ರೇಮ ಕತೆಗಳನ್ನು ಓದುವ ಸೌಭಾಗ್ಯ ದೊರಕೀತೆ??

ಸಂಪಾದಕೀಯ: ಒಂದು ವರ್ಷದ ಬಸಿರನ್ನು ಇಳಿಸಿ…

29 ಜನ

 

ಅವನ್ನು ಸಾರ್ಥಕದ ಕ್ಷಣಗಳು ಎನ್ನುವರು. ಯೋಗಿಯೊಬ್ಬ ಹತ್ತಾರು ವರ್ಷಗಳ ಕಾಲ ಕಠಿಣ ತಪವನ್ನಾಚರಿಸಿ ಅನೇಕ ಸಿದ್ಧಿಗಳನ್ನು ಪಡೆದುಕೊಂಡು, ನಾನಾ ತಂತ್ರಗಳನ್ನು ಮೈಗೂಡಿಸಿಕೊಳ್ಳುತ್ತಿದ್ದರೂ ಅಂತಿಮವಾದ ಸಾಧನೆ ಮಾಡಿದಾಗ, ಆತನಿಗೆ ದೈವಸಾಕ್ಷಾತ್ಕಾರವಾದಾಗ ಅನುಭವಿಸುವ ರೋಮಾಂಚನದಂತಹುದು. ಓಟಗಾರನೊಬ್ಬ ಒಂದೊಂದೇ ಮೈಲುಗಲ್ಲುಗಳನ್ನು ದಾಟುತ್ತಾ ಸಂಭ್ರಮ ಪಟ್ಟರೂ ಸಹ ಕಡೆಯ ಗಮ್ಯವನ್ನು ಮುಟ್ಟಿ ನಿಂತಾಗ ಆಗುವ ಸಮಾಧಾನದಂತಹುದು. ಇದನ್ನು ನಾವು ಆ ದಿನ ಅನುಭವಿಸಿದೆವು ಎಂಬುದಕ್ಕೆ ನಮ್ಮ ಕಣ್ಣುಗಳಲ್ಲಿ ಅಪರೂಪಕ್ಕೆಂಬಂತೆ ಹರಿದ ಕಂಬನಿಗಳೇ ಸಾಕ್ಷಿ. ನಗೆ ನಗಾರಿಯ ವಾರ್ಷಿಕೋತ್ಸವಕ್ಕೆಂದು ಜಗತ್ತಿನಲ್ಲೇ ಅತ್ಯಂತ ರಹಸ್ಯಮಯವಾದ ಸ್ಥಳದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನ ಸಾಗರವನ್ನು ಕಂಡು ಸಾಮ್ರಾಟರು ಹರ್ಷೋದ್ಘಾರದಿಂದ ಕಂಬನಿ ಮಿಡಿದರು. ವೇದಿಕೆಯ ಮೇಲಿನ ಗಣ್ಯರೇ ಹೀಗೆ ಕಂಬನಿ ಮಿಡಿದದ್ದನ್ನು ಕಂಡು ಗೊಂದಲಕ್ಕೊಳಗಾದ ಮಹಾಜನತೆಯು ತಾವೂ ಎರಡು ಸೆಕಂಡು ಮೌನವನ್ನಾಚರಿಸಿ, ತಲೆ ತಗ್ಗಿಸಿ, ಕಷ್ಟ ಪಟ್ಟು ಎರಡು ಹನಿ ಕಣ್ಣೀರು ಹರಿಸಿದರು. ಸಾಮ್ರಾಟರು ಭಯೋತ್ಪಾದಕರ ದಾಳಿಯಲ್ಲಿ ಮಡಿದವರಿಗೋ, ಶ್ರೀಮಂತರ ಕಾರುಗಳಿಗೆ ರಕ್ತ ತರ್ಪಣ ಅರ್ಪಿಸಿದವರಿಗೋ, ದರೋಡೆಕೋರರಿಂದ ಬದುಕುವ ಹಕ್ಕನ್ನು ಕಳೆದುಕೊಂಡವರಿಗೋ ಗೌರವ ಸೂಚಿಸುವುದಕ್ಕಾಗಿ ಕಂಬನಿ ಮಿಡಿದಿದ್ದಾರೆ ಎಂದು ತಿಳಿದಿತ್ತು ಜನತೆ. ಆದರೆ ಸಾಮ್ರಾಟರನ್ನು ಪಕ್ಕಕ್ಕೆಳೆದ ಕುಚೇಲ ಅವರ ಕಣ್ಣಲ್ಲಿ ಬಿದ್ದಿದ್ದ ಧೂಳನ್ನು ಊದಿ ತೆಗೆದು ಅವರ ಹರ್ಷೋದ್ಘಾರದ ಕಣ್ಣೀರ ಧಾರೆಯನ್ನು ಬಂದ್ ಮಾಡಿದ. ಆದರೆ ಮಹಾ ಜನತೆ ಮಾತ್ರ ತಮ್ಮ ಮಾನಸ ಮಂದಿರದಲ್ಲಿ ಪ್ರತಿಷ್ಠಾಪಿಸಿದ ನಗೆ ಸಾಮ್ರಾಟರ ಕಣ್ಣೀರಿನ ವಿಶ್ವಾಸಾರ್ಹತೆಯನ್ನು ಪರೀಕ್ಷಿಸುವ ಉದ್ಧಟತನಕ್ಕೆ ಕೈ ಹಾಕಲಿಲ್ಲ. enews_party_hat

ವೇದಿಕೆಯ ಮೇಲಿದ್ದ ಗಣ್ಯರಲ್ಲೇ ಅತಿ ಗಣ್ಯರಾದ ನಾವು ಮೊದಲು ಮಾತಾಡಿ ನಗೆ ನಗಾರಿ ಡಾಟ್ ಕಾಮ್ ಒಂದು ವರ್ಷ ಪೂರೈಸಿರುವುದು ದೊಡ್ಡ ಸಾಧನೆ. ಇಂದು ಸರಕಾರಗಳು ನೂರು ದಿನ ಪೂರೈಸಿದ್ದಕ್ಕೇ ರಾಜ್ಯ ಮಟ್ಟದ ಪತ್ರಿಕೆಗಳಿಂದ ಹಿಡಿದು ಸಂಪಾದಕ, ಪ್ರಕಾಶಕ ಹಾಗೂ ಮುದ್ರಕರ ನಡುವೆ ಖಾಸಗಿಯಾಗಿ ಪ್ರಸಾರ ಹೊಂದಿರುವ ‘ಜಾಗತಿಕ’ ಪತ್ರಿಕೆಗಳವರೆಗೆ ಪ್ರತಿಯೊಂದರಲ್ಲೂ ಪುಟಗಟ್ಟಲೆ ಜಾಹೀರಾತು ನೀಡಿ ಬೆನ್ನು ತಟ್ಟಿಸಿಕೊಳ್ಳುತ್ತವೆ. ತಮ್ಮ ಸರಕಾರದ ಸಾಧನೆಗಳ ವಿಷಯವನ್ನು ಜನರ ಮುಂದಿಡುವಾಗ ನೂರು ದಿನ ಪೂರೈಸಿದ್ದೂ ಬಹುದೊಡ್ಡ ಸಾಧನೆ ಎಂದು ಹೇಳಲು ಮರೆಯುವುದಿಲ್ಲ. ನೂರು ದಿನ ಪೂರೈಸುವುದು ಸಾಮಾನ್ಯ ಸಂಗತಿಯೇ? ಯಾಮಾರಿದ್ರೆ ಕುರ್ಚಿ ಎಳೆಯಲು ಕಾದಿರುವ ಪ್ರತಿಪಕ್ಷಗಳು, ಕೈ ಕಾಲು ಮುಂತಾದವನ್ನು ಬಿಸಿ ಮಾಡುವಲ್ಲಿ ಕೊಂಚ ಆಲಸ್ಯವನ್ನು ತೋರಿದರೆ ಬೆಣ್ಣೆಯಂತೆ ಕರಗಿ ಬೇರೆಯವರ ತಟ್ಟೆಗೆ ಬೀಳುವ ಸ್ವಂತ ಪಕ್ಷ ಬಾಂಧವರು- ಇವರನ್ನೆಲ್ಲಾ ಸಂಭಾಳಿಸುತ್ತಾ ನೂರು ದಿನ ಪೂರೈಸುವುದು ಹನ್ನೊಂದು ಮಂದಿ ಎದುರಾಳಿಗಳು ಹಾಗೂ ಇಬ್ಬರು ಅಂಪೈರುಗಳು ಜೊತೆಗೆ ಒಬ್ಬ ತನ್ನದೇ ತಂಡದ ದಾಂಡಿಗನ ವಿರುದ್ಧ ಹೋರಾಡಿ ಸೆಂಚುರಿ ಹೊಡೆಯುವ ಕ್ರಿಕೆಟ್ ಆಟಗಾರನ ಸಾಧನೆಯಷ್ಟೇ ಪ್ರಯಾಸದಾಯಕವಾದದ್ದು. ಐದು ದಿನ ಹತ್ತು ದಿನ, ಹದಿನೈದು ದಿನ ಚಿತ್ರ ಮಂದಿರಗಳಲ್ಲಿ ಪ್ರೇಕ್ಷಕರನ್ನು ಹಿಂಸಿಸುವಲ್ಲಿ ಯಶಸ್ವಿಯಾದ ಸಿನೆಮಾಗಳು ಸಹ ಪತ್ರಿಕೆಗಳಲ್ಲಿ, ಜನರ ಮೂತ್ರವನ್ನು ಸವಿಯುವ ಗೋಡೆಗಳ ಮೇಲೆ ದೊಡ್ಡ ದೊಡ್ಡ ಜಾಹೀರಾತು, ಪೋಸ್ಟರ್‍ಗಳ ರೂಪದಲ್ಲಿ ತಮ್ಮ ಸಾಧನೆಯನ್ನು ಡಂಗೂರ ಬಾರಿಸಿ ಸಾರುತ್ತವೆ. ಹೀಗಿರುವಾಗ ಒಂದು ವರ್ಷ ಪೂರೈಸಿದ ನಮ್ಮ ಸಾಧನೆ ಯಾರಿಗೂ ಕಡಿಮೆಯಾದುದಲ್ಲ.

ಈ ಒಂದು ವರ್ಷದಲ್ಲಿ ನಾವು ಗಳಿಸಿದ ‘ಒದೆತಗಳು’, ನಾವು ಸಂಪಾದಿಸಿದ ಅಭಿಮಾನಿಗಳು, ಭಕ್ತರು, ಭಕ್ತೆಯರನ್ನು ಒಂದು ಕ್ಷಣ ನೆನೆಸಿಕೊಂಡೆವು. ಆದರೆ ಈ ಒಂದು ವರ್ಷದಲ್ಲಿ ನಾವು ನಿರೀಕ್ಷಿತ ಮಟ್ಟದಲ್ಲಿ ಶತ್ರುಗಳನ್ನು ಸಂಪಾದಿಸಲು ಸಾಧ್ಯವಾಗಲಿಲ್ಲ. ಆ ಮೂಲಕ ಲೇಖನಿ ಖಡ್ಗಕ್ಕಿಂತ ಹರಿತ ಎಂಬ ಮಾತನ್ನು ಪರೀಕ್ಷಿಸಿ ನೋಡಲು ತಕ್ಕುದಾದ ಅವಕಾಶದಿಂದ ವಂಚಿತರಾಗಬೇಕಾಯಿತು. ಆತ್ಮಾವಲೋಕನ ಹಾಗೂ ಸತ್ಯಾನ್ವೇಣೆಗಳೇ ನಮ್ಮ ಜನ್ಮ ಸಿದ್ಧ ಗುಣಗಳಾಗಿರುವುದರಿಂದ ನಾವು ಮಾಡಿದ ಸಾಧನೆಯ ಜೊತೆಗೆ ನಾವು ಎಡವಿದ್ದೆಲ್ಲಿ ಎಂಬುದೂ ನಮಗೆ ತಿಳಿದಿದೆ. ಮುಂದಿನ ದಿನಗಳಲ್ಲಿ ನಮ್ಮ ಭಕ್ತ ವೃಂದ, ಭಜನಾ ಮಂಡಳಿಯ ಜೊತೆಗೆ ನಾವು ಹೆಚ್ಚಿನ ಗಮನವನ್ನು ನಮ್ಮ ಶತ್ರುಪಡೆಯನ್ನು ಸೃಷ್ಟಿಸಿಕೊಳ್ಳುವುದರಲ್ಲೂ ವಿನಿಯೋಗಿಸಲಿದ್ದೇವೆ. ಇಷ್ಟು ದಿನ ನಾಟಕ ರಂಗದಲ್ಲಿ ಜನರನ್ನು ರಂಜಿಸಲೆಂದು ನಾವು ನುಡಿಸುತ್ತಿದ್ದ ನಗಾರಿ ಇನ್ನು ಮುಂದೆ ಯುದ್ಧ ಭೂಮಿಯಲ್ಲಿ ಬಾರಿಸುವ ನಗಾರಿಯೂ ಆಗಲಿದೆ. ಸಾಮ್ರಾಟರು ಪೆನ್ನನ್ನು ಹಿಡಿದು ಯುದ್ಧ ಭೂಮಿಗೆ ಧುಮಕಲಿದ್ದಾರೆ, ಗೆದ್ದರೆ ಜಯ, ಸತ್ತರೆ ವೀರ ಸ್ವರ್ಗ!

ನಗೆ ನಗಾರಿಯಲ್ಲಿನ ಲೇಖನಗಳನ, ಹರಟೆಗಳ, ಸಂದರ್ಶನಗಳ ಗುಣ ಮಟ್ಟ ಹೇಗಿತ್ತು, ಓದುಗರು ಇವುಗಳನ್ನು ಹೇಗೆ ಗ್ರಹಿಸಿದರು, ಅವರು ಗುರುತಿಸಿದ ದೋಷಗಳು ಯಾವುವು, ಅವರ ಸಲಹೆಗಳೇನು, ಮುಂದೆ ಇದು ಹೇಗೆ ನಡೆಯಬೇಕು ಎಂದು ನಿರೀಕ್ಷಿಸುತ್ತಿರುವಿರಿ ಎಂದೆಲ್ಲಾ ನಾವು ಓದುಗರನ್ನು ಕೇಳಬೇಕೆಂದುಕೊಂಡಿದ್ದೆವು. ಆದರೆ ಈ ಮೊದಲೇ ತಮ್ಮ ಧಾರಾವಾಹಿಗಳಿಗೆ ಸಂವಾದಗಳನ್ನು ಏರ್ಪಡಿಸಿ ಟಿ.ಆರ್.ಪಿ ಗಗನಕ್ಕೇರಿಸಿಕೊಂಡ ಸೀತಾರಾಂರ ಪದ್ಧತಿಯನ್ನು ಕಾಪಿ ಮಾಡಿದಂತಾಗುತ್ತದೆಂದು ತಿಳಿದು ಅವರ ಹಾಗೆಯೇ ‘ಇಂದಿನ ಪುಟ್ಟಣ್ಣ ಕಣಗಾಲ್’ ಪಟ್ಟದ ಆಕಾಂಕ್ಷಿಯಾಗಿರುವ ನಾವು ಅದನ್ನು ಕೈಬಿಟ್ಟೆವು. ಆದರೆ ಆ ಸಂವಾದವನ್ನು ಇಲ್ಲಿ ನಮ್ಮ ಬ್ಲಾಗಿನಲ್ಲಿ ಮುಂದುವರೆಸಲಡ್ಡಿಯಿಲ್ಲ. ಒಂದು ವರ್ಷಗಳಿಂದ ಶ್ರದ್ಧಾ ಭಕ್ತಿಯಿಂದ ನಮ್ಮ ಬ್ಲಾಗನ್ನು ಪೂಜಿಸಿದ ಆರಾಧಿಸಿದ, ಪ್ರತಿದಿನ ನಮ್ಮ ನಾಮಸ್ಮರಣೆಯನ್ನು ಮಾಡುತ್ತಾ, ಇಲ್ಲಿನ ಪುರಾಣ ಪಠಣ-ಶ್ರವಣವನ್ನು ಮಾಡುತ್ತಾ ಲೋಡುಗಟ್ಟಲೆ ಪುಣ್ಯ ಸಂಪಾದಿಸಿದ ಓದುಗರೇ ನಿಮ್ಮ ಅನಿಸಿಕೆಗಳನ್ನು ಇಲ್ಲಿ ಹಂಚಿಕೊಳ್ಳಬಹುದು. ನಿಮ್ಮ ಸಲಹೆಗಳನ್ನು, ಅಭಿಪ್ರಾಯಗಳನ್ನು, ಅನಿಸಿಕೆಗಳನ್ನು ಖುದ್ದು ಸಾಮ್ರಾಟರಿಗೆ ತಿಳಿಸಬಹುದು. ನಿಮ್ಮ ಯಾವುದೇ ಪ್ರತಿಕ್ರಿಯೆಯನ್ನು ಸೆನ್ಸಾರ್ ಮಾಡುವುದಿಲ್ಲ ಎಂಬ ಭರವಸೆಯನ್ನು ನಾವು ನೀಡುತ್ತಿದ್ದೇವೆ.

ಅಂದ ಹಾಗೆ ವಾರ್ಷಿಕೋತ್ಸವಕ್ಕೆಂದು ನಾವು ವಿಶೇಷ ಸಂಚಿಕೆಯೊಂದನ್ನು ರೂಪಿಸುವ ಯೋಜನೆ ಹಾಕಿಕೊಂಡಿದ್ದೆವು. ಕನ್ನಡ ನಾಡಿನ ಹೆಸರಾಂತ ಬರಹಗಾರರಿಂದ ಲೇಖನಗಳನ್ನು, ಬರಹಗಳನ್ನು ಆಹ್ವಾನಿಸಿದ್ದೆವು. ಅವುಗಳು ಒಂದೊಂದಾಗಿ ನಗೆ ನಗಾರಿಯಲ್ಲಿ ಪ್ರಕಟವಾಗಲಿವೆ. ಪ್ರಕಟಿಸುವ ಖುಶಿ ನಮ್ಮದಾದರೆ ಓದುವ ಕರ್ಮ ನಿಮ್ಮದು!

ಏನೇ ಅನ್ನಿ, ನಿಮ್ಮ ಅನುಪಸ್ಥಿತಿಯಿಂದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು!

– ನಗೆ ಸಾಮ್ರಾಟ್

ಆಂಡ್ ದಿ ವಿನ್ನರ್ ಈಸ್…

28 ಜನ

 

ನಗೆ ನಗಾರಿ ಡಾಟ್ ಕಾಮ್‌ನ ಮೊದಲನೇ ವರ್ಷದ ಹುಟ್ಟುಹಬ್ಬ ಭಾರಿ ಸಂಭ್ರಮ, ಸಡಗರದಿಂದ ನಡೆಯಿತು. ಕಾರ್ಯಕ್ರಮಕ್ಕೆ ಹಾಜರಾಗಿದ್ದ ಎಲ್ಲರೂ ಸಾಮ್ರಾಟರ ಪ್ರತಿಭೆಯನ್ನು ಹಾಡಿ ಹೊಗಳಿ ಅವರ ಕೃಪೆಗೆ ಪಾತ್ರರಾದರು. ಕಾರ್ಯಕ್ರಮದ ನಂತರ ಆಯೋಜಿಸಲಾಗಿದ್ದ ಭೂರಿ ಭೋಜನವನ್ನು ಸಾಂಗವಾಗಿ ಪೂರೈಸಿದ ಗಣ್ಯರು ಅಡುಗೆ ಭಟ್ಟನಾಗಿದ್ದ ಕುಚೇಲನನ್ನೂ ಹೊಗಳಿದ್ದು ಸಾಮ್ರಾಟರನ್ನು ಕೆರಳಿಸಿತು. ಕಾರ್ಯಕ್ರಮದ ಬಗ್ಗೆ ನಮ್ಮ ಚೇಲ ಕುಚೇಲ ಹಾಗೂ ನಮ್ಮ ಗತಕಾಲದ ಗೆಳೆಯ ತೊಣಚಪ್ಪನವರು ಸವಿವರವಾದ ವರದಿಯನ್ನು ನೀಡಲಿದ್ದಾರೆ. ನಾವು ಈಗ ನಮ್ಮ ಸ್ಪರ್ಧೆಗಳ ವಿಜೇತರನ್ನು ಘೋಷಿಸಲಿದ್ದೇವೆ…

ಮೊದಲ ಬಹುಮಾನ

    ಸುಮಂತ ಶ್ಯಾನುಭಾಗ್ ವಿ a8b16d3e86eadc69a51d78a122c66dd4

ಜವಾಹರ್ ಲಾಲ್ ಮೋಜುಗಾರ ಯೋಜನೆ

ಸುಟ್ಟಾ ಬಾಯೊಳಗಿರಲು ಪಟ್ಟದಲಿ ಕೂತಿರಲು
ಮೌಂಟ ಬ್ಯಾಟನನ ಪತ್ನಿ ಬದಿಗಿರಲು
ಸಿಗರೇಟಿಗೆ ಕಿಚ್ಚು ಹಚ್ಚೆಂದ –ಜವಾಹರ

ಎರಡನೆಯ ಬಹುಮಾನ

    ಹೇಮಾ ಪವಾರ್96e77817e277fabb383026ac478b4448

ಮೋಡಗಳು ತೇಲುತಿವೆ ಆಕಾಶದಲ್ಲಿ,
ಕನಸಿನಲ್ಲಿ ಮುಳುಗಿದೆ ಲೊಕವಿಡೀ,
ದೇಶಕ್ಕೋ ಸ್ವಾತಂತ್ರ್ಯದ ಹುಚ್ಚು,
ಗಾಂಧೀಜಿಗೆ ಉಪವಾಸ ಅಚ್ಚುಮೆಚ್ಚು,
ನೀ ತಲೆಕೆಡಿಸಿಕೊಳ್ಳಬೇಡ, ಸಿಮೋನ್ ಳ ಸಿಗರೇಟಿಗೆ ಬೆಂಕಿ ಹಚ್ಚು!!!

ಮೂರನೆಯ ಬಹುಮಾನ

      ಕೆ.ಎ.ಭಟ್ 4e696b4158f090a9705f17ba61ba649d

ಸಿಗರೇಟ್ ಸೇದಲು ಆಸೆಯೆ ನಿನಗೆ
ಕಲಿಸುವೆ ನಾನು ಬಾ ಬಳಿಗೆ.

ಕಲಿಸುವ Coach ನಾನಿರಲು ಸಂಕೋಚವ ಬಿಡು ನೀನು
ಹ್ಹಾ ಸೇದು, ಏನಾಗದು ನೋಡು ಜೊತೆ ಇರುವೆನು ನಾನು.

 

ಸಮಾಧಾನಕರ ಬಹುಮಾನಗಳು:

ಸುಂದರನಾಡು    93e42269f5d464b0748141ef88011861

”ಹಚ್ಚಿಕೊಳ್ಳಮ್ಮಬೇಗ ಗಾಂಧೀಜಿ ಬಂದ್ರೆ ನಮ್ಮನ್ನ ಸುಟ್ಟಾಕ್ತಾರೆ. ಆ ಸ್ವಾಮಿ ಸಿಗರೇಟ್ ಕಂಡ್ರೆ ಉರಿತಾರೆ.”

ಪ್ರಸಾದ್aeb8ee73e9dffd8a9cb2aa01a1d98a44

“ಜನರಿಗೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಅಂತ ನಾವು ನಿರ್ಧಾರ ಮಾಡಬೇಕಿದೆ. ಒಂದು ಕೈ ನೋಡಿಬಿಡೋಣ, ಅಲ್ವೇ ????”

 

ತಮ್ಮ ಪ್ರತಿಕ್ರಿಯೆಗಳ ಜೊತೆಗೆ ಇ-ಮೇಲ್ ವಿಳಾಸವನ್ನು ನೀಡಿದವರಿಗೆ ಮಾತ್ರ ಬಹುಮಾನಗಳನ್ನು ಕಳುಹಿಸಿಕೊಡಲಾಗುವುದು. ಇ-ಮೇಲ್ ವಿಳಾಸ ನೀಡದಿದ್ದವರು ತಪ್ಪೊಪ್ಪಿಗೆ ಪತ್ರದ ಜೊತೆಗೆ ಸಾಮ್ರಾಟರಿಗೆ ಒಂದು ಪತ್ರ ಬರೆಯ ತಕ್ಕದ್ದು!!

 

(‘ಜೋಕು’ಮಾರ ಸ್ಪರ್ಧೆಯಲ್ಲಿ ಯಾವ ವೀರರೂ ಭಾಗವಹಿಸದ ಕಾರಣ ಆ ಬಹುಮಾನಗಳೆಲ್ಲವನ್ನೂ ಸಾಮ್ರಾಟರು ತಮಗೆ ತಾವೇ ಕೊಟ್ಟುಕೊಂಡಿದ್ದಾರೆ. ಹಾಗೂ ಪ್ರಪಂಚಕ್ಕೊಬ್ಬನೇ ‘ಜೋಕು’ಮಾರ ಎಂಬುದನ್ನು ಸಾಬೀತು ಪಡಿಸಿದ್ದಾರೆ)

** (ಬಹುಮಾನಗಳ ಬಗ್ಗೆ ತಕರಾರು ಇರುವವರು ಮೈರ್ಲೇಸರಪುರ ಕೋರ್ಟಿನ ವ್ಯಾಪ್ತಿಯಲ್ಲಿ ಮಾತ್ರ ಮೊಕದ್ದಮೆ ಹೂಡತಕ್ಕದ್ದು. ಬೇರೆಡೆ ಕೇಸು ಹಾಕಿಕೊಂಡು ಕೂತರೆ ಅದಕ್ಕೆ ನಾವು ಜವಾಬ್ದಾರರಲ್ಲ!)

‘ಚಿತ್ರ’ಗುಪ್ತ ಸ್ಪರ್ಧೆ

14 ಜನ

ನಗೆ ನಗಾರಿಯ ಹುಟ್ಟು ಹಬ್ಬದ ಸಂಭ್ರಮಕ್ಕೆ ನಿನ್ನೆ ತಿಳಿಸಿದ ಹಾಗೆ ಕಾರ್ಯಕ್ರಮಗಳ ಆಯೋಜನೆ ಶುರುವಾಗಿದೆ.

ಮೊದಲ ಹಂತವಾಗಿ ‘ಚಿತ್ರ ಗುಪ್ತ’ ಸ್ಪರ್ಧೆಯನ್ನು ನಡೆಸಲು ತೀರ್ಮಾನಿಸುತ್ತಿದ್ದೇವೆ. ಇಲ್ಲಿ ಕೊಟ್ಟಿರುವ ಚಿತ್ರಕ್ಕೆ ಅತ್ಯಂತ ಮೊನಚಾದ, ಹಾಸ್ಯಯುಕ್ತವಾದ, ವ್ಯಂಗ್ಯೋಕ್ತಿಯೊಂದನ್ನು ನೀಡಬೇಕು. ನಿಮ್ಮ ಸಾಲು ಆದಷ್ಟು ಚಿಕ್ಕದಿರಲಿ, ಚಿಕ್ಕದಾಗಿರಲಿ.

ನಮ್ಮ ಹೆಸರಾಂತ ಅನಾಮಧೇಯ ತೀರ್ಪುಗಾರರು ನಿಮ್ಮ ಸಾಲುಗಳನ್ನು ಡಿಸೆಕ್ಟ್ ಮಾಡಲು ಸಿದ್ಧರಾಗಿ ನಿಂತಿದ್ದಾರೆ.

1902sund-3

ನಿಮ್ಮ ಚಾಟೋಕ್ತಿಗಳನ್ನು ಈ ಬರಹಕ್ಕೆ ಕಮೆಂಟ್ ಹಾಕುವುದರ ಮೂಲಕ ತಿಳಿಸಬಹುದು. ಕಮೆಂಟು ಯಾವ ಹೆಸರಲ್ಲಾದರೂ ಬರೆಯಿರಿ ಆದರೆ ಸಂಪರ್ಕಕ್ಕಾಗಿ ನಿಮ್ಮ ಇಮೇಲ್ ವಿಳಾಸವನ್ನು nagesamrat@gmail.com ಗೆ ಕಳುಹಿಸಿದರೆ ಚೆನ್ನ. ಜನವರಿ ಇಪ್ಪತ್ತೈದರವರೆಗೆ ಸಮಯ ಉಂಟು… 🙂

– ನಗೆ ಸಾಮ್ರಾಟ್

ಇದುವರೆಗಿನ ಚಾಟೊಕ್ತಿಗಳು ಹಾಗು ಚಾಟಿ ಚತುರರು!

ಇನ್ಮೇಲೆ ಮಕ್ಕಳ ದಿನಾಚರಣೆಗೆ ಚಾಕ್ಲೇಟ್ ಬದಲು ಸಿಗರೇಟು ಬೆಂಕಿಪೊಟ್ಟಣಾನೇ ಕೊಡಬಹುದೇನೋಪ….

– ನವಿಲುಗರಿ ಸೋಮು

ಸ್ಮೋಕಿಂಗ್ ಈಸ್ ನಾಟ್ ಬ್ಯಾಡ್ ಅಂತ advertisement ಕೊಡಬಹುದು ಈ ಪಿಕ್ಚರ್ ಹಾಕಿ..

-ನಾಗರಾಜ್ ದೇವರಮನಿ

ಜವಾಹರ್ ಲಾಲ್ ಮೋಜುಗಾರ ಯೋಜನೆ

ಸುಟ್ಟಾ ಬಾಯೊಳಗಿರಲು ಪಟ್ಟದಲಿ ಕೂತಿರಲು
ಮೌಂಟ ಬ್ಯಾಟನನ ಪತ್ನಿ ಬದಿಗಿರಲು
ಸಿಗರೇಟಿಗೆ ಕಿಚ್ಚು ಹಚ್ಚೆಂದ -ಜವಾಹರ

-ಸುಮಂತ್ ಶಾನಭಾಗ್.ವಿ


”ಹಚ್ಚಿಕೊಳ್ಳಮ್ಮಬೇಗ ಗಾಂಧೀಜಿ ಬಂದ್ರೆ ನಮ್ಮನ್ನ ಸುಟ್ಟಾಕ್ತಾರೆ. ಆ ಸ್ವಾಮಿ ಸಿಗರೇಟ್ ಕಂಡ್ರೆ ಉರಿತಾರೆ.”

– ಸುಂದರ ನಾಡು

ಮೋಡಗಳು ತೇಲುತಿವೆ ಆಕಾಶದಲ್ಲಿ,
ಕನಸಿನಲ್ಲಿ ಮುಳುಗಿದೆ ಲೊಕವಿಡೀ,
ದೇಶಕ್ಕೋ ಸ್ವಾತಂತ್ರ್ಯದ ಹುಚ್ಚು,
ಗಾಂಧೀಜಿಗೆ ಉಪವಾಸ ಅಚ್ಚುಮೆಚ್ಚು,
ನೀ ತಲೆಕೆಡಿಸಿಕೊಳ್ಳಬೇಡ, ಸಿಮೋನ್ ಳ ಸಿಗರೇಟಿಗೆ ಬೆಂಕಿ ಹಚ್ಚು!!!

-ಹೇಮಾ ಪವಾರ್

“ಜನರಿಗೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಅಂತ ನಾವು ನಿರ್ಧಾರ ಮಾಡಬೇಕಿದೆ. ಒಂದು ಕೈ ನೋಡಿಬಿಡೋಣ, ಅಲ್ವೇ ????”

ಪ್ರಸಾದ್

ಸಿಗರೇಟ್ ಸೇದಲು ಆಸೆಯೆ ನಿನಗೆ
ಕಲಿಸುವೆ ನಾನು ಬಾ ಬಳಿಗೆ.

ಕಲಿಸುವ Coach ನಾನಿರಲು ಸಂಕೋಚವ ಬಿಡು ನೀನು
ಹ್ನಾ ಸೇದು, ಏನಾಗದು ನೋಡು ಜೊತೆ ಇರುವೆನು ನಾನು.

– ಕೆ.ಎ.ಭಟ್

(………ಬೇಗನೇ ನಿಮ್ಮ ಚಾಟೋಕ್ತಿ ಒಗಾಯಿಸಿ… ಕಾಲ ಕಳೆದ ಮೇಲೆ ಪರಿತಪಿಸಬೇಡಿ! )