ನಾವು ಮಾಡುವ ತಪ್ಪನ್ನು ನಮಗಿಂತಾ ಚೆನ್ನಾಗಿ ಯಾರ್ಯಾರು ಮಾಡಿದ್ದಾರೆ ಎಂದು ವಿವರವಾಗಿ ದಾಖಲಿಸುವ ಕಲೆಯನ್ನೇ ವಿಮರ್ಶೆ ಎನ್ನುವುದು. ನಮ್ಮ ಪ್ರಮುಖ ಪತ್ರಿಕೆಗಳು ಇದನ್ನು ಮಿರ್ಚಿ, ಮಸಾಲಾ ಹೆಸರಿನಲ್ಲಿ ಮಾಡುತ್ತಿವೆ. ಪ್ರತಿ ಸಂಚಿಕೆಯಲ್ಲಿ ಇದನ್ನೇ ನಾವು ‘ಬ್ಲಾಗ್ ಬೀಟ್’ ಹೆಸರಿನಲ್ಲಿ ಮಾಡುತ್ತಿದ್ದೇವೆ.
ನಮ್ಮ ವಿಮರ್ಶೆಯ ಮೊನೆಗೆ ನಿಮ್ಮ ಬ್ಲಾಗೂ ತಾಕಬೇಕೆಂದಿದ್ದರೆ ಇಲ್ಲೊಂದು ಕಮೆಂಟ್ ಹಾಕಿ.
……………………..
ಬೊಗಳೆ
‘ಸ್ವಂತ ಮನೆ’ಯನ್ನು ಕಟ್ಟಿಕೊಳ್ಳುವುದರಲ್ಲಿ ಮಜಾವಾಣಿ ಆಯ್ತು ಈಗ ಬೊಗಳೆಯ ಸರದಿ! ನಾವಿನ್ನೂ ವರ್ಡ್ ಪ್ರೆಸ್ಸೆಂಬ ಮನೆ ಮಾಲೀಕನ ಮರ್ಜಿಯಲ್ಲಿ ಬದುಕುತ್ತಾ ಬಾಡಿಗೆ ಮನೆ ಸೊಗಸು ನೀವೇನು ಬಲ್ಲಿರಿ, ಈ ಜಗತ್ತೇ ಬಾಡಿಗೆ ಮನೆ, ಈ ದೇಹ ಬಾಡಿಗೆ ಮನೆ… ಬಾಡಿಗೆತನಕ್ಕೆಲ್ಲಿ ಕೊನೆ ಎಂದು ದೇವದಾಸ ಪದ ಹಾಡಿಕೊಳ್ಳುತ್ತಾ ಇದ್ದೇವೆ.
ಸ್ವಂತ ಮನೆ ಕಟ್ಟಿಕೊಂಡಿರುವ ಬೊಗಳೆಯಲ್ಲಿ ಎಂಪಿಗಳು ಎಮ್ಮೆಗಳಾಗಲು ಒಪ್ಪಲಿಲ್ಲವೇಕೆ ಎಂಬ ವರದಿಯಿದೆ.
ಮೋಟುಗೋಡೆ
ಮೋಟುಗೋಡೆಗೆ ಎದುರಾಗಿ ಚಲ್ಲಣವಿಲ್ಲದ ಚೋಟುಗಳನ್ನು ನಿಲ್ಲಿಸಿ ನೋಡಿಕೊಳ್ಳಿ ಎಂದು ಸವಾಲೆಸೆದು ತಲ್ಲಣ ಸೃಷ್ಟಿಸಿರುವ ಮೋಟುಗೋಡೆ ಬ್ಲಾಗಿನಲ್ಲಿ ಖ್ಯಾತರು ಮೋಟುಗೋಡೆಯನ್ನು ಜಿಗಿದು ಮಾಡಿದ ಸಾಹಸದ ದಾಖಲಾತಿ ಮುಂದುವರೆದಿದೆ. ಗಂಗಾಧರ ಚಿತ್ತಾಲರ, ಅಡಿಗರ ಗೋಡೆ ದಾಟಿದ ಸಾಹಸಗಳು ಇಲ್ಲಿವೆ ೧ ೨.
ಕೆಂಡಸಂಪಿಗೆ
ಮುದ್ರಣಕ್ಕೆ ಕಾಗದವನ್ನು ಬಳಸದ, ವರದಿಗಾರರಿಗೆ, ಬರಹಗಾರರಿಗೆ , ಅನಾಮಿಕ ಕಮೆಂಟುದಾರರಿಗೆ ಟಿಎ, ಡಿಎ, ಬಾಟಾ ಕೊಡದ ಕೆಂಡಸಂಪಿಗೆಯಲ್ಲಿ ಕಾಸ್ಟ್ ಕಟಿಂಗ್ ನಡೆಯುತ್ತಿದೆಯಾ ಎಂಬ ಸಂಶಯ ಸಾಮ್ರಾಟರಿಗೆ ಬಂದಿದೆ.
ಜಗತ್ತಿನಾದ್ಯಂತ ಪತ್ರಿಕೆಗಳು ತಮ್ಮ ಹೆಚ್ಚುವರಿ ವರದಿಗಾರರನ್ನು, ಪ್ರೂಫ್ ತಿದ್ದುವ ಬುದ್ಧಿವಂತರನ್ನು ಮನೆಗೆ ಕಳಿಸುತ್ತಿದ್ದರೆ ಕೆಂ.ಸಂದಲ್ಲಿ ಅಪ್ರತಿಮ ವರದಿಗಾರ ಸುದ್ದಿ ಕ್ಯಾತನನ್ನೇ ಹೊರಗೆ ಅಟ್ಟಲಾಗಿದೆ.
ಈ ಬಗ್ಗೆ ಕೆಂ.ಸಂದ ಅತಿಥಿ ಸಂಪಾದಕರು ಕೊಂಚ ಗಮನ ಹರಿಸಲಿ ಎಂಬುದು ನಗೆ ಸಾಮ್ರಾಟರ ಕೋರಿಕೆ.
ಇನ್ನು ಅತಿಥಿ ಸಂಪಾದಕರ ಹೊಸತೊಂದು ಐಡಿಯಾ ಬಗ್ಗೆ ನಮ್ಮ ಸಂಪೂರ್ಣ ಬೆಂಬಲವಿದೆ.
ಇತ್ತೀಚಿನ ಪ್ರಜಾ ಉವಾಚ